- ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಸಭೆ
ಹಳೇ ಪಿಂಚಣಿ ಯೋಜನೆ ಮರುಜಾರಿಗೆ ಒತ್ತಾಯಿಸಿ ಬರುವ ಜನವರಿಯಲ್ಲಿ ರಾಜ್ಯಾದ್ಯಂತ ಹೋರಾಟ ಆರಂಭಿಸುವುದು ಸೇರಿದಂತೆ 3 ಪ್ರಮುಖ ನಿರ್ಣಗಳನ್ನು ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಲಾಯಿತು.
ನಗರದ ವಿದ್ಯಾನಗರದಲ್ಲಿರುವ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ, ಬೆಂಗಳೂರು ಮತ್ತು ದಾವಣಗೆರೆ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ ಸಂಘದ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯಗಳನ್ನು ಕೈಗೊಳ್ಳಲಾಯಿತು.ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ 500ಕ್ಕೂ ಹೆಚ್ಚು ಪದಾಧಿಕಾರಿಗಳೊಂದಿಗೆ ನಡೆಸಿದ ಚರ್ಚೆ, ಸಲಹೆ ಮತ್ತು ಅಭಿಪ್ರಾಯ ಆಲಿಸಿದ ನಂತರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ್ ತೇಜ್ ಅವರು ಮಂಡಿಸಿದ ನಿರ್ಣಯಗಳನ್ನು ಸಭೆ ಸರ್ವಾನುಮತದಿಂದ ಅಂಗೀಕರಿಸಿತು.
ರಾಜ್ಯ ಸರ್ಕಾರವು ಎನ್‌ಪಿಎಸ್ ಬದಲಿಗೆ ಒಪಿಎಸ್ ಜಾರಿ ಸಾಧ್ಯತೆಗಳ ಕುರಿತು ಪರಿಶೀಲಿಸಲು ರಚಿಸಿರುವ ಸಮಿತಿಯನ್ನು ವಿರೋಧಿಸುವುದು. ಎನ್‌ಪಿಎಸ್ ಯೋಜನೆಯನ್ನು ರದ್ದುಪಡಿಸಿ, ಒಪಿಎಸ್ ಮರುಜಾರಿಗೆ ಸರ್ಕಾರವನ್ನು ಒತ್ತಾಯಿಸಲಾಗುವುದು. ಸರ್ಕಾರಕ್ಕೆ ಸಂಘಟನೆಯಿಂದ ಕಾಲಾವಧಿ ನೀಡಲಾಗುವುದು. ಇದಕ್ಕೆ ಸ್ಪಂದಿಸದಿದ್ದರೆ ಬರುವ ಜನವರಿ 15ರಂದು ರಾಜ್ಯಾದ್ಯಂತ ಹೋರಾಟ ಪ್ರಾರಂಭಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು.
ಕೆಲವರು ರಾಜ್ಯ ಸಕಾರಿ ನೌಕರರ ಸಂಘದ ಹೋರಾಟವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ನಮ್ಮ ಹೋರಾಟದ ಗುರಿ ಎಂದಿಗೂ ನೇರವಾಗಿದೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎನ್‌ಪಿಎಸ್, ಯುಪಿಎಸ್ ಸೇರಿದಂತೆ ಯಾವುದೇ ಪಿಂಚಣಿ ಪದ್ಧತಿ ಜಾರಿಯಾದರೂ ಸರಿಯೇ, ನಮ್ಮ ಹೋರಾಟ ಮಾತ್ರ ಹಳೆ ಪಿಂಚಣಿ ಪದ್ಧತಿ ಮರುಜಾರಿ ಆಗುವವರೆಗೂ ನಿಲ್ಲುವುದಿಲ್ಲ ಎಂದು ಹೇಳಿದರು.
- - - -7ಕೆಡಿವಿಜಿ34ಃ