ಹುಬ್ಬಳ್ಳಿ:ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪುವ ಜತೆಗೆ, ಜನರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲೇ ಆಲಿಸಿ ಪರಿಹರಿಸುವ ವ್ಯವಸ್ಥೆ ರೂಪಿಸಬೇಕು. ಜನರ ಮಧ್ಯೆ ಸರ್ಕಾರ ಇರಬೇಕು. ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚಿಸಿದರು.ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಬೆಳಗಾವಿ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳಿಂದ ಯೋಜನೆಗಳ ಅನುಷ್ಠಾನ, ಫಲಾನುಭವಿಗಳು, ಅರ್ಜಿಗಳ ವಿಲೇವಾರಿ ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.ಶಾಸಕರು ತಮ್ಮ ಕ್ಷೇತ್ರಗಳಲ್ಲಿ ತಿಂಗಳಿಗೆ ಕನಿಷ್ಠ ಎರಡು ಬಾರಿ ಜನರ ಸಮಸ್ಯೆ ಆಲಿಸಬೇಕು. ಗ್ರಾಪಂ, ತಾಪಂ ಹಂತದಲ್ಲೂ ಜನರ ಅಹವಾಲುಗಳಿಗೆ ಸ್ಪಂದಿಸಬೇಕು. ಅಧಿಕಾರಿಗಳು ಪ್ರತಿ ಹಳ್ಳಿಗೂ ಭೇಟಿ ನೀಡಿ ಜನರ ಸಮಸ್ಯೆ ಅರಿತು ಪರಿಹರಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.5ರಿಂದ ಪ್ರಜಾ ಸೇವಾ ಇಲಾಖೆ:ಸೆ. 5ರಂದು ‘ಪ್ರಜಾ ಸೇವಾ ಇಲಾಖೆ’ ಆರಂಭಿಸಲಾಗುವುದು. ಇದೇ ದಿನ ಶಿಕ್ಷಕರ ದಿನಾಚರಣೆಯೂ ಇರುವುದರಿಂದ ಸರ್ಕಾರಿ ಸೇವೆಗಳನ್ನು ಜನರಿಗೆ ಮತ್ತಷ್ಟು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದ ಶಿವಕುಮಾರ, ಕಂದಾಯ ಗ್ರಾಮಗಳಲ್ಲಿ ಮನೆ, ಸೈಟ್ ಸೇರಿದಂತೆ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಸರಳಗೊಳಿಸಲಾಗುವುದು. ‘ಭಾರತ ಜೋಡೊ’ ಆನ್‌ಲೈನ್ ವ್ಯವಸ್ಥೆಯ ಬಳಿಕ ಆಪ್‌ಲೈನ್‌ನಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಬುಧವಾರದಿಂದ ಅರ್ಜಿ ವಿತರಣೆ ಆರಂಭವಾಗಲಿದೆ ಎಂದು ತಿಳಿಸಿದರು.₹130 ಕೋಟಿ ಪಾವತಿ:ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹ ಫಲಾನುಭವಿಗಳಿಗೆ ಈ ವರೆಗೆ ₹130 ಕೋಟಿ ಪಾವತಿಯಾಗಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಪರಿಶೀಲಿಸಿ ಅರ್ಹರಿಗೆ ಮಾತ್ರ ಸೌಲಭ್ಯ ತಲುಪುವಂತೆ ಕ್ರಮಕೈಗೊಳ್ಳಬೇಕು ಎಂದ ಸಿಎಂ, ಗೃಹಜ್ಯೋತಿ ಯೋಜನೆ ಬೇಡ ಎಂದು 3 ಲಕ್ಷ ಜನರು ತಿಳಿಸಿರುವುದನ್ನೂ ಪರಿಗಣಿಸಿ ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.