ಪ್ರಜಾಸೇವೆ ಅರ್ಜಿಗಳ ತ್ವರಿತವಾಗಿ ಪರಿಹರಿಸಿ: ದರ್ಶಾಪುರ

KannadaprabhaNewsNetwork |  
Published : Sep 20, 2026, 02:15 AM IST
ಶಹಾಪುರದ ಆರಬೋಳ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರಜಾಸೇವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾಜಿ ಸಚಿವ, ಶಹಾಪುರ ಶಾಸಕ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು ಮಾತನಾಡುತ್ತಿದ್ದರು. | Kannada Prabha

ಸಾರಾಂಶ

ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸ್ವೀಕೃತವಾದ ಸಾರ್ವಜನಿಕರ ಅರ್ಜಿಗಳನ್ನು ಅಧಿಕಾರಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿಗೊಳಿಸಬೇಕು. ಪ್ರತಿಯೊಂದು ಅರ್ಜಿಯನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ತ್ವರಿತವಾಗಿ ಪರಿಹರಿಸಬೇಕು ಎಂದು ಮಾಜಿ ಸಚಿವ, ಶಹಾಪುರ ಶಾಸಕ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸ್ವೀಕೃತವಾದ ಸಾರ್ವಜನಿಕರ ಅರ್ಜಿಗಳನ್ನು ಅಧಿಕಾರಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿಗೊಳಿಸಬೇಕು. ಪ್ರತಿಯೊಂದು ಅರ್ಜಿಯನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ತ್ವರಿತವಾಗಿ ಪರಿಹರಿಸಬೇಕು ಎಂದು ಮಾಜಿ ಸಚಿವ, ಶಹಾಪುರ ಶಾಸಕ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಜಿಲ್ಲೆಯ ಶಹಾಪುರದ ಆರಬೋಳ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕುಮಟ್ಟದ ಪ್ರಜಾಸೇವೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜನಸಾಮಾನ್ಯರು ತಮ್ಮ ಸಣ್ಣಪುಟ್ಟ ಕೆಲಸಗಳು ಪಂಚಣಿ, ಪಹಣಿ, ಪಡಿತರ ಚೀಟಿ ಸಹಿತ ನಾನಾ ಇಲಾಖೆಗಳ ಸಮಸ್ಯೆಗಳಿಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಮನೆಬಾಗಿಲಲ್ಲೇ ಅಹವಾಲುಗಳನ್ನು ಆಲಿಸಿ ಕಾಲಮಿತಿಯಲ್ಲಿ ಪರಿಹರಿಸಲು ಸರ್ಕಾರ ರೂಪಿಸಿರುವ ಹೊಸ ವ್ಯವಸ್ಥೆಯಾಗಿದೆ. ಆದ್ದರಿಂದ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಕಂಪ್ಯೂಟರ್ ಆಪರೇಟರ್‌ಗಳು ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ದಾಖಲಿಸುವಾಗ ತಪ್ಪಾಗದಂತೆ ಜಾಗೃತಿ ವಹಿಸಬೇಕು ಎಂದು ಹೇಳಿದರು.

ಸರ್ಕಾರವು ಸಾರ್ವಜನಿಕರ ಕುಂದುಕೊರತೆಗಳನ್ನು ತ್ವರಿತವಾಗಿ ಮತ್ತು ಮನೆ ಬಾಗಿಲಲ್ಲೇ ಪರಿಹರಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಪ್ರಮುಖ ಯೋಜನೆ ಪ್ರಜಾಸೇವಾ ಅಭಿಯಾನದಿಂದ ಎಲ್ಲ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸದಿದ್ದರೂ, ನೇರವಾಗಿ ಜನರ ಭಾವನೆಗಳನ್ನು ಅರಿತು ಪರಿಹಾರ ಕಂಡುಕೊಳ್ಳಲು ಇದರಿಂದ ಉತ್ತಮ ಅವಕಾಶ ದೊರೆಯಲಿದೆ ಎಂದು ಶಾಸಕ ದರ್ಶನಾಪುರ ಆಶಾಭಾವ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಂ, ಅಪರ ಜಿಲ್ಲಾಧಿಕಾರಿ ರಮೇಶ ಕೊಲಾರ, ಜಿಲ್ಲಾ ಅಂಗವಿಕಲರ ಅಧಿಕಾರಿ ಶರಣಪ್ಪ, ಜಿಲ್ಲಾ ಕೃಷಿ ಇಲಾಖೆ ಅಧಿಕಾರಿ ರತೇಂದ್ರನಾಥ ಸುಗೂರ, ತೋಟಗಾರಿಕೆ ಉಪ ನಿರ್ದೇಶಕ ರಾಘವೇಂದ್ರ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ. ಮಹೇಶ ಬಿರಾದಾರ, ಜಿಲ್ಲಾ ಬಿಸಿಎಂ ಅಧಿಕಾರಿ ನಾರಾಯಣಕರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚೆನ್ನಬಸವ, ಜಿಲ್ಲಾ ಆಹಾರ ನಾಗರಿಕ ಇಲಾಖೆ ಅಧಿಕಾರಿ ಸೋಮಶೇಖರ ಬಿರಾದಾರ, ತಹಸೀಲ್ದಾರ ಸಿದ್ದರೂಢ ಬನ್ನಿಕೊಪ್ಪ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಸಿದ್ದು ಆರಬೋಳ, ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ, ಪೌರಾಯುಕ್ತ ಕೆ. ಜೀವನಕುಮಾರ, ತಾಲೂಕ ಕೃಷಿ ಸಹಾಯಕ ನಿರ್ದೇಶಕ ಸುನೀಲಕುಮಾರ, ಅಕ್ಷರಾ ದಾಸೋಹ ಅಧಿಕಾರಿ ಮಹಾದೇವಿ, ಹೆಚ್.ಎಸ್ ಸೋಮಪುರ, ಭೂಸೇನಾ ಅಧಿಕಾರಿ ಎಇಇ ಶಶಾಂಕ, ಪರಿಸರ ಅಭಿಯಂತರರಾದ ಹರೀಶ್ ಸಜ್ಜನ್‌ಶೆಟ್ಟಿ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಡಗಾ ಮಠದ ಶ್ರೀ ಸಿದ್ಧರಾಮೇಶ್ವರ 98ನೇ ಜನ್ಮೋತ್ಸವ
ಮುನ್ನೊಳಿ ಪಂಚಾಯಿತಿಯಲ್ಲಿ ಪ್ರಜಾಸೇವೆಗೆ ಚಾಲನೆ