ದೂರುಗಳ ಬಗ್ಗೆ ವಿಳಂಬ ಮಾಡದೇ ಪ್ರಕರಣ ಇತ್ಯರ್ಥ ಪಡಿಸಿ

KannadaprabhaNewsNetwork |  
Published : Oct 15, 2026, 01:45 AM IST
14ಕೆಎಂಎನ್ ಡಿ16 | Kannada Prabha

ಸಾರಾಂಶ

ಸಲ್ಲಿಕೆಯಾಗಿರುವ ದೂರುಗಳ ಬಗ್ಗೆ ಸಭೆಗೆ ಬರುವಾಗ ಮಾಹಿತಿ ತೆಗೆದುಕೊಂಡು ಬರಬೇಕು. ಸುಮ್ಮನೆ ಕೈ ಬೀಸಿ ಬರಬೇಡಿ. ಕಂದಾಯ ಇಲಾಖೆಗೆ ಸೇರಿದ ಅರ್ಜಿಗಳೇ ಹೆಚ್ಚು ಸಲ್ಲಿಕೆಯಾಗಿವೆ. ಕೆಲವು ನ್ಯಾಯಾಲಯದಲ್ಲಿವೆ. ಉಳಿದವನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಸೂಚನೆ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿಕೊಂಡರು.

ಬಹುತೇಕ ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಪಟ್ಟಿದ್ದವು. ಜಮೀನಿನ ಅಳತೆಗೆ ಅರ್ಜಿ ಸಲ್ಲಿಸಿ ಹಲವು ತಿಂಗಳು ಕಳೆದರೂ ಅಳತೆ ಮಾಡಿಕೊಡದ ಬಗ್ಗೆ ಜನರಿಂದ ಸಾಕಷ್ಟು ದೂರುಗಳು ಕೇಳಿ ಬಂದಿದ್ದು, ವಿಳಂಭವಾಗಿರುವ ಪ್ರಕರಣ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಕೆಲ ಇಲಾಖೆಗಳ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲಾ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಮಾತನಾಡಿ, ಅಧಿಕಾರಿಗಳು ಕಾಗೆ ಗೂಬೆ ಕಥೆ ಹೇಳಲು ಬರದೇ ಸಮಸ್ಯೆ ಸ್ಪಂದಿಸಿ ಕೆಲಸ ಮಾಡಿ, ಜನರಿಗೆ ಮೂಲ ಸೌಕರ್ಯ ಕಲ್ಪಿಸಲು ಮುಂದಾಗಬೇಕು. ಕೆಲವು ಕಡೆ ಅರಣ್ಯ ಮತ್ತು ಕಂದಾಯ ಇಲಾಖೆಯ ನಡುವೆ ಭೂ ವ್ಯಾಜ್ಯವಿದೆ. ಅದನ್ನು ಶೀಘ್ರವಾಗಿ ಬಗೆಹರಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ಇಲ್ಲಿ ಸಲ್ಲಿಕೆಯಾಗಿರುವ ದೂರುಗಳ ಬಗ್ಗೆ ಸಭೆಗೆ ಬರುವಾಗ ಮಾಹಿತಿ ತೆಗೆದುಕೊಂಡು ಬರಬೇಕು. ಸುಮ್ಮನೆ ಕೈ ಬೀಸಿ ಬರಬೇಡಿ. ಕಂದಾಯ ಇಲಾಖೆಗೆ ಸೇರಿದ ಅರ್ಜಿಗಳೇ ಹೆಚ್ಚು ಸಲ್ಲಿಕೆಯಾಗಿವೆ. ಕೆಲವು ನ್ಯಾಯಾಲಯದಲ್ಲಿವೆ. ಉಳಿದವನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಸೂಚನೆ ನೀಡಲಾಗಿದೆ. ಭ್ರಷ್ಟಾಚಾರ ಸೇರಿದಂತೆ ಅನೇಕ ದೂರುಗಳನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಿದರೆ ಸೂಕ್ತ ಕ್ರಮ ವಹಿಸಲಾಗುವುದು ಎಂದರು.

ಸರ್ಕಾರಿ ಗೋಮಾಳ ಜಾಗ ಹಾಗೂ ಅರಣ್ಯ ಇಲಾಖೆ ಜಾಗದ ನಡುವಿನ ವಿವಾದಕ್ಕೆ ಸಂಬಂಧಿಸಿದಂತೆ ಜಂಟಿ ಸರ್ವೆ ನಡೆಸದೆ ಏಕಾಏಕಿ ಸರ್ಕಾರಿ ಗೋಮಾಳ ಜಾಗವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸ್ವಾಧೀನ ಪಡೆದುಕೊಂಡಿರುವ ಕುರಿತು ಆಕ್ಷೇಪಿಸಿದರು.

ಜಂಟಿ ಸರ್ವೇ ನಡೆಸಿ ಸೂಕ್ತ ಕ್ರಮ ವಹಿಸಬೇಕು. ಅಲ್ಲದೇ ಪುರಸಭೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗುವುದಿಲ್ಲ ಎಂಬ ದೂರುಗಳಿವೆ. ಹೀಗಾಗಿ ಬಯೋಮೆಟ್ರಿಕ್ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್, ರವಿಕುಮಾರ್, ಬ್ಯಾಟರಾಯ ಗೌಡ, ಲೇಪಾಕ್ಷಮೂರ್ತಿ, ತಹಸೀಲ್ದಾರ್ ಡಾ. ಲೋಕೇಶ್, ತಾ ಪಂ ಇಒ ಶ್ರೀನಿವಾಸ್, ಸೇರಿದಂತೆ ತಾಲ್ಲೂಕು ಮಟ್ಟದ ಬಹುತೇಕ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಸರಾ ಸಂಭ್ರಮಕ್ಕೆ ಮತ್ಸ್ಯಲೋಕದ ಮೆರುಗು
ಸಿದ್ದರಾಮಯ್ಯ ನಿವಾಸಕ್ಕೆ ಸಚಿವ ಕೆ.ಎಸ್.ಬಸವಂತಪ್ಪ ಭೇಟಿ