ಒಂದು ತಿಂಗಳಲ್ಲಿ ವಕ್ಫ್‌ ಆಸ್ತಿಯ ಪ್ರಕರಣಗಳನ್ನು ಪರಿಹರಿಸಿ: ಜಮೀರ ಅಹಮದ್

KannadaprabhaNewsNetwork |  
Published : Sep 03, 2024, 01:40 AM IST
2ಡಿಡಬ್ಲೂಡಿ1ಸೋಮವಾರ ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ಧಾರವಾಡದಲ್ಲಿ ಸಚಿವ ಜಮೀರ ಅಹಮ್ಮದ ವಕ್ಪ ಮತ್ತು ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿದರು.  | Kannada Prabha

ಸಾರಾಂಶ

ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ವಕ್ಫ್‌ ಮತ್ತು ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಸಚಿವ ಜಮೀರ್‌ ಅಹಮದ್‌ ಖಾನ್‌ ನೇತೃತ್ವದಲ್ಲಿ ಧಾರವಾಡದಲ್ಲಿ ನಡೆಯಿತು.

ಧಾರವಾಡ: ಜಿಲ್ಲೆಯಲ್ಲಿ 2453 ವಕ್ಫ್‌ ಆಸ್ತಿಗಳಿದ್ದು, ಅವುಗಳಲ್ಲಿ 481 ಪ್ರಕರಣಗಳು ಮಾತ್ರ ವಿವಿಧ ಹಂತಗಳಲ್ಲಿ ಬಾಕಿ ಇವೆ. ಅವುಗಳನ್ನು ಬೇಗ ಪರಿಹರಿಸಬೇಕು. ಉಳಿದ ಜಿಲ್ಲೆಗಳಿಗೆ ಹೋಲಿಸಿದಾಗ ವಕ್ಫ್‌ ಆಸ್ತಿಗಳ ಸಮೀಕ್ಷೆ, ರಕ್ಷಣೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಉತ್ತಮ ಕೆಲಸವಾಗಿದೆ ಎಂದು ವಸತಿ, ವಕ್ಫ್‌ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ ಅಹಮದ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ವಕ್ಫ್‌ ಮತ್ತು ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿದ ಅವರು, ಧಾರವಾಡ ಜಿಲ್ಲೆಯಲ್ಲಿ 604 ವಕ್ಫ್‌ ಸಂಸ್ಥೆಗಳಿಗೆ 2453 ವಕ್ಫ್‌ ಆಸ್ತಿಗಳಿವೆ. ವಕ್ಫ್‌ ಸಂಬಂಧಿಸಿದಂತೆ ಯಾವ ಆಸ್ತಿಯೂ ಒತ್ತುವರಿ ಆಗಿರುವ ವರದಿ ಇಲ್ಲ. ವಿವಿಧ ಹಂತಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅಧಿಕಾರಿಗಳು ಮುಕ್ತಾಯಗೊಳಿಸಬೇಕು ಎಂದು ಹೇಳಿದರು.

ವಸತಿ ಯೋಜನೆಯಡಿ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಹಕ್ಕುಪತ್ರ ವಿತರಣೆ ಕಾರ್ಯ ನಡೆದಿದ್ದು, ಮಹಾನಗರದಲ್ಲಿ ಬಾಕಿ ಇರುವ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಇನ್ನು, ಉತ್ತರ-ಕನ್ನಡ ಜಿಲ್ಲೆಯಲ್ಲಿ ವಕ್ಫ್‌ ಆಸ್ತಿ ಹಾಗೂ ಕಬರಸ್ತಾನಗಳಿಗೆ ಭೂಮಿ ಸಮಸ್ಯೆ ಇದ್ದು, ಈ ಕುರಿತು ಕಂದಾಯ ಹಾಗೂ ಅರಣ್ಯ ಸಚಿವರೊಂದಿಗೆ ಸಭೆ ಜರುಗಿಸಿ, ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯಪ್ರಭು, ಉತ್ತರ-ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಕೆ. ಸೇರಿದಂತೆ ವಕ್ಫ್‌ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆಯುಕ್ತರು, ರಾಜ್ಯಮಟ್ಟದ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

PREV

Recommended Stories

ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!