ಕನ್ನಡಪ್ರಭ ವಾರ್ತೆ ಹುಕ್ಕೇರಿ
ಪುರಸಭೆ ಮುಂಭಾಗದಲ್ಲಿ ಸೋಮವಾರ ಆಯೋಜಿಸಿದ ಎಸ್‌ಎಫ್‌ಸಿ ವಿಶೇಷ ಅನುದಾನದಡಿ ₹1.10 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡ ಸೇತುವೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಹಾಯಧನದ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ಪಟ್ಟಣದ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ಇತರೆ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದರು.
ಪುರಸಭೆ ವ್ಯಾಪ್ತಿಯಲ್ಲಿ ವಸತಿ ರಹಿತರಿಗೆ ವಿವಿಧ ಯೋಜನೆಗಳಡಿ ಮನೆ ಮಂಜೂರು ಮಾಡಲಾಗಿದೆ. ಒಳಚರಂಡಿ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಸಮರ್ಪಕ ಘನತ್ಯಾಜ್ಯ ವಿಲೇವಾರಿಗೆ ಕ್ರಮ ವಹಿಸಲಾಗಿದೆ. ಜನರಿಗೆ ಶುದ್ಧ ಮತ್ತು ನಿರಂತರ ಕುಡಿಯುವ ನೀರು ಪೂರೈಸಲಾಗುತ್ತಿದೆ. ಜೊತೆಗೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಮಹಾವೀರ ನಿಲಜಗಿ, ಪುರಸಭೆ ಅಧ್ಯಕ್ಷ ಇಮ್ರಾನ್ ಮೋಮಿನ್, ಉಪಾಧ್ಯಕ್ಷೆ ಜ್ಯೋತಿ ಬಡಿಗೇರ, ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಂತೇಶ ತಳವಾರ, ಮುಖ್ಯಾಧಿಕಾರಿ ಈಶ್ವರ ಸಿದ್ನಾಳ, ಅಭಿಯಂತರ ರಾಜಶೇಖರ ಪಟ್ಟಣಶೆಟ್ಟಿ, ಗುತ್ತಿಗೆದಾರ ಮಲ್ಲಪ್ಪಾ ಬಿಸಿರೊಟ್ಟಿ, ಸದಸ್ಯರಾದ ಎ.ಕೆ.ಪಾಟೀಲ, ರಾಜು ಮುನ್ನೋಳಿ, ಆನಂದ ಗಂಧ, ಸದಾಶಿವ ಕರೆಪ್ಪಗೋಳ, ಚಂದು ಮುತ್ನಾಳೆ, ಭೀಮಶಿ ಗೋರಖನಾಥ, ರುಕ್ಮೀಣಿ ಹಳಿಜೋಳ, ಪ್ರಕಾಶ ಪಟ್ಟಣಶೆಟ್ಟಿ, ಸಲೀಮ್ ಕಳಾವಂತ, ಅಧಿಕಾರಿಗಳಾದ ರಾಘವೇಂದ್ರ ಭರಮನ್ನವರ, ಗೀತಾ ಕಾಕತಿಕರ, ಎಂ.ಬಿ.ಗುಡಕೇತರ, ರೇವತಿ ಆರ್., ಶಂಕರ ಕರನಿಂಗ ಮತ್ತಿತರರು ಉಪಸ್ಥಿತರಿದ್ದರು.