ಕನ್ನಡಪ್ರಭ ವಾರ್ತೆ ಮದ್ದೂರು
ಭಾರತೀಯರಾದ ನಾವುಗಳು ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ಪಾಲಿಸಿ ಸಂವಿಧಾನವನ್ನು ಗೌರವಿಸುವ ಮೂಲಕ ಶಾಂತಿ ಮತ್ತು ಸಹಬಾಳ್ವೆಯಿಂದ ಜೀವನ ನಡೆಸಬೇಕು ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು.ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕ ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ 75ನೇ ಗಣರಾಜ್ಯೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಿ ಮಾತನಾಡಿದರು.
ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಕೆ.ಎಸ್. ಸೋಮಶೇಖರ್ ಭ್ರಷ್ಟಾಚಾರ. ಅನಕ್ಷರತೆ ಮತ್ತು ಅಸಹನೆ ಈ ದೇಶಕ್ಕೆ ಒಂದು ಅಂಟು ರೋಗವಾಗಿದೆ. ಇದರ ನಿವಾರಣೆಗೆ ಮುಂದಾಗಬೇಕು ಎಂದರು.ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಿಂದ ಡಿ.ಸಿ.ಮಹೇಂದ್ರ, ಚಂದ್ರು, ದೈಹಿಕ ಶಿಕ್ಷಕ ಎಂ.ಟಿ.ಚಂದ್ರಶೇಖರ್, ಮೇರಿ ಅನಿತಾ, ಕ್ರೀಡಾ ಕ್ಷೇತ್ರ ಎ.ಎನ್.ವಂದನ, ಸಮಾಜ ಸೇವೆ ಕೆ.ಬಿ.ಚಿಕ್ಕಣ್ಣ, ಎಚ್.ಎಸ್. ಜಯಶಂಕರ್, ಮರಿದೇವರು, ದಾಕ್ಷಾಯಿಣಿ, ಎಸ್.ಐ.ಹಾಗಲ ಹಳ್ಳಿ ಬಸವರಾಜು, ಕುಚೇಲ ಹಾಗೂ ಪ್ರವಾಸೋದ್ಯಮದಿಂದ ಚಿನ್ನಪ್ಪ ಅವರನ್ನು ಅಭಿನಂದಿಸಲಾಯಿತು.
ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ಪ್ರದರ್ಶನಗಳು ನಡೆದವು. ತಾಪಂ ಇಒ ಎಲ್.ಸಂದೀಪ್, ಬಿಇಒ ಸಿ.ಎಚ್. ಕಾಳೀರಯ್ಯ, ಪುರಸಭೆ ಮುಖ್ಯ ಅಧಿಕಾರಿ ಕರಿಬಸವಯ್ಯ, ಆರಕ್ಷಕ ನಿರೀಕ್ಷಕ ಶಿವಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ಸುರೇಶ್ ಕುಮಾರ್, ಮಾಜಿ ಉಪಾಧ್ಯಕ್ಷ ಸುಮಿತ್ರ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಪ್ರಸನ್ನ ಕುಮಾರ್ಸ ಸದಸ್ಯರಾದ ವನಿತಾ, ಕೋಕಿಲ, ಸರ್ವಮಂಗಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಪಟ್ಟಣದ ಶ್ರೀಉಗ್ರ ನರಸಿಂಹ ಸ್ವಾಮಿ ದೇವಾಲಯದ ಆವರಣದಿಂದ ಶ್ರೀಭಾರತಾಂಬೆಯ ಭಾವಚಿತ್ರದ ಮೆರವಣಿಗೆಯೊಂದಿಗೆ ಶಾಲಾ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು.
ಧ್ವಜಸತ್ಯಾಗ್ರಹ ಸೌಧ ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷ್ಯ: ಕೆ.ಟಿ.ಚಂದು ಬೇಸರಮದ್ದೂರು: ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಕುರುಹು ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿ ಮತ್ತು ರಕ್ಷಣೆ ವಿಚಾರದಲ್ಲಿ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ತೀವ್ರ ಬೇಸರ ವ್ಯಕ್ತಪಡಿಸಿದರು.ಪಟ್ಟಣದ ಶಿವಪುರ ಧ್ವಜ ಸತ್ಯಾಗ್ರಹ ಸೌಧದಲ್ಲಿ ಸೌಧದ ಅಭಿವೃದ್ಧಿ ಸಮಿತಿ, ಎಚ್.ಕೆ.ವೀರಣ್ಣಗೌಡ ಕಾಲೇಜು ಸಹಯೋಗದಲ್ಲಿ ನಡೆದ 75 ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಶಿವಪುರ ಧ್ವಜ ಸತ್ಯಾಗ್ರಹ ಸೌಧ ಸ್ವಾತಂತ್ರ್ಯ ಹೋರಾಟದ ಸಂಕೇತವಾಗಿದೆ. ಇದನ್ನು ಅಭಿವೃದ್ಧಿಪಡಿಸಲು ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಸರ್ಕಾರ ಹಾಗೂ ಜನಪ್ರತಿನಿಧಿಗಳು ಬೇಜವಾಬ್ದಾರಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಅಸಹನೆ ವ್ಯಕ್ತಪಡಿಸಿದರು.ಶಾಸಕ ಕೆ.ಎಂ.ಉದಯ್ ಮಾತನಾಡಿ, ಶಿವಪುರ ಧ್ವಜ ಸತ್ಯಾಗ್ರಹ ಸೌಧವನ್ನು ಅಭಿವೃದ್ಧಿ ಪಡಿಸಿ ಪ್ರವಾಸೋದ್ಯಮ ಕೇಂದ್ರವಾಗಿ ರೂಪಿಸಲು ಚಿಂತನೆ ನಡೆಸಿದ್ದೇನೆ. ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆ ಜೊತೆಗೆ ಈಗಾಗಲೇ ಸಮಾಲೋಚನೆ ನಡೆಸಿ ನೀಲ ನಕ್ಷೆಯನ್ನು ತಯಾರಿಸಲಾಗಿದೆ. ಸರ್ಕಾರದಿಂದ ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡಿಸುವ ಮೂಲಕ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಈ ವೇಳೆ ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆ ಅಧ್ಯಕ್ಷ ಎಂ.ಸ್ವರೂಪ ಚಂದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಅಪೂರ್ವ ಚಂದ್ರ, ಪ್ರಾಂಶುಪಾಲರಾದ ಶಂಕರೇಗೌಡ, ಶಿವಕುಮಾರ್, ಪ್ರಾಧ್ಯಾಪಕ ಪ್ರಕಾಶ್, ಇನ್ನರ್ ವೀಲ್ ಸಂಸ್ಥೆ ಅಧ್ಯಕ್ಷ ಕಲಾವತಿ, ಕಾಲೇಜಿನ ನಿರ್ದೇಶಕರಾದ ಮಲ್ಲಿಕಾರ್ಜುನ್ ಮತ್ತಿತರರು ಇದ್ದರು.