ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಕಿರುಗಾವಲು ಭಾರತೀ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭ, ಉಚಿತ ಸಮವಸ್ತ್ರ ಹಾಗೂ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಎಲ್ಲರನೂ ಗೌರವಿಸುವ ಜೊತೆಗೆ ನೈತಿಕ ಮೌಲ್ಯ ಬೆಳೆಸಿಕೊಳ್ಳಬೇಕು. ಆ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಮುಂದಾಗಬೇಕು ಎಂದರು.
ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ವಿಷಯಗಳಲ್ಲಿಯೇ ಹೆಚ್ಚಿನ ಆಸಕ್ತಿಯಿಂದ ಅಭ್ಯಾಸ ಮಾಡುವ ಮೂಲಕ ಉತ್ತಮ ಬದುಕಿನ ದಾರಿಯನ್ನು ಕಂಡುಕೊಳ್ಳಬೇಕು. ಎಲ್ಲ ವಿಭಾಗಗಳಲ್ಲೂ ಭವಿಷ್ಯದ ದಾರಿಗೆ ಬೇಕಾದ ಆಯ್ಕೆಗಳಿವೆ. ಓದಿನಲ್ಲಿ ಸಮಯ ಪಾಲನೆ ಬಹಳ ಮುಖ್ಯ. ಪ್ರತಿದಿನ ಇಂತಿಷ್ಟು ಗಂಟೆಯಂತೆ ಅಭ್ಯಾಸ ಮಾಡಬೇಕು. ಉಪನ್ಯಾಸಕರೊಂದಿಗೆ ಮುಕ್ತ ವಾತಾವರಣ ಸೃಷ್ಟಿಗೊಳ್ಳಬೇಕು ಎಂದರು.ಜಿಪಂ ಮಾಜಿ ಸದಸ್ಯೆ ಸುಜಾತಾ ಕೆ.ಎಂ.ಪುಟ್ಟು ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳವ ಜೊತೆಗೆ ಸೇವಾ ಮನೊಭಾವನೆ ಬೆಳೆಸಿಕೊಳ್ಳಬೇಕು. ಇದರೊಂದಿಗೆ ಜನರ ಸೇವೆಗೆ ಮುಂದಾಗಬೇಕು ಎಂದರು.
ರಾಷ್ಟ್ರಮಟ್ಟದ ಜೂನಿಯರ್ ಐಸ್ ಸ್ಕೇಟಿಂಗ್ ಗೆ ದುವನ್ ಗೌಡ ಆಯ್ಕೆ
ತಾಲೂಕಿನ ಹಿರೇಮರಳಿ ಗ್ರಾಮದ ಅರುಣ್‌ಗೌಡ ಮತ್ತು ಚಂದ್ರಕಲಾ ದಂಪತಿ ಪುತ್ರ ದುವನ್‌ಗೌಡ ರಾಷ್ಟ್ರಮಟ್ಟದ ಜೂನಿಯರ್ ಐಸ್ ಸ್ಕೇಟಿಂಗ್‌ನಲ್ಲಿ ಆಯ್ಕೆಯಾಗುವ ಮೂಲಕ ಆ.20 ರಂದು ಉತ್ತರಖಾಂಡದ ಡೆಹರ್‌ಡೂನ್‌ನಲ್ಲಿ ನಡೆಯುವ ಏಷಿಯನ್ ಚಾಂಪಿಯನ್ ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಅಂತಾರಾಷ್ಟ್ರೀಯ ಐಸ್ ಸ್ಕೇಂಟಿಗ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ದುವನ್‌ಗೌಡ ಅವರ ಸಾಧನೆಗೆ ಆತನ ಪಾಲಕರು, ಕಸಾಪ ಅಧ್ಯಕ್ಷ ಮೇನಾಗರ ಪ್ರಕಾಶ್ ಸೇರಿದಂತೆ ಹಲವು ಗಣ್ಯರು ಪ್ರಶಂಸೆ ವ್ಯಕ್ತಪಡಿಸಿ ಏಷಿಯನ್ ಚಾಂಪಿಯನ್‌ಶಿಪ್‌ನಲ್ಲೂ ಚಿನ್ನದ ಪದಕ ಗೆದ್ದು ಬರಲಿ ಎಂದು ಆಶಿಸಿದ್ದಾರೆ.