ಕೊಡಗು ಜಿಲ್ಲೆಯಾದ್ಯಂತ ಮಳೆ ಬಿಡುವು ನೀಡಿ ಆಗಾಗ್ಗೆ ಸುರಿಯಿತು. ಜಿಲ್ಲೆಯ ವಿವಿಧ ಕಡೆ ಮಳೆಯ ವಾತಾವರಣ ನಿರ್ಮಾಣವಾಗಿತ್ತು.
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಸೋಮವಾರ ಮಳೆ ಬಿಡುವು ನೀಡಿ ಆಗಾಗ್ಗೆ ಸುರಿಯಿತು.
ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆಗಳಲ್ಲಿ ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣ ಕಂಡುಬಂತು, ಸ್ವಲ್ಪ ಹೊತ್ತು ಬಿಡುವು ನೀಡಿ ಮತ್ತೆ ಸುರಿಯಿತು. ಜಿಲ್ಲೆ ವಿವಿಧ ಕಡೆಯಲ್ಲೂ ಮಳೆಯ ವಾತಾವರಣವಿತ್ತು.
ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 22.62 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.23 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 425.79 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 181.65 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲೂಕಿನಲ್ಲಿ 33.35 ಮಿ.ಮೀ. ಕಳೆದ ವರ್ಷ ಇದೇ ದಿನ 1.15 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 606.56 ಮಿ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 268.58 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲೂಕಿನಲ್ಲಿ 23.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 369.75 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 122.51 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲೂಕಿನಲ್ಲಿ 15.91 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 395.99 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 142.77 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲೂಕಿನಲ್ಲಿ 20.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 343.95 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 138.11 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲೂಕಿನಲ್ಲಿ19.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 412.70 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 236.30 ಮಿ.ಮೀ. ಮಳೆಯಾಗಿತ್ತು.
ಹಾರಂಗಿ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2825.26 ಅಡಿಗಳು. ಕಳೆದ ವರ್ಷ ಇದೇ ದಿನ 2818.91 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 6.20 ಮಿ.ಮೀ., ಇಂದಿನ ನೀರಿನ ಒಳಹರಿವು 490 ಕ್ಯುಸೆಕ್, ಕಳೆದ ವರ್ಷ ಇದೇ ದಿನ 52 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್. ನಾಲೆಗೆ 30 ಕ್ಯುಸೆಕ್.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.