ಕನ್ನಡಪ್ರಭ ವಾರ್ತೆ ಬೀದರ್
ನಗರದ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರ ಒಂದು ಬೆಳೆ ಬೆಳೆಯುವುದಿಲ್ಲ. ವರ್ಷಕ್ಕೆ ಮೂರು ಬೆಳೆ ರೈತರು ಬೆಳೆಯುತ್ತಾರೆ. ಪಾಣಿಯಲ್ಲಿ ಬೆಳೆಯನ್ನು ತಿಳಿಸೋಕೆ ಆಗಲ್ಲ. ಮಾಹಿತಿ ತರಿಸಿಕೊಂಡು ಅಂತಹ ರೈತರಿಗೆ ನೀವು ಗಮನ ಕೊಟ್ಟು ಅವಕಾಶ ಕಲ್ಪಿಸಬೇಕು ಎಂದರು.
ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಜೆಜೆಎಂ ಕಾಮಗಾರಿ ಹಲವು ಕಡೆ ಮಂದಗತಿಯಲ್ಲಿ ಸಾಗುತ್ತಿದೆ ಮತ್ತು ಪೈಪ್‌ಲೈನ್ ಅಳವಡಿಕೆಗಾಗಿ ರಸ್ತೆ ಅಗೆದು ಹಾಗೆ ಬಿಟ್ಟಿದ್ದಾರೆ. ಸಂಚಾರಕ್ಕೆ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ.ಕಂದಾಯ ಇಲಾಖೆ ಅಧಿಕಾರಿಗಳು ಜಮೀನುಗಳ ಫಾರಂ ನಂ.10, ಪಹಣಿ ವಿಂಗಡಣೆ ಕಾರ್ಯಗಳು ಪರಿಶೀಲಿಸಿ ಶೀಘ್ರ ಪೂರ್ಣಗೊಳಿಸಬೇಕು. ಪೊಲೀಸ್ ಅಧಿಕಾರಿಗಳು ಅಪಘಾತ ತಡೆಗೆ ಹೆಚ್ಚಿನ ಕ್ರಮ ಕೈಗೊಳ್ಳಬೇಕು ಜನರು ಸಹ ಸಹಕಾರ ನೀಡಬೇಕು. ಶಿಥಿಲಗೊಂಡ ಶಾಲಾ ಕೊಠಡಿಗಳಲ್ಲಿ ತರಗತಿಗಳನ್ನು ನಡೆಸಬೇಡಿ ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಅಧಿಕಾರಿ ಕಿರಣ್ ಪಾಟೀಲ್ ಇದ್ದರು.