ಹುಬ್ಬಳ್ಳಿ:
ಇಲ್ಲಿನ ಇಂದಿರಾ ಗಾಜಿನ ಮನೆಯಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಹು-ಧಾ ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಜೇಥಿಯಾ ಫೌಂಡೇಶನ್ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಅಂಗವಿಕಲ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಅಂಧ ಮಕ್ಕಳು ಎಂದಿಗೂ ಧೈರ್ಯಗೆಡಬಾರದು. ಅಂತಹ ಮಕ್ಕಳ ಉದ್ಧಾರಕ್ಕಾಗಿ ಶ್ರಮಿಸುವ, ಅವರ ನೋವು-ನಲಿವುಗಳಿಗೆ ಸ್ಪಂದಿಸುವ ಕಾರ್ಯವಾಗಬೇಕಿದೆ. ಅವರೂ ಸಹ ಸಮಾಜದ ಮುಖ್ಯ ವಾಹಿನಿಗೆ ಬರಲಿ. ಉಳ್ಳವರು, ಜನಪ್ರತಿನಿಧಿಗಳು ತಾವು ದುಡಿದ ಹಣದಲ್ಲಿ ಸ್ವಲ್ಪ ಭಾಗ ಅಂಗವಿಕಲರ ಏಳಿಗೆಗೆ ಬಳಸಿದರೆ ನಮ್ಮ ಜೀವನ ಸಾರ್ಥಕವಾಗಲಿದೆ. ಈಗಾಗಲೇ ನಾನು ಸಹ ಅಂಗವಿಕಲರಿಗೆ ವೈಯಕ್ತಿಕವಾಗಿ 156 ತ್ರಿಚಕ್ರ ಸೈಕಲ್ ವಿತರಿಸಿದ್ದೇನೆ ಎಂದರು.ಅಂಗವಿಕಲರ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದ್ದು, ಈ ಕುರಿತು ಸಿಎಂ ಗಮನಕ್ಕೆ ತಂದು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಅವರ ಕುಂದು-ಕೊರತೆ ಸರ್ಕಾರದ ಮಟ್ಟದಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ಭರವಸೆ ನೀಡಿದರು.
ವಿಶೇಷಚೇತನರ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರು ಹಾಗೂ ಸ್ವಯಂ ಸೇವಾಸಂಸ್ಥೆಯ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು. ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.
ಮೇಯರ್ ಜ್ಯೋತಿ ಪಾಟೀಲ, ಉಪಮೇಯರ್ ಸಂತೋಷ ಚವ್ಹಾಣ, ಪಾಲಿಕೆಯ ಪ್ರತಿಪಕ್ಷದ ನಾಯಕ ಇಮ್ರಾನ್ ಯಲಿಗಾರ, ಪಾಲಿಕೆ ಸದಸ್ಯರಾದ ವೀಣಾ ಭರದ್ವಾಡ, ರೂಪಾ ಶೆಟ್ಟಿ, ಬೀರಪ್ಪ ಖಂಡೇಕರ, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಎಚ್.ಎಚ್. ಕುಕನೂರ, ಮಜೇಥಿಯಾ ಫೌಂಡೇಶನ್ ಅಧ್ಯಕ್ಷ ಜಿತೇಂದ್ರ ಮಜೇಥಿಯಾ ಸೇರಿದಂತೆ ಹಲವರಿ ಪಾಲ್ಗೊಂಡಿದ್ದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸವಿತಾ ಕಾಳೆ ಸ್ವಾಗತಿಸಿದರು. ಶಿಕ್ಷಕ ಅಣ್ಣಪ್ಪ ಕೋಳಿ ವಂದಿಸಿದರು.