ಕನ್ನಡಪ್ರಭ ವಾರ್ತೆ ಶಿರಾ
ಶಿರಾ ತಾಲೂಕಿನ ಮದಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿಡಿಗನಹಳ್ಳಿ ಗ್ರಾಮದ ರಂಗನಾಥ ಸ್ವಾಮಿ ಸಮುದಾಯ ಭವನದಲ್ಲಿ ಶನಿವಾರ ನಡೆದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮದಲೂರು ಕೆರೆಯಲ್ಲಿ ನೀರಿರುವ ಕಾರಣ ಈ ಭಾಗದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇದ್ದರೂ ಅಂತರ್ಜಲ ಮಟ್ಟ ಕುಸಿದಿಲ್ಲ. ಗ್ಯಾರಂಟಿ ಯೋಜನೆಗಳಡಿ ಶಿರಾ ತಾಲೂಕಿಗೆ ಸಾವಿರ ಕೋಟಿಗೂ ಹೆಚ್ಚು ಹಣ ವಿನಿಯೋಗಿಸಲಾಗಿದೆ ಎಂದು ಹೇಳಿದರು.
ಆಂಧ್ರಪ್ರದೇಶದಿಂದ ಶಿರಾಕ್ಕೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಭೂ ಸ್ವಾಧೀನಕ್ಕೆ ಎಕರೆಗೆ ರು. ೫೩ ಲಕ್ಷ ಪರಿಹಾರ ನೀಡಲಾಗುತ್ತಿದೆ. ಆಂಧ್ರಪ್ರದೇಶದ ಕಡೆಯಿಂದ ಸುಮಾರು ೬೫ ಎಕರೆ ಭೂಮಿ ಒತ್ತುವರಿಯಾಗಿರುವ ಬಗ್ಗೆ ದೂರುಗಳು ಕಾರ್ಯಕ್ರಮದಲ್ಲಿ ಪ್ರಸ್ತಾವನೆ ಆಯಿತು, ಇದಲ್ಲದೆ ಮದಲೂರು ಕೆರೆಯೂ ಒತ್ತುವರಿಯಾಗಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ೫೮ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ ಕೆಲವು ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಯಿತು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಆನಂದ್ ಕುಮಾರ್ ಮಹೇಶ್, ರಂಗನಾಥ, ಶೇಖರ್, ಪ್ರಧಾನ್ ನಾಗರಾಜ್, ಮದಲೂರು ಮೂರ್ತಿ ಮಾಸ್ಟರ್, ಶ್ರೀನಿವಾಸ್ ಇತರರಿದ್ದರು.