ಕನ್ನಡಪ್ರಭ ವಾರ್ತೆ ಮಡಿಕೇರಿ
ಎರಡು ದಿನದ ಹಿಂದೆ ಮಡಿಕೇರಿಯಲ್ಲಿ ಜರುಗಿದ ಕಾರ್ಯಕ್ರಮವೊಂದರಲ್ಲಿ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿದ ರವಿ ತಮ್ಮಯ್ಯ, ತಮ್ಮ ಗ್ರಾಮದ ಮೂಲಸೌಕರ್ಯ ಕೊರತೆಯನ್ನು ನಿವಾರಿಸುವಂತೆ ವಿನಂತಿಸಿಕೊಂಡಿದ್ದರು.
ಅದಕ್ಕೆ ತಕ್ಷಣವೇ ಸ್ಪಂದಿಸಿದ ಡಾ.ಮಂತರ್ ಗೌಡ, ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಂದಾಜು ಪಟ್ಟಿ ತಯಾರಿಸಿ ಸೂಕ್ತ ಕಾರ್ಯಕ್ರಮ ರೂಪಿಸುವಂತೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗಕ್ಕೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅಭಿಯಂತರರಾದ ರಘು ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಹಾಗೂ ಇತರ ಸಿಬ್ಬಂದಿಯೊಂದಿಗೆ ತೆರಳಿ ರವಿ ತಮ್ಮಯ್ಯ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.ಎರಡು ದಿನದಲ್ಲಿ ಅಂದಾಜು ಪಟ್ಟಿ ತಯಾರಿಸಿ ಶಾಸಕರ ಅನುಮೋದನೆ ಪಡೆಯಲಾಗುವುದು ಎಂದು ಎಂಜಿನಿಯರ್ ವಿಭಾಗ ಮಾಹಿತಿ ನೀಡಿದ್ದಾರೆ.