ಪ್ರಧಾನಿ ಕರೆಗೆ ಸ್ಪಂದನೆ: ಅಪ್ಪಚ್ಚು ರಂಜನ್ ಸರ್ಕಾರಿ ಬಸ್ ಪ್ರಯಾಣ

KannadaprabhaNewsNetwork |  
Published : May 26, 2026, 02:30 AM IST
 | Kannada Prabha

ಸಾರಾಂಶ

ಪೆಟ್ರೋಲ್ ಮಿತ ಬಳಕೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರು ಸರ್ಕಾರಿ ಬಸ್ ನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದರು.

ಮಡಿಕೇರಿ: ಪೆಟ್ರೋಲ್ ಮಿತ ಬಳಕೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರು ಸರ್ಕಾರಿ ಬಸ್ ನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದರು.ಸೋಮವಾರ ಮಡಿಕೇರಿಯಿಂದ ಬೆಂಗಳೂರಿಗೆ ಪತ್ನಿ ಜೊತೆಗೆ ಸರ್ಕಾರಿ ಬಸ್ ನಲ್ಲಿ ಪಯಣಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಇಂಧನ ಮಿತವ್ಯಯಕ್ಕೆ ಕರೆ ನೀಡಿದ್ದಾರೆ. ಹೀಗಾಗಿ ಸಾರ್ವಜನಿಕ ಸಾರಿಗೆಯನ್ನು ಹೆಚ್ಚು ಬಳಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು. ಭಾರತವು ಇಂಧನಕ್ಕಾಗಿ ಪರ ರಾಷ್ಟ್ರಗಳ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಇಂಧನ ದರ ಹೆಚ್ಚಳ ಅನಿವಾರ್ಯ. ವಿದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಇಂಧನ ದರ ಮಿತವಾಗಿದೆ. ಸಾರ್ವಜನಿಕರು ಕೂಡ ದೇಶದ ಹಿತದೃಷ್ಟಿಯಿಂದ ಇಂಧನ ಮಿತ ಬಳಕೆ ಮಾಡಬೇಕು ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

(ರಾಜ್ಯಕ್ಕೂ ಮುಖ್ಯ) ಪ್ರಗತಿಪರ ಚಿಂತನೆ ಯತಿ ವಿಶ್ವೇಶ ತೀರ್ಥರು: ಈಶ್ವರ ಖಂಡ್ರೆ
2015ರ ನಂತರದ ಒತ್ತುವರಿ ತೆರವಿಗೆ ಖಂಡ್ರೆ ಸೂಚನೆ