ಎಸ್‌ಐಆರ್‌ ಕಾರ್ಯಕ್ಕೆ ಪಕ್ಷದ ಬಿಎಲ್‌ಎಗಳಿಗೆ ಜವಾಬ್ದಾರಿ

KannadaprabhaNewsNetwork |  
Published : Jul 11, 2026, 02:00 AM IST
ಫೋಟೋ: 10 ಹೆಚ್‌ಎಸ್‌ಕೆ 4ಹೊಸಕೋಟೆ ತಾಲೂಕಿನ ಯಡಗೊಂಡನಹಳ್ಳಿ ಗ್ರಾಮದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆ ನಡೆದ ಬಿಎಲ್‌ಎಗಳ ಸಭೆಗೆ ಆಗಮಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಆರ್‌ಗೌಡ ಅವರನ್ನು ಅನಗೊಂಡನಹಳ್ಳಿ ಹೋಬಳಿ ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯವನ್ನು ವ್ಯವಸ್ಥಿತವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಬಿಎಲ್‌ಎ-೨ ಕಾರ್ಯಕರ್ತರಿಗೆ ಅಗತ್ಯ ಮಾರ್ಗದರ್ಶನ ನೀಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಆರ್ ಗೌಡ ತಿಳಿಸಿದರು

ಹೊಸಕೋಟೆ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯವನ್ನು ವ್ಯವಸ್ಥಿತವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಬಿಎಲ್‌ಎ-೨ ಕಾರ್ಯಕರ್ತರಿಗೆ ಅಗತ್ಯ ಮಾರ್ಗದರ್ಶನ ನೀಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಆರ್ ಗೌಡ ತಿಳಿಸಿದರು.

ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಬಿಎಲ್‌ಎಗಳಿಗೆ ಯಡಗೊಂಡನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಎಸ್‌ಐಆರ್ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಕೈಗೊಂಡಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಅತ್ಯಂತ ಮಹತ್ವದ್ದಾಗಿದ್ದು, ಮತದಾರರ ಹೆಸರು, ವಿಳಾಸ ಹಾಗೂ ಆಧಾರ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ತಿದ್ದುಪಡಿ ಮಾಡುವ ಕಾರ್ಯ ನಡೆಯುತ್ತಿದೆ. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈತಪ್ಪದಂತೆ ಬಿಎಲ್‌ಒಗಳೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡಲು ಸೂಚಿಸಲಾಗಿದೆ. ಜುಲೈ 22ರೊಳಗೆ ಹೊಸಕೋಟೆ ತಾಲೂಕಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

ಜಿಪಂ ಮಾಜಿ ಅದ್ಯಕ್ಷ ಸಿ.ಮುನಿಯಪ್ಪ ಮಾತನಾಡಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 293 ಮತಗಟ್ಟೆಗಳಿದ್ದು, ಹೊಸಕೋಟೆ ಪಟ್ಟಣದಲ್ಲಿ ಸುಮಾರು 50 ಮತಗಟ್ಟೆಗಳು ಹಾಗೂ ಗ್ರಾಮೀಣ ಹೋಬಳಿಗಳಲ್ಲಿ ಉಳಿದ ಮತಗಟ್ಟೆಗಳಿವೆ. ಸರ್ಕಾರ ನೇಮಿಸಿರುವ ಬಿಎಲ್‌ಒಗಳೊಂದಿಗೆ ಪಕ್ಷದ ಬಿಎಲ್‌ಎ-2 ಕಾರ್ಯಕರ್ತರು ಸೇರಿ ಫಾರಂಗಳನ್ನು ಭರ್ತಿ ಮಾಡಿಸುವುದು, ತಿದ್ದುಪಡಿಗಳನ್ನು ಪೂರ್ಣಗೊಳಿಸುವುದು ಹಾಗೂ ಮನೆಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಸಂಗ್ರಹಿಸುವ ಜವಾಬ್ದಾರಿ ವಹಿಸಬೇಕು. ಈಗಾಗಲೇ ಹೊಸಕೋಟೆ ಪಟ್ಟಣದ ಎಲ್ಲಾ ಬಿಎಲ್‌ಎ-2 ಕಾರ್ಯಕರ್ತರ ಸಭೆ ನಡೆಸಿ, 2002 ಹಾಗೂ 2025ರ ಮತದಾರರ ಪಟ್ಟಿಗಳ ಹೋಲಿಕೆ, ಹೊಸ ಮತದಾರರ ಸೇರ್ಪಡೆ, ಹೆಸರು ತಿದ್ದುಪಡಿ ಮತ್ತು ಅಗತ್ಯ ಕ್ರಮಗಳ ಕುರಿತು ವಿವರವಾದ ತರಬೇತಿ ನೀಡಲಾಗಿದೆ. ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ೩೦ ದಿನಗಳ ಕಾಲ ನಿರಂತರವಾಗಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಸುವಂತೆ ಸೂಚಿಸಲಾಗಿದೆ ಎಂದರು.

ಅನಗೊಂಡನಹಳ್ಳಿ ಹೋಬಳಿ ಕಾಂಗ್ರೆಸ್ ಮುಖಂಡ ಬೋಧನಹೊಸಹಳ್ಳಿ ಪ್ರಕಾಶ್, ಬಮುಲ್ ನಿರ್ದೆಶಕ ಕೆಎಂಎಫ್‌ ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಡಿಸಿ ಲಕ್ಷ್ಮೀ, ಬಿಡಿಸಿಸಿ ಬ್ಯಾಂಕ್ ನಿರ್ದೆಶಕರಾದ ಕೃಷ್ಣಮೂರ್ತಿ, ಬಾಬುರೆಡ್ಡಿ, ಸಮೇತನಹಳ್ಳಿ ಸೊಣ್ಣಪ್ಪ, ಯಡಗೊಂಡನಹಳ್ಳಿ ರಾಧಾಕೃಷ್ಣ, ನಡವತ್ತಿ ಕಾಂತರಾಜು, ಲತಾರೆಡ್ಡಿ ಇತರರು ಹಾಜರಿದ್ದರು.

ಫೋಟೋ: 10 ಹೆಚ್‌ಎಸ್‌ಕೆ 4

ಹೊಸಕೋಟೆ ತಾಲೂಕಿನ ಯಡಗೊಂಡನಹಳ್ಳಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಬಿಎಲ್‌ಎಗಳ ಸಭೆಗೆ ಆಗಮಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಆರ್‌ಗೌಡ ಅವರನ್ನು ಅನಗೊಂಡನಹಳ್ಳಿ ಹೋಬಳಿ ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೋಷಕರ ಸ್ಮರಣಾರ್ಥ ಶಾಲಾ ಆವರಣದಲ್ಲಿ ಬಲಮುರಿ ಗಣಪತಿ ದೇವಾಲಯ ನಿರ್ಮಾಣ
ಅರಣ್ಯ ನಾಶವೇ ಪ್ರಕೃತಿ ವಿಕೋಪಗಳಿಗೆ ಕಾರಣ