ಪ್ರಕೃತಿ ರಕ್ಷಣೆ ಹೊಣೆಗಾರಿಕೆ ಪ್ರತಿಯೊಬ್ಬರಲ್ಲೂ ಬೆಳೆಯಬೇಕು: ಚೇಂಪಿ ವೆಂಕಟೇಶ್ ಭಟ್

KannadaprabhaNewsNetwork |  
Published : Jun 18, 2024, 12:47 AM IST
ಕೋಟ17 | Kannada Prabha

ಸಾರಾಂಶ

ಸಾಮಾಜಿಕ ಕಾರ್ಯಕರ್ತ ಸಾಲಿಗ್ರಾಮ ನಾಗರಾಜ್ ಗಾಣಿಗ, ಗಿಡ ನೀಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿ ಸುಮಾರು ೧೫೦ಕ್ಕೂ ಅಧಿಕ ಗಿಡ ನೆಡಲಾಯಿತು.

ಕನ್ನಡಪ್ರಭ ವಾರ್ತೆ ಕೋಟ

ಪ್ರಕೃತಿಮಾತೆಯ ರಕ್ಷಣೆಯ ಹೊಣೆಗಾರಿಗೆ ಪ್ರತಿಯೊಬ್ಬರಲ್ಲೂ ಇರಬೇಕು, ಆ ಮೂಲಕ ಮುಂದಿನ ಪೀಳಿಗೆಗೆ ಇದರ ಮಹತ್ವ ಸಾರಬೇಕಿದೆ ಎಂದು ಸಾಮಾಜಿಕ ಕಾರ್ಯಕರ್ತ ಚೇಂಪಿ ವೆಂಕಟೇಶ ಭಟ್ ಹೇಳಿದರು.

ಅವರು ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲದ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸುವರ್ಣ ಎಂಟರ್‌ಪ್ರೈಸೆಸ್ ಬ್ರಹ್ಮಾವರ, ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಸಮುದ್ಯತಾ ಗ್ರೂಪ್ಸ್ ಕೋಟ, ಆಶ್ರಿತ ಸಮೂಹ ಶಿಕ್ಷಣ ಸಂಸ್ಥೆಗಳು ಕೋಟ ಸಹಯೋಗದೊಂದಿಗೆ ೨೧೨ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಗಾಣಿಗ ಸಾಲಿಗ್ರಾಮ ಅವರ ಸಂಯೋಜನೆಯೊಂದಿಗೆ ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಮ್ಮಿಕೊಂಡ ಹಸಿರುಜೀವ ಯೋಜನೆಡಿ ಗಿಡ ನಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪರಿಸರದ ಬಗ್ಗೆ ಪಂಚವರ್ಣ ಸಂಸ್ಥೆಯ ಕಾರ್ಯವೈಖರಿ ಇಡೀ ದೇಶಕ್ಕೆ ಮಾದರಿಯಾಗಿದೆ. ನಿರಂತರ ಚಟುವಟಿಕೆಯ ಮೂಲಕ ಗುರುತಿಸಿಕೊಂಡ ಈ ಸಂಸ್ಥೆ, ಪರಿಸರಸ್ನೇಹಿಯಾಗಿ ಹಮ್ಮಿಕೊಂಡ ಕಾರ್ಯ ಸ್ಫೂರ್ತಿದಾಯಕವಾಗಿದೆ. ಹಸಿರು ಇಲ್ಲದಿದ್ದರೆ ಮನುಷ್ಯನಿಗೆ ಕೋವಿಡ್ ಸಂದರ್ಭವನ್ನು ಮತ್ತೆ ನೆನಪಿಸುವಂತೆ ಕೃತಕ ಆಕ್ಸಿಜನ್ ಪಡೆದುಕೊಳ್ಳುವ ದಿನಗಳು ಹಾಗೂ ಉಸಿರಾಟಕ್ಕಾಗಿ ಪರಿತಪ್ಪಿಸುವ ಎಚ್ಚರಿಕೆಯನ್ನು ಈ ಸಂದರ್ಭದಲ್ಲಿ ನೀಡಿದರು.

ಕಾರ್ಯಕ್ರಮಕ್ಕೆ ಸಾಸ್ತಾನ ಹೆದ್ದಾರಿ ಜಾಗೃತಿ ಸಮಿತಿ ಮಾಜಿ ಅಧ್ಯಕ್ಷ ಪ್ರತಾಪ್ ಶೆಟ್ಟಿ ಸಾಸ್ತಾನ, ಹಸಿರು ಜೀವ ಯೋಜನೆಯ ಸಂದೇಶ ನೀಡಿದರು. ಸಾಮಾಜಿಕ ಕಾರ್ಯಕರ್ತ ಸಾಲಿಗ್ರಾಮ ನಾಗರಾಜ್ ಗಾಣಿಗ, ಗಿಡ ನೀಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿ ಸುಮಾರು ೧೫೦ಕ್ಕೂ ಅಧಿಕ ಗಿಡ ನೆಡಲಾಯಿತು.

ಸಾಲಿಗ್ರಾಮ ಪ.ಪಂ. ಸದಸ್ಯೆ ರತ್ನನಾಗರಾಜ್ ಗಾಣಿಗ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಆಶ್ರಿತ ಕಾಲೇಜಿನ ಪ್ರಾಂಶುಪಾಲ ಮೋಹನ್, ಪಂಚವರ್ಣದ ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಶಶಿಧರ ತಿಂಗಳಾಯ ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

PREV

Recommended Stories

ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!