ಮತ ಎಣಿಕೆ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಾನಕಿ ಕೆ.ಎಂ.

KannadaprabhaNewsNetwork |  
Published : May 29, 2024, 12:57 AM IST
(ಫೋಟೊ 28ಬಿಕೆಟಿ7, ಲೋಕಸಭಾ ಚುನಾವಣೆ ಮತ ಎಣಿಕೆ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ) | Kannada Prabha

ಸಾರಾಂಶ

ಲೋಕಸಭೆ ಚುನಾವಣೆ ಮತ ಏಣಿಕೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಾಗಲಕೋಟೆ ಲೋಕಸಭೆ ಚುನಾವಣೆ-2024ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದ್ದು, ಮತ ಏಣಿಕೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.

ಜಿಲ್ಲಾಡಳಿತ ಭವನದ ನೂತನ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರ ನಡೆದ ಲೋಕಸಭೆ ಚುನಾವಣೆ ಮತ ಎಣಿಕೆ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬಾಗಲಕೋಟೆ ಲೋಕಸಭೆ ಚುನಾವಣೆಗೆ ಸಂಬಂಧಿಸಿದ 8 ಮತಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಸಲಾಗುತ್ತಿದೆ. ಈಗಾಗಲೇ ಮತ ಎಣಿಕೆ ಕೇಂದ್ರ ಸಂಪೂರ್ಣ ಸಜ್ಜಾಗಿದ್ದು, ಯಾವುದೇ ರೀತಿಯ ಗೊಂದಲ, ಉಹಾಪೋಹಗಳಿಗೆ ಅವಕಾಶವಿಲ್ಲದಂತೆ ಚುನಾವಣೆ ಆಯೋಗದ ನಿರ್ದೇಶನಗಳನ್ವಯ ಮತ ಎಣಿಕೆ ಕಾರ್ಯ ಯಶಸ್ವಿಯಾಗಿ ನಡೆಸಲು ತಿಳಿಸಿದರು.

ಜಿಪಂ ಸಿಇಒ ಶಶಿಧರ ಕುರೇರ ಮಾತನಾಡಿ, ಮತದಾನ ಪ್ರಕ್ರಿಯೆಯಷ್ಟೇ ಮತ ಎಣಿಕೆ ಮಹತ್ವದ ಕಾರ್ಯವಾಗಿದ್ದು, ಯಾವುದೇ ರೀತಿಯ ಲೋಪಕ್ಕೆ ಅವಕಾಶ ಕೊಡದಂತೆ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಬೇಕು. ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದೆ. ಮತ ಎಣಿಕೆ ಕಾರ್ಯ ಯಶಸ್ವಿಗೊಳಿಸಲು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಬರುವ ಪ್ರತಿಯೊಬ್ಬರು ಆಯಾ ಪ್ರವೇಶದ್ವಾರ ಹಾಗೂ ನಿಗದಿಪಡಿಸಿದ ಸ್ಥಳಗಳಲ್ಲಿ ಮೊಬೈಲ್ ಡಿಪಾಜಿಟ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಸೂಚಿಸಿ ನಿಗದಿಪಡಿಸಿರುವ ಸ್ಥಳಗಳಲ್ಲಿಯೇ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಅಭ್ಯರ್ಥಿಗಳು, ಮಾದ್ಯಮ ಪ್ರತಿನಿಧಿಗಳು ತಮ್ಮ ವಾಹನಗ ನಿಲ್ಲಿಸಬೇಕು ಎಂದರು.

ಮಾಸ್ಟರ್‌ ಟ್ರೈನರ್ ಎನ್.ವಿ. ಶಿವಗಾಂವಕರ ಪ್ರಾತ್ಯಕ್ಷಿಕೆಯ ಮೂಲಕ ಮತ ಏಣಿಕೆ ಕುರಿತು ಸಂಪೂರ್ಣ ಮಾಹಿತಿ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಆಯಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾದ ಹುಲ್ಲುಮನಿ ತಿಮ್ಮಣ್ಣ, ಸಾಜಿದ ಮುಲ್ಲಾ, ಸಂತೋಷ ಕಾಮಗೌಡ, ಎಂ.ಬಿ. ನಾಗಠಾಣ, ದುರುಗೇಶ ರುದ್ರಾಕ್ಷಿ, ಸಂತೋಷ ಜಗಲಾಸರ, ಶ್ರೀಧರ ಗೋಟೂರ ಸೇರಿದಂತೆ ಆಯಾ ತಾಲೂಕಿನ ತಹಸೀಲ್ದಾರರು ಉಪಸ್ಥಿತರಿದ್ದರು. ಪ್ರತಿ ಮತಕ್ಷೇತ್ರಕ್ಕೆ 14 ಟೇಬಲ್‌ ಗಳನ್ನು ಇರಿಸಲಾಗಿದ್ದು, ಪ್ರತಿ ಟೇಬಲ್ ಗೆ ತಲಾ ಒಬ್ಬರಂತೆ ಮತ ಎಣಿಕಾ ಮೇಲ್ವಿಚಾರಕ, ಸಹಾಯಕ ಮತ್ತು ಮೈಕ್ರೋ ವೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ. ಅಂಚೆ ಮತಪತ್ರ ಎಣಿಕೆಗೆ ಎರಡು ಕೊಠಡಿ ಇದ್ದು, ಅದರಲ್ಲಿ ಒಂದು ಕೊಠಡಿಗೆ 14 ಮತ್ತು ಇನ್ನೊಂದು ಕೊಠಡಿಗೆ 10 ಟೇಬಲ್ ಇರಿಸಲಾಗಿದೆ. ಸ್ಕ್ಯಾನಿಂಗ್ ಮಾಡಲು 10 ಟೇಬಲ್ ಸಹ ಇರಿಸಲಾಗಿದೆ.

- ರಮೇಶ ಕಳಸದ, ಚುನಾವಣೆ ತರಬೇತಿ ನೋಡಲ್ ಅಧಿಕಾರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಿಸಿದ ಸಂಸದ ಡಾ.ಕೆ.ಸುಧಾಕರ್
ಅರಣ್ಯ ಭೂಮಿ ಕಬಳಿಸುವವರ ವಿರುದ್ಧ ಕ್ರಮಕ್ಕೆ ಸಚಿವರ ಸೂಚನೆ