ಕನ್ನಡಪ್ರಭವಾರ್ತೆ ತಿಪಟೂರು
ನಗರದ ಬಸವೇಶ್ವರ ಕಾಲೇಜ್ ಆಫ್ ಫಾರ್ಮಸಿಯ ಸೆಮಿನಾರ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಔಷಧ ವಾರಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈದ್ಯರ ಸಲಹೆಯಿಲ್ಲದೆ ಆಂಟಿಬಯೋಟಿಕ್ ಔಷಧಗಳನ್ನು ಬಳಸುವುದು ಹಾಗೂ ಔಷಧಗಳನ್ನು ಅನಗತ್ಯವಾಗಿ ಮತ್ತು ಅಸಮರ್ಪಕವಾಗಿ ಸೇವಿಸುವುದರಿಂದ ಔಷಧ ನಿರೋಧಕತೆ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ಫಾರ್ಮಸಿಸ್ಟಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಾಲಾಕ್ಷ. ಎಂ.ಎನ್. ಮಾತನಾಡಿ, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಆಶಯದಂತೆ ರಾಷ್ಟ್ರೀಯ ಔಷಧ ವಾರಾಚರಣೆಯನ್ನು ಆಚರಿಸಲಾಗುತ್ತಿದೆ. ಔಷಧಗಳ ಸುರಕ್ಷಿತ ಮತ್ತು ಸೂಕ್ತ ಬಳಕೆ, ಆಂಟಿಮೈಕ್ರೊಬಿಯಲ್ ಪ್ರತಿರೋಧದ ನಿಯಂತ್ರಣ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಫಾರ್ಮಸಿ ವಿದ್ಯಾರ್ಥಿಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದರು.ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಲಪ್ಪ. ಎಚ್.ಎನ್. ಮಾತನಾಡಿ, ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಔಷಧ ವಿಜ್ಞಾನದ ಅರಿವು ಮೂಡಿಸುವುದರ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಮಣಿಕಂಠ.ಎಸ್.ಪಿ. ಉಪನ್ಯಾಸಕರಾದ ಬಸವರಾಜು, ಶ್ವೇತಾ, ಚಂದನಾ, ಮೇಘನಾ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಬಿ.ಫಾರ್ಮ್ ಮತ್ತು ಡಿ.ಫಾರ್ಮ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.