ಅರಣ್ಯದಲ್ಲಿ ಜಾನುವಾರು ಮೇಯಲು ನಿರ್ಬಂಧ ಸರಿಯಲ್ಲ

KannadaprabhaNewsNetwork |  
Published : Oct 21, 2025, 01:00 AM IST
ಕನ್ನಡಪ್ರಭ ವಾರ್ತೆ ಮಲೆ ಮಾದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ಜಾನುವಾರುಗಳನ್ನು ಮೇಯಲು ಬಿಡದೆ ದುಂಡವರ್ತಿ ಪ್ರದರ್ಶಿಸುತ್ತಿರುವ ಅರಣ್ಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ...ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಚೆಕ್ಪೋಸ್ಟ್ ಬಳಿ, ಕರ್ನಾಟಕ ರಾಜ್ಯರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ ನಂತರ ಅವರು ಮಾತನಾಡಿದರು...ಮಲೆ ಮಾದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದ 300ಕ್ಕೂ ಹೆಚ್ಚು ಜಾನುವಾರುಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಲು ಬಿಡದೆ ಅರಣ್ಯಾಧಿಕಾರಿಗಳು ಪಟಾಕಿ ಸಿಡಿಸಿ ಜಾನುವಾರುಗಳನ್ನು ಓಡಿಸಿದ್ದಾರೆ ತಲತಲಾಂತರದಿಂದ ಜಾನುವಾರುಗಳಿಗೆ ಮೇವು ಮೆಯಿಸಿಕೊಂಡು ಸಂರಕ್ಷಿಸಲಾಗುತ್ತಿತ್ತು ಇತ್ತೀಚೆಗೆ ಅರಣ್ಯಾಧಿಕಾರಿಗಳ ದುಂಡಾವತಿಯಿಂದ ಜಾನುವಾರುಗಳಿಗೆ ಗ್ರಾಮಗಳಲ್ಲಿ ಮೇವು ನೀರು ಇಲ್ಲದೆ ರೈತರು ಪರದಾಡುವಂಥ ಪರಿಸ್ಥಿತಿ ಇದೆ ಎಂದು ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು..ಅರಣ್ಯಾಧಿಕಾರಿ ದೌಡ್ :  ಪ್ರತಿಭಟನಾ ಸ್ಥಳಕ್ಕೆ ಮಲೆ ಮಾದೇಶ್ವರ ಬೆಟ್ಟದ ಎಸಿಎಫ್ ಮರಿಸ್ವಾಮಿ ಭೇಟಿ ನೀಡಿ ಪ್ರತಿಭಟನ ಕಾರ್ಯ ಜೊತೆ ಮಾತನಾಡಿ ಇಂಡಿಗನತ್ತ ಗ್ರಾಮದ ರೈತರು ಒಬ್ಬರು ಅರಣ್ಯ ಪ್ರದೇಶದಲ್ಲಿ ನೇಣು ತೆಗೆದು ಕೊಂಡು ಸಾವನ್ನಪ್ಪಿರುವ ಪ್ರಕರಣ ನಡೆದಿರುವ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳಿಗೆ ದೊಡ್ಡಿ ಹಾಕಲು ಅವಕಾಶ ಇರುವುದಿಲ್ಲ ಹೀಗಾಗಿ ಜಾನುವಾರಗಳನ್ನು ಓಡಿಸಲಾಗಿದೆ ಎಂದು ತಿಳಿಸಿದರು.ನಂತರ ಮಾತನಾಡಿದ ರೈತ ಮುಖಂಡವನ್ನು ಪ್ರಕಾಶ್ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳನ್ನು ಮೇಯಿಸಲು ನಮ್ಮ ಹಕ್ಕು ಹೀಗಾಗಿ ಸಂಬಂಧಿಸಿದ ಅರಣ್ಯ ಸಚಿವರು ಹಾಗೂ ಉಸ್ತುವಾರಿ ಸಚಿವರು ಶಾಸಕರು ಹಿರಿಯ ಅಧಿಕಾರಿಗಳು ಮಲೆ ಮಾದೇಶ್ವರ ಬೆಟ್ಟದಲ್ಲಿ ಬಂದು ಸಭೆ ನಡೆಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಹೀಗಾಗಿ ಅರಣ್ಯಾಧಿಕಾರಿಗಳು ಈ ರೀತಿ ದುಂಡಾವತಿಯಿಂದ ಜಾನುವಾರುಗಳನ್ನು ಪಟಾಕಿಸಿಡಿಸಿ ಓಡಿಸುವುದು ಸರಿಯಾದ ಕ್ರಮವಲ್ಲ ಎಂದು ಖಂಡಿಸಿದರು...ಎಂಟು ಹುಲಿಗಳ ಸಾವು : ಹನೂರು ತಾಲೂಕಿನಲ್ಲಿ ಎಂಟು ಹುಲಿಗಳು ಸಾವನ್ನಪ್ಪಿದೆ ಹೀಗಾಗಿ ಅರಣ್ಯದಂಚಿನ ರೈತರ ಹಾಗೂ ಅಧಿಕಾರಿಗಳ ಸಭೆ ಕರೆದು ಅರಣ್ಯ ಸಚಿವರು ಸಮಸ್ಯೆಯ ಬಗ್ಗೆ ಗಂಭೀರವಾಗಿ ಪ್ರಕರಣವನ್ನು ಪರಿಗಣಿಸಿ ರೈತರ ಹಾಗೂ ಗ್ರಾಮದ ನಿವಾಸಿಗಳ ಸಭೆಯನ್ನು ಸಹ ನಡೆಸದೆ ಇಷ್ಟಾನುಸಾರ ನಿಯಮಗಳನ್ನು ಮಾಡುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದರು...ಜಾನುವಾರಗಳನ್ನು ಮೇಯಲು ಬಿಡದಿದ್ದರೆ ಉಗ್ರವಾದ ಪ್ರತಿಭಟನೆ : ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳ ಬಳಿ ರೈತ ಮುಖಂಡರು ಜಾನುವಾರುಗಳನ್ನು ಮೆಯ್ಯಲು ಬಿಡದಿದ್ದರೆ ಉಗ್ರವಾದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಇಲಾಖೆಯ ಸಚಿವರು ಹಾಗೂ ಸಂಬಂಧಪಟ್ಟ ಸಚಿವರು ಸಭೆ ನಡೆಸಿ ಕ್ರಮ ಕೈಗೊಳ್ಳುವವರೆಗೂ ರೈತರ ಜಾನುವಾರುಗಳನ್ನು ಮೇಯಲು ತೊಂದರೆ ನೀಡಬಾರದು ಎಂದು ಅರಣ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡುವ ಮೂಲಕ ಪ್ರತಿಭಟನೆಯಲ್ಲಿ ತಿಳಿಸಿದರು..ಅರಣ್ಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತಿರುವ ಗ್ರಾಮಸ್ಥರು : ಮಲೆ ಮಾದೇಶ್ವರ ಬೆಟ್ಟ ಸೇರಿದಂತೆ ತಾಲೂಕಿನ ವಿವಿಧಡೆ ಅರಣ್ಯದಂಚಿನ ಗ್ರಾಮಗಳಲ್ಲಿ ರೈತರನ್ನು ಅರಣ್ಯಾಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಜೊತೆಗೆ ಅರಣ್ಯದಂಚಿನ ಭಾಗದಲ್ಲಿ ರೈತರ ಜಮೀನುಗಳಿಗೆ ಕಾಡುಪ್ರಾಣಿಗಳು ಬರದಂತೆ ತಡೆಗಟ್ಟಲು ಸಹ ಕ್ರಮ ಕೈಗೊಳ್ಳಬೇಕು ನಮ್ಮ ಜಾನುವಾರಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಲು ಬಿಡದಿದ್ದರೆ ನಿಮ್ಮ ಕಾಡುಪ್ರಾಣಿಗಳು ನಮ್ಮ ರೈತರ ಜಮೀನಿಗೆ ಬರದಂತೆ ತಡೆಗಟ್ಟುವ ಮೂಲಕ ಮುಂದಾಗಿ ಎಂದು ಪ್ರತಿಭಟನೆಯಲ್ಲಿ ಅಕ್ರೋಶ ವ್ಯಕ್ತಪಡಿಸಿದರು...ಇದೇ ವೇಳೆಯಲ್ಲಿ ಮಲೆ ಮಾದೇಶ್ವರ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ರೈತ ಮುಖಂಡರು ಪ್ರತಿಭಟನೆ ಚಳುವಳಿಯಲ್ಲಿ ಭಾಗವಹಿಸಿದ್ದರು...Hnr,1news,1  ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ರೈತ ಸಂಘಟನೆಯಿಂದ ಅರಣ್ಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಯಿತು.. | Kannada Prabha

ಸಾರಾಂಶ

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಚೆಕ್ ಪೋಸ್ಟ್‌ ಬಳಿ ಅರಣ್ಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ, ಹನೂರು

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಚೆಕ್ ಪೋಸ್ಟ್‌ ಬಳಿ ಅರಣ್ಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಮಲೆ ಮಾದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದ 300ಕ್ಕೂ ಹೆಚ್ಚು ಜಾನುವಾರುಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಲು ಬಿಡದೆ ಅರಣ್ಯಾಧಿಕಾರಿಗಳು ಪಟಾಕಿ ಸಿಡಿಸಿ ಜಾನುವಾರುಗಳನ್ನು ಓಡಿಸಿದ್ದಾರೆ. ತಲತಲಾಂತರದಿಂದ ಜಾನುವಾರು ಮೆಯಿಸಿಕೊಂಡು ಸಂರಕ್ಷಿಸಲಾಗುತ್ತಿತ್ತು. ಇತ್ತೀಚೆಗೆ ಅರಣ್ಯಾಧಿಕಾರಿಗಳ ದುಂಡಾವತಿಯಿಂದ ಜಾನುವಾರುಗಳಿಗೆ ಗ್ರಾಮಗಳಲ್ಲಿ ಮೇವು, ನೀರು ಇಲ್ಲದೆ ರೈತರು ಪರದಾಡುವಂಥ ಪರಿಸ್ಥಿತಿ ಇದೆ ಎಂದರು.

ಪ್ರತಿಭಟನಾ ಸ್ಥಳಕ್ಕೆ ಮಲೆ ಮಾದೇಶ್ವರ ಬೆಟ್ಟದ ಎಸಿಎಫ್ ಮರಿಸ್ವಾಮಿ ಭೇಟಿ ನೀಡಿ ಮಾತನಾಡಿ, ಇಂಡಿಗನತ್ತ ಗ್ರಾಮದ ರೈತರು ಒಬ್ಬರು ಅರಣ್ಯ ಪ್ರದೇಶದಲ್ಲಿ ನೇಣುಹಾಕಿಕೊಂಡು ಸಾವನ್ನಪ್ಪಿರುವ ಪ್ರಕರಣ ನಡೆದಿರುವ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳಿಗೆ ದೊಡ್ಡಿ ಹಾಕಲು ಅವಕಾಶ ಇಲ್ಲ. ಹೀಗಾಗಿ ಜಾನುವಾರುಗಳನ್ನು ಓಡಿಸಲಾಗಿದೆ ಎಂದು ತಿಳಿಸಿದರು.

ರೈತ ಮುಖಂಡ ಪ್ರಕಾಶ್ ಮಾತನಾಡಿ, ಅರಣ್ಯ ಪ್ರದೇಶದಲ್ಲಿ ಜಾನುವಾರುಗಳನ್ನು ಮೇಯಿಸುವುದು ನಮ್ಮ ಹಕ್ಕು. ಹೀಗಾಗಿ ಸಂಬಂಧಿಸಿದ ಅರಣ್ಯ ಸಚಿವರು ಹಾಗೂ ಉಸ್ತುವಾರಿ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಮಲೆ ಮಹದೇಶ್ವರ ಬೆಟ್ಟದಲ್ಲಿ ಬಂದು ಸಭೆ ನಡೆಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಅರಣ್ಯಾಧಿಕಾರಿಗಳು ಈ ರೀತಿ ದುಂಡಾವರ್ತನೆಯಿಂದ ಜಾನುವಾರುಗಳನ್ನು ಪಟಾಕಿ ಸಿಡಿಸಿ ಓಡಿಸುವುದು ಸರಿಯಾದ ಕ್ರಮವಲ್ಲ ಎಂದರು.

ಹನೂರು ತಾಲೂಕಿನಲ್ಲಿ ಎಂಟು ಹುಲಿಗಳು ಸಾವನ್ನಪ್ಪಿವೆ. ಹೀಗಾಗಿ ಅರಣ್ಯದಂಚಿನ ರೈತರ ಹಾಗೂ ಅಧಿಕಾರಿಗಳ ಸಭೆ ಕರೆದು ಅರಣ್ಯ ಸಚಿವರು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ರೈತರ ಹಾಗೂ ಗ್ರಾಮದ ನಿವಾಸಿಗಳ ಸಭೆಯನ್ನು ಸಹ ನಡೆಸದೆ ಇಷ್ಟಾನುಸಾರ ನಿಯಮಗಳನ್ನು ಮಾಡುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದರು.

ರೈತ ಮುಖಂಡರು ಮಾತನಾಡಿ, ಜಾನುವಾರುಗಳನ್ನು ಮೇಯಲು ಬಿಡದಿದ್ದರೆ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ. ಸಂಬಂಧಪಟ್ಟ ಸಚಿವರು ಸಭೆ ನಡೆಸಿ ಕ್ರಮ ಕೈಗೊಳ್ಳುವವರೆಗೂ ರೈತರ ಜಾನುವಾರುಗಳನ್ನು ಮೇಯಲು ತೊಂದರೆ ನೀಡಬಾರದು ಎಂದು ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟ ಸೇರಿದಂತೆ ತಾಲೂಕಿನ ವಿವಿಧಡೆ ಅರಣ್ಯದಂಚಿನ ಗ್ರಾಮಗಳಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಜೊತೆಗೆ ಅರಣ್ಯದಂಚಿನ ಭಾಗದಲ್ಲಿ ರೈತರ ಜಮೀನುಗಳಿಗೆ ಕಾಡುಪ್ರಾಣಿಗಳು ಬರದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಜಾನುವಾರುಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಲು ಬಿಡದಿದ್ದರೆ ನಿಮ್ಮ ಕಾಡುಪ್ರಾಣಿಗಳು ನಮ್ಮ ರೈತರ ಜಮೀನಿಗೆ ಬರದಂತೆ ತಡೆಗಟ್ಟಲು ಮುಂದಾಗಿ ಎಂದರು.

ಇದೇ ವೇಳೆಯಲ್ಲಿ ಮಲೆ ಮಾದೇಶ್ವರ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ರೈತ ಮುಖಂಡರು ಪ್ರತಿಭಟನೆ ಚಳುವಳಿಯಲ್ಲಿ ಭಾಗವಹಿಸಿದ್ದರು.

PREV

Recommended Stories

ಮಲೆನಾಡು, ಕರಾವಳಿಯಲ್ಲಿ ಮಳೆ : ಜನಜೀವನ ಅಸ್ತವ್ಯಸ್ತ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ