ಹಿಂದು ಹಬ್ಬ ಆಚರಣೆಗೆ ನಿರ್ಬಂಧ: ಶಾಸಕ ವೇದವ್ಯಾಸ್‌ ಕಾಮತ್‌ ಅಧಿವೇಶನದಲ್ಲಿ ಪ್ರಸ್ತಾಪ

KannadaprabhaNewsNetwork |  
Published : Aug 21, 2025, 02:00 AM IST
ಶಾಸಕ ವೇದವ್ಯಾಸ್‌ ಕಾಮತ್‌  | Kannada Prabha

ಸಾರಾಂಶ

ಕಾಂಗ್ರೆಸ್ ಸರ್ಕಾರ ಕೊಳ್ಳಿ ಇಟ್ಟು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದೆ ಎಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ಹೆಸರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಳ್ಳಿ ಇಟ್ಟು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದೆ ಎಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಧಾರ್ಮಿಕ ಕ್ಷೇತ್ರಗಳಿಗೆ ಪ್ರಸಿದ್ಧಿ. ಅಂತಹ ಸ್ಥಳದಲ್ಲಿ ಹಬ್ಬದ ಸಂಭ್ರಮ ತುಸು ಹೆಚ್ಚೇ ಇರುವುದು ಸಾಮಾನ್ಯವಾಗಿದ್ದು, ಕೋಲ, ನೇಮ, ಯಕ್ಷಗಾನ, ಬ್ರಹ್ಮಕಲಶ ಹೀಗೆ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ. ಅದರಂತೆ ಶ್ರೀ ಕೃಷ್ಣ ಜನ್ಮಾಷ್ಟಮಿಯು ಈ ಭಾಗದಲ್ಲಿ ಸಂಭ್ರಮದ ಹಬ್ಬವಾಗಿದ್ದು ಪೊಲೀಸರು ಸಂಜೆ ಆರು ಗಂಟೆಗೆ ಬಂದು ಸೌಂಡ್ ಬಾಕ್ಸ್‌ಗಳನ್ನು ತೆಗೆದುಕೊಂಡು ಹೋಗಿದ್ದರಿಂದ ಕೃಷ್ಣವೇಷ ಸ್ಪರ್ಧೆ, ಭರತನಾಟ್ಯ, ರಸಮಂಜರಿ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಗಿತಗೊಂಡು ಹಬ್ಬದ ಸಂಭ್ರಮದಲ್ಲಿದ್ದವರಿಗೆ ಇದೇ ಮೊದಲ ಬಾರಿಗೆ ನಿರಾಸೆಯಾಗಿದೆ. ಅಲ್ಲದೇ ಕಾರ್ಯಕ್ರಮ ಆಯೋಜಕರ ಮೇಲೆ, ಸೌಂಡ್ ಸಿಸ್ಟಮ್ ಮಾಲೀಕರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.ಹಿಂದಿನ ಬಿಜೆಪಿ ಸರ್ಕಾರದ ಸಂದರ್ಭದಲ್ಲೂ ಇಂತಹ ನಿಯಮ ಆದೇಶಗಳಿದ್ದರೂ ಹಬ್ಬದ ಸಂಭ್ರಮಕ್ಕೆ ಕಿಂಚಿತ್ತೂ ಅಡ್ಡಿಪಡಿಸಿಲ್ಲ. ರಾತ್ರಿ ಹತ್ತೂವರೆ ನಂತರ ಯಾವುದೇ ಕಾರ್ಯಕ್ರಮ ನಡೆಯಬಾರದು, ಮೊಸರು ಕುಡಿಕೆಗೆ ಕಟ್ಟಿರುವ ಮಡಿಕೆಗಳನ್ನು ನಾಳೆ ಬಂದು ಒಡೆಯಿರಿ ಎಂದು ಪೊಲೀಸರು ಹೇಳುವುದು ಎಷ್ಟು ಸರಿ? ಇನ್ನು ಕೆಲವೇ ದಿನಗಳಲ್ಲಿ ಗಣೇಶ ಚೌತಿ, ನವರಾತ್ರಿ, ಹುಲಿವೇಷ, ಹೀಗೆ ಇಡೀ ದಕ್ಷಿಣ ಕನ್ನಡ ಜಿಲ್ಲೆ ಹಬ್ಬದ ಸಂಭ್ರಮದಲ್ಲಿ ಮುಳುಗಲಿದ್ದು ಯಾವುದೇ ಗೊಂದಲ ಉಂಟಾಗದಂತೆ ರಾಜ್ಯ ಸರ್ಕಾರ ಎಚ್ಚರ ವಹಿಸಬೇಕು. ಇಲ್ಲದಿದ್ದರೆ ಜನತೆ ರೊಚ್ಚಿಗೆದ್ದರೆ ಅದಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಅವರು ಸದನದಲ್ಲಿ ಎಚ್ಚರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ