ಆನ್ ಲೈನ್ ಔಷಧ ವ್ಯಾಪಾರಕ್ಕೆ ಅಂಕುಶ: ರಘುನಾಥ ರೆಡ್ಡಿ

KannadaprabhaNewsNetwork |  
Published : Feb 23, 2026, 02:45 AM IST
ಚಿತ್ರ :  20ಎಂಡಿಕೆ5 : ಫಾಮ೯ ಭವನ ಲೋಕಾಪ೯ಣೆಗೊಂಡ ಸಂದರ್ಭ.  | Kannada Prabha

ಸಾರಾಂಶ

ಆನ್ ಲೈನ್ ನಲ್ಲಿ ಔಷಧ ವ್ಯಾಪಾರಕ್ಕೆ ಕಡಿವಾಣ ಹಾಕದೇ ಹೋದಲ್ಲಿ ಮಾದಕ ದ್ರವ್ಯ ವ್ಯಸನಕ್ಕೆ ಸಂಪೂಣ೯ ತಡೆ ಸಾಧ್ಯವಾಗದು ಎಂದು ಕರ್ನಾಟಕ ಔಷಧ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಆರ್. ರಘುನಾಥ ರೆಡ್ಡಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಆನ್ ಲೈನ್ ನಲ್ಲಿ ಔಷಧ ವ್ಯಾಪಾರಕ್ಕೆ ಕಡಿವಾಣ ಹಾಕದೇ ಹೋದಲ್ಲಿ ಮಾದಕ ದ್ರವ್ಯ ವ್ಯಸನಕ್ಕೆ ಸಂಪೂಣ೯ ತಡೆ ಸಾಧ್ಯವಾಗದು ಎಂದು ಕರ್ನಾಟಕ ಔಷಧ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಆರ್. ರಘುನಾಥ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಕೊಡಗು ಔಷಧ ವ್ಯಾಪಾರಸ್ಥರ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾದ ಸಂಘದ ಕಚೇರಿ, ಸಭಾಂಗಣವನ್ನು ಹೊಂದಿರುವ ಎರಡಂತಸ್ತಿನ ಫಾರ್ಮಾ ಭವನ ಉದ್ಘಾಟಿಸಿ ಬಳಿಕ ಮಾತನಾಡಿದರು.

ಆನ್ ಲೈನ ಮೂಲಕ ಮಾದಕ ದ್ರವ್ಯ ಸಾಗಾಣಿಕೆ ಊಹೆಗೂ ಮೀರಿ ಬೆಳೆಯುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ. ಆನ್ ಲೈನ್ ಮೂಲಕ ಮಾದಕ ವಸ್ತುಗಳನ್ನು ಸಲೀಸಾಗಿ ಸಾಗಾಣಿಕೆ ಮಾಡುವ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಆನ್ ಲೈನ್ ಔಷಧಿ ವಹಿವಾಟಿಗೇ ತಡೆಯೊಡ್ಡಬೇಕು ಎಂದರು. ಕೊಡಗು ಜಿಲ್ಲೆಯ ಸಹಾಯಕ ಔಷಧ ನಿಯಂತ್ರಕರಾದ ಅಜಯ್ ರಾಜ್ ಷಾ ಮಾತನಾಡಿ, ಭೂಮಿಯಲ್ಲಿ ಜನಿಸಿದವರೆಲ್ಲರೂ ಪ್ರವಾಸಿಗರಂತೆ ಆಗಿದ್ದೇವೆ. ಆ ದೇವನು ಪ್ರವಾಸಿ ಮಾಗ೯ದಶ೯ಕನಂತೆ ನಮಗೆ ದಾರಿದೀಪವಾಗಿದ್ದಾನೆ. ಹೀಗಿರುವಾಗ ಜೀವಿಸುವ ಅಲ್ಪಾವಧಿಯಲ್ಲಿ ಸ್ವಾಥಿ೯ಗಳಾಗದೇ ಪರರ ಹಿತಚಿಂತನೆಯನ್ನೂ ಮಾಡುವಂತೆ ಸಲಹೆ ನೀಡಿದರು. ಸಂಘದ ರಾಜ್ಯ ಕಾನೂನು ಸಲಹೆಗಾರ ಕೆ.ಹರೀಶ್ ಮಾತನಾಡಿದರು. ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಂಬೇಕಲ್ ಜೀವನ್ ಕುಶಾಲಪ್ಪ, ಕರ್ನಾಟಕ ಔಷದ ವ್ಯಾಪಾರಿಗಳ ಸಂಘದ ಖಜಾಂಜಿ ಬಿ. ಉಮೇಶ್, ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಗೌರವ ಕಾರ್ಯದರ್ಶಿ ಡಿ.ಐ. ಪುರುಷೋತ್ತಮ್, ಉಪಾಧ್ಯಕ್ಷರಾದ ಅಂಬೆಕಲ್ ವಿನೋದ್, ಮೇರ್ವಿನ್ ಫರ್ನಾಂಡಿಸ್‌, ಜಂಟಿ ಕಾರ್ಯದರ್ಶಿ ಕೆ.ವಸಂತ್ ಕುಮಾರ್, ಖಜಾಂಚಿ ಪ್ರಸಾದ್ ಗೌಡ, ನಿದೇ೯ಶಕ ಜಗನ್ನಾಥ್, ಡಾ. ಸುಧಾಕರ್ ಶೆಟ್ಟಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಾಜಾಥ ವಿಶೇಷ ಪ್ರಚಾರ ಆಂದೋಲನ
ಪಿಯು ಪರೀಕ್ಷೆ ಪಾರದರ್ಶಕ ರೀತಿಯಲ್ಲಿ ನಡೆಸುವಂತೆ ಡಿಸಿ ಸೂಚನೆ