ಪುಟ...3ಕ್ಕೆವಿಪಕ್ಷಗಳ ಕುತಂತ್ರಕ್ಕೆ ಫಲಿತಾಂಶ ಉತ್ತರ: ಸುರೇಶ ಪೂಜಾರಿ

KannadaprabhaNewsNetwork |  
Published : Nov 24, 2024, 01:47 AM IST
ಸಂಭ್ರಮ | Kannada Prabha

ಸಾರಾಂಶ

ಸಿಂದಗಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಆ ಹಿನ್ನೆಲೆಯಲ್ಲಿ ಸಿಂದಗಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಶನಿವಾರ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದ ಬಳಿ ಜಮಾಯಿಸಿದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಸಿಂದಗಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಆ ಹಿನ್ನೆಲೆಯಲ್ಲಿ ಸಿಂದಗಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಶನಿವಾರ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದ ಬಳಿ ಜಮಾಯಿಸಿದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಮಾತನಾಡಿ, ರಾಜ್ಯದ ಜನತೆ ಕಾಂಗ್ರೆಸ್ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಿದೆ. ಐದು ಗ್ಯಾರಂಟಿಗಳನ್ನು ನೀಡಿದೆ. ಅದರ ಬಗ್ಗೆ ಬಿಜೆಪಿ ಜನರಲ್ಲಿ ತಪ್ಪು ಭಾವನೆ ಮೂಡಿಸಿತು. ವಕ್ಫ್ ವಿಚಾರದಲ್ಲಿಯೂ ಅಪಪ್ರಚಾರ ಮಾಡಿತು. ವಿರೋಧ ಪಕ್ಷಗಳ ಕುತಂತ್ರಗಳಿಗೆ ಉಪ ಚುನಾವಣೆಯಲ್ಲಿ ಜನರು ಉತ್ತರ ನೀಡಿದ್ದಾರೆ. ಅವರೆಲ್ಲರಿಗೂ ಪಕ್ಷದ ಪರವಾಗಿ, ಶಾಸಕರ ಪರವಾಗಿ ಧನ್ಯವಾದಗಳನ್ನು ಹೇಳುವುದಾಗಿ ತಿಳಿಸಿದರು.ಮುಖಂಡರಾದ ಸುರೇಶ ಮಳಲಿ, ಪರಮಾನಂದ ಬಗಲಿ ಮಾತನಾಡಿದರು. ಈ ವೇಳೆ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಮಾಜಿ ಉಪಾಧ್ಯಕ್ಷ ಹಾಸೀಂ ಆಳಂದ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಹದ್ನೂರ, ಯುವ ಮುಖಂಡ ಮಹಮ್ಮದ್ ಪಟೇಲ್, ಪುರಸಭೆ ನಾಮನಿರ್ದೇಶಿತ ಸದಸ್ಯ ಸಿದ್ದು ಮಲ್ಲೇದ, ಶರಣಮ್ಮ ನಾಯಕ, ಅಂಬಿಕಾ ಪಾಟೀಲ ಸೇರಿದಂತೆ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!
ಎಚ್‌ಎಎಲ್‌ ಮತ್ತೆ ಸಾರ್ವಜನಿಕ ಬಳಕೆ ಪ್ರಸ್ತಾಪ ಪರಿಶೀಲನೆ:ಸಚಿವ