ಡಿಡಿಪಿಐ ಮಾರ್ಗದರ್ಶನವಿಲ್ಲದೆ ಫಲಿತಾಂಶ ಕುಂಠಿತ

KannadaprabhaNewsNetwork |  
Published : Sep 10, 2025, 01:03 AM IST
ಫೋಟೋ 9ಪಿವಿಡಿ3ಪಾವಗಡ,ತಾಲೂಕು ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದ ಉದ್ಘಾಟನೆಯನ್ನು ಶಾಸಕ ಎಚ್‌.ವಿ.ವೆಂಕಟೇಶ್ ಹಾಗೂ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ನೆರೆವೇರಿಸಿದರು.ಫೋಟೋ 9ಪಿವಿಡಿ4ತಾಲೂಕು ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು ಶಾಸಕ ಎಚ್‌.ವಿ.ವೆಂಕಟೇಶ್‌,ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹಾಗೂ ಬಿಇಒ ರೇಣುಕಮ್ಮ ಸನ್ಮಾನಿಸಿ ಗೌರವಿಸಿದರು.  | Kannada Prabha

ಸಾರಾಂಶ

ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಅವರ ಸರಿಯಾದ ಮಾರ್ಗದರ್ಶವಿಲ್ಲದ ಪರಿಣಾಮ ತಾಲೂಕು ಹಾಗೂ ಜಿಲ್ಲೆಯಲ್ಲಿ ಕಳೆದ ಸಾಲಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಕುಂಠಿತವಾಗಿದೆ ಎಂದು ಶಾಸಕ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಹಾಗೂ ತುಮುಲ್‌ ಅಧ್ಯಕ್ಷರಾದ ಎಚ್‌.ವಿ.ವೆಂಕಟೇಶ್‌ ಬೇಸರ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಕನ್ನಡಪ್ರಭವಾರ್ತೆ ಪಾವಗಡ

ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಅವರ ಸರಿಯಾದ ಮಾರ್ಗದರ್ಶವಿಲ್ಲದ ಪರಿಣಾಮ ತಾಲೂಕು ಹಾಗೂ ಜಿಲ್ಲೆಯಲ್ಲಿ ಕಳೆದ ಸಾಲಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಕುಂಠಿತವಾಗಿದೆ ಎಂದು ಶಾಸಕ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಹಾಗೂ ತುಮುಲ್‌ ಅಧ್ಯಕ್ಷರಾದ ಎಚ್‌.ವಿ.ವೆಂಕಟೇಶ್‌ ಬೇಸರ ವ್ಯಕ್ತಪಡಿಸಿದ ಘಟನೆ ನಡೆದಿದೆ.

ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ಮಂಗಳವಾರ ಪಟ್ಟಣದ ಎಸ್‌ಎಸ್‌ಕೆ ಬಯಲು ರಂಗಮಂದಿರಲ್ಲಿ ಹಮ್ಮಿಕೊಂಡಿದ್ದ ಮಾಜಿ ರಾಷ್ಟ್ರಪತಿ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ, ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಶಾಲೆಗಳು ಉತ್ತಮ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕೈಗಾರಿಕಾ ಘಟಕಗಳಿದ್ದಂತೆ. ಉತ್ತಮ ಮಾರ್ಗದರ್ಶನ ಹಾಗೂ ವಿದ್ಯೆ ರೂಪಿಸಿದ ಶಿಕ್ಷಕರನ್ನು ವಿದ್ಯಾರ್ಥಿಗಳು ಎಂದು ಮರೆಯುವುದಿಲ್ಲ. ವಿದ್ಯಾರ್ಥಿಗಳ ಮನದಲ್ಲಿ ಸದಾ ಉಳಿದು ಸ್ಮರಿಸುವಂತಹ ಶಿಕ್ಷಕರಾಗಬೇಕು. ಉತ್ತಮ ವ್ಯಾಸಂಗ ಮಾಡಿ ಅರ್ಹತೆ ಮೇಲೆ ತಾವು ಶಿಕ್ಷಕರಾಗಿದ್ದು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಕೊರತೆ ಪರಿಣಾಮ ವಿದ್ಯಾರ್ಥಿಗಳು ಖಾಸಗಿ ಶಾಲೆಗಳ ಮೊರೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಮಧುಗಿರಿ ಡಿಡಿಪಿಐ ಅವರು ಪಾವಗಡ ತಾಲೂಕಿನ ಕುರಿತು ನಿರ್ಲಕ್ಷ್ಯವಹಿಸಿದ್ದರಿಂದ ಇಲ್ಲಿನ ಶಿಕ್ಷಕರಿಗೆ ಸೂಕ್ತಮಾರ್ಗದರ್ಶನ ಸಿಗದೆ ಇದ್ದುದ್ದರಿಂದ ಈ ಬಾರಿ ಎಸ್‌ಎಸ್ಎಲ್‌ಸಿಯಲ್ಲಿ ಫಲಿತಾಂಶದಲ್ಲಿ ಹಿನ್ನೆಡೆಯಾಗಿದೆ. ಇನ್ನೂ ಮುಂದೆ ಇದನ್ನು ಸರಿಪಡಿಸಿಕೊಳ್ಳಬೇಕೆಂದ ಅವರು, ನಮ್ಮ ತಂದೆ ಮಾಜಿ ಸಚಿವ ವೆಂಕಟರಮಣಪ್ಪ ಅವರ ಮಾರ್ಗದರ್ಶನದಲ್ಲಿ, ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಮಹತ್ವ ನೀಡಿದ್ದು, ಹೊಸ ಶಾಲೆಗಳ ಮಂಜೂರಾತಿ ಹಾಗೂ ಶಾಲಾ ಕಟ್ಟಡಗಳ ನವೀಕರಣಕ್ಕೆ ಆದ್ಯತೆ ನೀಡಲಾಗಿದೆ ಎಂದರು.

ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಮಾತನಾಡಿ, ಸರ್ಕಾರಿ ಶಾಲೆಗಳು ಸುಧಾರಣೆ ಕಾಣಬೇಕು. ಶಿಕ್ಷಕರ ಕೊರತೆ ಹಾಗೂ ಮೂಲಭೂತ ಸೌಲಭ್ಯಗಳ ಅಭಾವದಿಂದ ಗ್ರಾಮೀಣ ವಿದ್ಯಾರ್ಥಿಗಳು ಖಾಸಗಿ ಶಾಲೆಗಳತ್ತ ಮುಖ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಹಾಗೂ ಶಾಸಕರು ಸಮಸ್ಯೆ ಗಂಭೀರವಾಗಿ ಪರಿಗಣಿಸಿ ಸರ್ಕಾರಿ ಶಾಲೆಗಳ ಉಳಿವಿನತ್ತ ಹಾಗೂ ಶಿಕ್ಷಕರ ಸಮಸ್ಯೆ ನಿವಾರಿಸುವತ್ತ ಆಸಕ್ತಿ ವಹಿಸುವಂತೆ ಕರೆ ನೀಡಿದರು.

ತುಮಕೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾರ್ಚಾರಾದ ಟಿ.ಆರ್‌,ಲೀಲಾವತಿ ಅವರು, ಪ್ರದಾನ ಭಾಷಣ ಮಂಡಿಸಿ, ಶಿಕ್ಷಣ ಕ್ಷೇತ್ರ ಸುಧಾರಣೆ, ಸರ್ವೆಪಲ್ಲಿ ರಾಧಾಕೃಷ್ಣನ್‌ ಅವರ ಅಶಯ ಹಾಗೂ ಶಾಸಕ ಎಚ್‌.ವಿ.ವೆಂಕಟೇಶ್‌ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಆದ್ಯತೆ ಕುರಿತು ವಿವರಿಸಿ, ಶ್ಲಾಘನೆ ವ್ಯಕ್ತಪಡಿಸಿದರು. ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ರೇಣುಕಮ್ಮ, ಮಾತನಾಡಿದ್ದು, ಇದೇ ವೇಳೆ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಪುರಸಭಾ ಅಧ್ಯಕ್ಷರಾದ ಸುದೇಶ್ ಬಾಬು, ಪಿ.ಎಚ್‌.ರಾಜೇಶ್, ಪುರಸಭೆ ಸದಸ್ಯ ತೆಂಗಿನಕಾಯಿ ರವಿ, ತಾಪಂ ಇಒ ಬಿ.ಕೆ.ಉತ್ತಮ್, ಇಂದ್ರಾಣಮ್ಮ, ಶ್ರೀನಿವಾಸಲು, ಕಟ್ಟಾ ನರಸಿಂಹಮೂರ್ತಿ, ಮುಖ್ಯ ಶಿಕ್ಷಕ ರಾಮಚಂದ್ರಪ್ಪ, ಖಾಜಾ ಹುನೇನ್‌, ಯತಿಕುಮಾರ್‌, ರೈತ ಸಂಘದ ಅಧ್ಯಕ್ಷ ನರಸಿಂಹ ರೆಡ್ಡಿ, ಬಿಆರ್‌ಸಿ ಜಿ.ವಿ.ವೆಂಕಟೇಶ್, ಇಸಿಒ ವೇಣುಗೋಪಾಲರೆಡ್ಡಿ, ಶಿಕ್ಷಕರಾದ ತಿಮ್ಮಭೋವಿ, ಆರ್‌.ಎಂ.ನರಸಿಂಹ, ರಾಮಕೃಷ್ಣಪ್ಪ, ಶೇಖರ್‌ಬಾಬು, ಬೊಮ್ಮಣ್ಣ, ನಾಗರಾಜ ನಾಯಕ, ಮಾರುತೇಶ್‌, ಕರಿಯಣ್ಣ, ಚೌಡಪ್ಪ, ಚಿಕ್ಕಣ್ಣ, ವಿಜಯಕುಮಾರ್‌, ರಾಮಾಂಜಿನೇಯಲು, ಶಂಕರಪ್ಪ, ಸಾವಿತ್ರಮ್ಮಇತರರಿದ್ದರು.

PREV

Recommended Stories

ಅಕ್ಕಿ ಅಕ್ರಮ ಹಗರಣ: ಸತ್ತವರಿಗೂ ಅನ್ನಭಾಗ್ಯ !
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು