ಕನ್ನಡಪ್ರಭ ವಾರ್ತೆ ಬೆಳಗಾವಿ
ಪತ್ರಿಕಾ ಪ್ರಕಟಣೆಯಲ್ಲಿ ನೀಡಿರುವ ಅವರು, ಮತದಾರರು ಬಿಜೆಪಿಯ ಆಡಳಿತ ಮತ್ತು ಅಭಿವೃದ್ಧಿ ಕಾರ್ಯವೈಖರಿಯನ್ನು ಮೆಚ್ಚಿ ಭಾರೀ ಬೆಂಬಲ ನೀಡಿದ್ದಾರೆ. ಈ ಗೆಲುವು ಪಕ್ಷದ ಕಾರ್ಯಕರ್ತರ ಪರಿಶ್ರಮಕ್ಕೂ ಹಾಗೂ ಜನರ ನಂಬಿಕೆಗೆ ಸಾಕ್ಷಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಡಳಿತದ ವಿರುದ್ಧ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಾರಿ ದಿಟ್ಟ ನಿರ್ಧಾರ ಕೈಗೊಂಡು ಬಿಜೆಪಿಗೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದ ದುರಾಡಳಿತ, ದಬ್ಬಾಳಿಕೆ ಮತ್ತು ಅಶಾಂತಿಯನ್ನು ಜನತೆ ತಿರಸ್ಕರಿಸಿದ್ದಾರೆ ಎಂದು ತಿಳಿಸಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ, ದೂರದೃಷ್ಟಿ ಹಾಗೂ ಪಕ್ಷದ ಸಂಘಟನಾ ಶಕ್ತಿ ಈ ಗೆಲುವಿಗೆ ಕಾರಣವಾಗಿದೆ. ವಿರೋಧ ಪಕ್ಷಗಳ ಸುಳ್ಳು ಭರವಸೆಗಳಿಂದ ಬೇಸತ್ತ ಜನತೆ ಬಿಜೆಪಿಯತ್ತ ಮುಖ ಮಾಡಿದ್ದಾರೆಂದು ಈ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಎಲ್ಲ ಅಭ್ಯರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಈ ಫಲಿತಾಂಶಗಳು ಕರ್ನಾಟಕದ ರಾಜಕೀಯ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ದೇಶವನ್ನು ವಿಶ್ವಗುರುವನ್ನಾಗಿಸುವ ಸಂಕಲ್ಪಕ್ಕೆ ಜನತೆ ದೇಶದಾದ್ಯಂತ ಬೆಂಬಲ ಸೂಚಿಸುತ್ತಿದ್ದಾರೆ.
-ಜಗದೀಶ ಶೆಟ್ಟರ್, ಬೆಳಗಾವಿ ಲೋಕಸಭಾ ಸಂಸದರು.