ಉಡುಪಿ: ವಿವಸ್ತ್ರರಾಗಿದ್ದ ನಿವೃತ್ತ ಸೇನಾಧಿಕಾರಿ ರಕ್ಷಣೆ

KannadaprabhaNewsNetwork |  
Published : Sep 04, 2026, 03:00 AM IST
03ಸೇನಾಧಿಕಾರಿ | Kannada Prabha

ಸಾರಾಂಶ

ಇಲ್ಲಿನ ಅಚ್ಚಡ ರೈಲ್ವೆ ಹಳಿಗಳ ಪಕ್ಕದಲ್ಲಿ ವಿವಸ್ತ್ರರಾಗಿ ಅಸಹಾಯಕ ಸ್ಥಿತಿಯಲ್ಲಿದ್ದ ನಿವೃತ್ತ ಸೇನಾಧಿಕಾರಿಯನ್ನು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ, ಪೊಲೀಸರ ನೆರವಿನಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಪು: ಇಲ್ಲಿನ ಅಚ್ಚಡ ರೈಲ್ವೆ ಹಳಿಗಳ ಪಕ್ಕದಲ್ಲಿ ವಿವಸ್ತ್ರರಾಗಿ ಅಸಹಾಯಕ ಸ್ಥಿತಿಯಲ್ಲಿದ್ದ ನಿವೃತ್ತ ಸೇನಾಧಿಕಾರಿಯನ್ನು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ, ಪೊಲೀಸರ ನೆರವಿನಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಈ ವ್ಯಕ್ತಿಯನ್ನು ತಮಿಳುನಾಡಿನ ಶಶಿಶೇಖರ್ ಠಾಕೂರ್ (67), ಸೇನೆಯಲ್ಲಿ ಲೆಪ್ಟಿನೆಂಟ್ ಕಮಾಂಡರ್ ಆಗಿದ್ದು ನಿವೃತ್ತರಾಗಿದ್ದಾರೆ ಎಂದು ಗುರುತಿಸಲಾಗಿದೆ. ವಿವಸ್ತ್ರರಾಗಿದ್ದ ಅವರು ರೈಲ್ವೆ ಹಳಿಗಳ ಪಕ್ಕದಲ್ಲಿ ಬಿದ್ದುಕೊಂಡಿದ್ದರು, ತೀರಾ ದಣಿದಂತಿದ್ದ ಅವರು ನಡೆದಾಡುವುದಕ್ಕೂ ಸಾಧ್ಯವಾಗುತ್ತಿರಲಿಲ್ಲ, ಯಾರೋ ಇದನ್ನು ಗಮನಿಸಿ ವಿಶು ಶೆಟ್ಟಿ ಅವರಿಗೆ ಮಾಹಿತಿ ನೀಡಿದ್ದರು. ವಿಶು ಅವರು ಕಾಪು ಪೊಲೀಸ್ ಸಿಬ್ಬಂದಿ ಮಂಜುನಾಥ ಶೆಟ್ಟಿ ಸಹಾಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದೃಢಕಾಯ ಹೊಂದಿರುವ ಅವರು ಮೇಲ್ನೋಟಕ್ಕೆ ಮರೆವಿನ ಖಾಯಿಲೆಯಿಂದ ಬಳಲುತ್ತಿದ್ದು, ಜೊತೆಗೆ ಮಾನಸಿಕ ಖಿನ್ನತೆಗೊಳಗಾಗಿದ್ದಾರೆ ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಷ್ಟ್ರೀಯ ಸೇವಾ ಯೋಜನೆ ಘಟಕ ಉದ್ಘಾಟನೆ
ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಶೀಘ್ರ ಮುಕ್ತ