ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್. ಕಾಳೀರಯ್ಯರಿಗೆ ಅಭಿನಂದನೆ ಸಲ್ಲಿಕೆ

KannadaprabhaNewsNetwork | Published : Feb 23, 2025 12:34 AM

ಸಾರಾಂಶ

ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದೇನೆ. ಕ್ಷೇತ್ರದ ಜನಪ್ರತಿನಿಧಿಗಳ, ಶಿಕ್ಷಣ ಇಲಾಖೆ ಅಧಿಕಾರಿಗಳ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಸಹಕಾರದಿಂದ ತಾಲೂಕಿನಲ್ಲಿ ಪ್ರತಿ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಬರಲು ಸಾಕಷ್ಟು ಶ್ರಮ ಪಟ್ಟಿದ್ದೇನೆ.

ಕನ್ನಡಪ್ರಭ ವಾರ್ತೆ ಮದ್ದೂರು

ಶಿಕ್ಷಣ ಇಲಾಖೆಯಲ್ಲಿ 28 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್. ಕಾಳೀರಯ್ಯ ಅವರನ್ನು ಕದಂಬ ಲಯನ್ಸ್ ಸಂಸ್ಥೆಯಿಂದ ಅಭಿನಂದಿಸಲಾಯಿತು.

ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದ ಆರ್.ಆರ್.ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿವೃತ್ತ ಬಿಇಒ ಕಾಳೀರಯ್ಯರಿಗೆ ಸಂಸ್ಥೆ ಅಧ್ಯಕ್ಷ ಕೆಂಗಲ್ ಗೌಡ ಮತ್ತು ಪದಾಧಿಕಾರಿಗಳು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಕಾಳೀರಯ್ಯ ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದೇನೆ. ಕ್ಷೇತ್ರದ ಜನಪ್ರತಿನಿಧಿಗಳ, ಶಿಕ್ಷಣ ಇಲಾಖೆ ಅಧಿಕಾರಿಗಳ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಸಹಕಾರದಿಂದ ತಾಲೂಕಿನಲ್ಲಿ ಪ್ರತಿ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಬರಲು ಸಾಕಷ್ಟು ಶ್ರಮ ಪಟ್ಟಿದ್ದೇನೆ ಎಂದರು.

ಸಂಸ್ಥೆ ಅಧ್ಯಕ್ಷ ಕೆಂಗಲ್ ಗೌಡ ಮಾತನಾಡಿ, ಕಾಳೀರಯ್ಯ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲೂ ಇಲಾಖೆಗೆ ಇವರ ಮಾರ್ಗದರ್ಶನ ಅತ್ಯಗತ್ಯವಾಗಿದೆ ಎಂದರು.

ಈ ವೇಳೆ ಉಪಾಧ್ಯಕ್ಷ ಕೆ. ಶಿವಕುಮಾರ್, ಕಾರ್ಯದರ್ಶಿ ಹೆಚ್. ಸುರೇಶ್, ಖಜಾಂಚಿ ಎಸ್. ಬಿ.ನಾಗರಾಜು, ಸದಸ್ಯರುಗಳಾದ ಸಿದ್ದೇಗೌಡ, ಹರೀಶ, ಮಹೇಂದ್ರ, ಆತ್ಮಾನಂದ, ಮೆಳ್ಳಹಳ್ಳಿ ಶ್ರೀನಿವಾಸ್, ಮತ್ತಿತರರು ಇದ್ದರು.

ಅಗ್ನಿಶಾಮಕ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕ್ಷಯ ರೋಗದ ಬಗ್ಗೆ ಅರಿವು

ಮದ್ದೂರು: ಪಟ್ಟಣದ ಅಗ್ನಿಶಾಮಕ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕ್ಷಯ ರೋಗದ ಬಗ್ಗೆ ಅರಿವು ಹಾಗೂ ತಪಾಸಣೆ ನಡೆಯಿತು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಕ್ಷಯರೋಗ ಹರಡುವ ಬಗ್ಗೆ, ಲಕ್ಷಣಗಳು ಪರೀಕ್ಷೆ ಹಾಗೂ ಚಿಕಿತ್ಸಾ ವಿಧಾನಗಳ ಬಗ್ಗೆ ತಿಳಿಸಿದರು. 100 ದಿನಗಳ ಕ್ಷಯ ರೋಗದ ಅಭಿಯಾನದ ಅಂಗವಾಗಿ ಸಿಬ್ಬಂದಿಗೆ ರೋಗಲಕ್ಷಣಗಳ ಬಗ್ಗೆ ತಿಳಿಸಿ ತಪಾಸಣೆ ನಡೆಸಲಾಯಿತು.

ಕ್ಷಯ ಮುಕ್ತ ಮಂಡ್ಯ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಿ ರೋಗದ ಲಕ್ಷಣಗಳು ಕಂಡು ಬಂದರೆ ಎಲ್ಲರೂ ಸರ್ಕಾರಿ ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಿಸಿಕೊಳ್ಳುವಂತೆ ತಿಳಿಸಿದರು. ಇದೇ ವೇಳೆ ಕ್ಷಯರೋಗದ ಬಗ್ಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು. ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಆರೋಗ್ಯ ಇಲಾಖೆ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಮಣಿ, ಎಸ್‌ಟಿಎಸ್ ಕೆಂಪೇಗೌಡ, ಎಸ್‌ಟಿಎಲ್‌ಸಿ ಅರುಣ್ ಕುಮಾರ್ ಹಾಜರಿದ್ದರು.

Share this article