ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಪೊಲೀಸ್ ಸಮುದಾಯ ಭವನ ‘ಮೈತ್ರಿ’ಯಲ್ಲಿ ಮಂಗಳವಾರ ನಡೆದ ಕೊಡಗು ಜಿಲ್ಲಾ ನಿವೃತ್ತ ಪೊಲಿಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ‘ಬೆಳ್ಳಿ ಹಬ್ಬ’ದಲ್ಲಿ ಅವರು ಮಾತನಾಡಿದರು.
ತಾವು ಈ ಹಿಂದೆ ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಕ್ಷಣಗಳನ್ನು ಸ್ಮರಿಸಿಕೊಂಡರು.ಮೈತ್ರಿ ಕಟ್ಟಡದ ಒಂದೊಂದು ಇಟ್ಟಿಗೆ, ಕಲ್ಲಿನಲ್ಲೂ ಪೊಲೀಸರ, ದಾನಿಗಳ, ಸಾರ್ವಜನಿಕರ ಬೆವರು ಅಡಗಿದೆ’ ಎಂದು ಹೇಳಿದರು.
ಪೊಲೀಸರೇ ಆಗಲಿ, ಸೈನಿಕರೇ ಆಗಲಿ ಕರ್ತವ್ಯ ನಿಷ್ಠೆ ಇರಲೇಬೇಕು ಎಂದು ಪ್ರತಿಪಾದಿಸಿದರು.
ನಿವೃತ್ತ ಜಾಯಿಂಟ್ ಕಂಟ್ರೋಲರ್ ಫೈನಾನ್ಸ್ ಬಿ.ಜಿ.ಮಾದಪ್ಪ ಮಾತನಾಡಿ, ‘ನಿವೃತ್ತಿಯ ಬಳಿಕ ಸುಮ್ಮನಿರದೇ ಏನಾದರೊಂದು ಕಾರ್ಯ ಮಾಡುತ್ತಿರಬೇಕು. ಆರೋಗ್ಯವನ್ನು ಉತ್ತಮ ಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.
ಕೊಡಗು ಜಿಲ್ಲಾ ನಿವೃತ್ತ ಪೊಲಿಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಕೆ.ಉತ್ತಪ್ಪ ಮಾತನಾಡಿ ನಿವೃತ್ತ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ನಿವೃತ್ತಿಯ ತಮ್ಮ ಜೀವನದಲ್ಲಿ ಹೆಚ್ಚಿನ ಸಮಯವನ್ನು ಕುಟುಂಬಕ್ಕೆ ನೀಡುವುದರೊಂದಿಗೆ ಆರೋಗ್ಯ ಸಂರಕ್ಷಣೆಗೆ ಒತ್ತು ನೀಡಬೇಕು’ ಎಂದು ಮನವಿ ಮಾಡಿದರು.
ಬೆಳ್ಳಿ ಮಹೋತ್ಸವದ ಅಂಗವಾಗಿ ಹೊರ ತರಲಾದ ‘ಸ್ಮರಣ ಸಂಚಿಕೆ’ಯನ್ನು ಅನಾವರಣಗೊಳಿಸಲಾಯಿತು. ಬೆಳ್ಳಿ ಹಬ್ಬಕ್ಕೆ ನೆರವನ್ನು ನೀಡಿದವರನ್ನು ಹಾಗೂ ವೇದಿಕೆಯಲ್ಲಿ ಆಸೀನರಾಗಿದ್ದ ಅತಿಥಿಗಳನ್ನು ಗೌರವಿಸಲಾಯಿತು. ಇದಕ್ಕೂ ಮುನ್ನ ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ಬಿ.ಕೆ.ಶಿವರಾಂ ಉದ್ಘಾಟಿಸಿದರು.