ಮುನಿರಾಬಾದ್ ಜಲಸಂಪನ್ಮೂಲ ಇಲಾಖೆಯಲ್ಲಿ ಅಧೀಕ್ಷಕ ಅಭಿಯಂತರ ಕಚೇರಿಯಲ್ಲಿ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿದ್ದ ಯಲ್ಲಪ್ಪ ಬಾಗಲವಾಡ್ ಅವರು ವಯೋನಿವೃತ್ತಿಹೊಂದಿದ್ದ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಗಂಗಾವತಿ: ಮುನಿರಾಬಾದ್ ಜಲಸಂಪನ್ಮೂಲ ಇಲಾಖೆಯಲ್ಲಿ ಅಧೀಕ್ಷಕ ಅಭಿಯಂತರ ಕಚೇರಿಯಲ್ಲಿ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿದ್ದ ಯಲ್ಲಪ್ಪ ಬಾಗಲವಾಡ್ ಅವರು ವಯೋನಿವೃತ್ತಿಹೊಂದಿದ್ದ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಇತ್ತೀಚಿಗೆ ಬೆಂಗಳೂರಿನಲ್ಲಿ ಜರುಗಿದ ಕನ್ನಡಪ್ರಭ ಮತ್ತು ಏಷ್ಯಾನೆಟ್ ಗ್ರೂಪ್ ನೀಡಿದ ಎಮಿನೆಂಟ್ ಎಂಜಿನಿಯರ್ ಅವಾರ್ಡ್ ಸ್ವೀಕರಿಸಿದ್ದ ಯಲ್ಲಪ್ಪ ಬಾಗಲವಾಡ್ ಅವರು ಸೆ. 30ರಂದು ವಯೋನಿವೃತ್ತಿ ಹೊಂದಿದ್ದಾರೆ. ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ಅಳವಡಿಸಿದ ಪ್ರಮುಖರಲ್ಲಿ ಒಬ್ಬರಾದ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಯಲ್ಲಪ್ಪ ಬಾಗಲವಾಡ್ ಅವರ ಸೇವೆ ಅನನ್ಯವಾಗಿದೆ. ಪ್ರಸ್ತುತ ಮನಿರಾಬಾದ್ ಜಲಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸೇವೆ ಸಲ್ಲಿಸುತ್ತಿರುವ ಅವರು, ಬಿಇ ಪದವಿ ಮುಗಿದ ತಕ್ಷಣ ವಿವಿದ ಸ್ಥಳಗಳಲ್ಲಿ ಖಾಸಗಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. 2003ರಲ್ಲಿ ಜಲಸಂಪನ್ಮೂಲ ಇಲಾಖೆಯ ಶಿರವಾರ ವಿಭಾಗಕ್ಕೆ ಅಭಿಯಂತರಾಗಿ ನೇಮಕಗೊಂಡರು. ಕೆರೆ ತುಂಬಿಸುವ ಯೋಜನೆ ಸೇರಿದಂತೆ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ದುರಸ್ತಿ ಕಾರ್ಯಾಚರಣೆಯ ತಂಡದಲ್ಲಿದ್ದರು. ಆ ವೇಳೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿದ್ದ ಡಿ.ಕೆ. ಶಿವಕುಮಾರ ಅವರು ಸೇರಿದಂತೆ ಸಚಿವರು ಇವರ ತಂಡದ ಸೇವೆಯನ್ನು ಪ್ರಶಂಸಿಸಿ, ಮುನಿರಾಬಾದ್‌ನಲ್ಲಿ ನಡೆದ ಅಭಿನಂದನ ಸಮಾರಂಭದಲ್ಲಿ ಸನ್ಮಾನಿಸಿದ್ದಾರೆ.
ಬೀಳ್ಕೊಡುಗೆ: ಸೆ. 30ರಂದು ವಯೋನಿವೃತ್ತಿ ಹೊಂದಿದ್ದ ಹಿನ್ನೆಲೆಯಲ್ಲಿ ಯಲ್ಲಪ್ಪ ಬಾಗಲವಾಡ್ ಅವರನ್ನು ಅಧಿಕಾರಿ ವರ್ಗದವರು ಸನ್ಮಾನಿಸಿದರು. ನೀರಾವರಿ ಕೇಂದ್ರ ವಲಯ ಮುಖ್ಯ ಅಭಿಯಂತರ ಮನೋಜ್ ಕುಮಾರ್ ಗಡಬಳ್ಳಿ ಅಧ್ಯಕ್ಷತೆ ವಹಿಸಿದ್ದರು. ಅಧೀಕ್ಷಕ ಅಭಿಯಂತ ಎಸ್.ಬಿ. ಮಲ್ಲಿಗೆವಾಡ, ಕಾರ್ಯನಿರ್ವಾಹಕ ಅಭಿಯಂತರ ನಾಗನಾಥ, ತುಂಗಭದ್ರಾ ಕಾರ್ಯನಿರ್ವಾಹಕ ಅಭಿಯಂತರ ಗುಣ ನಿಯಂತ್ರಣ ವಿಭಾಗದ ನಾಗೇಶ, ವಡ್ಡರಹಟ್ಟಿ ನೀರಾವರಿ ಇಲಾಖೆಯ ಇ.ಇ. ಗೋಡೆಕಾರ್, ನಿವೃತ್ತ ಅಧೀಕ್ಷಕ ಅಭಿಯಂತರ ಕೆ.ಎಚ್.ಬಿ. ಶಿವಶಂಕರ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.