ಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಸಾಲಿಗ್ರಾಮ ತಾಲೂಕಿನ ದೇವಿತಂದ್ರೆ ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಎನ್.ಡಿಎ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದಲ್ಲಿ ಜನರ ನಿರೀಕ್ಷೆಗೆ ವಿರುದ್ಧವಾಗಿ ಎಂದು ನಡೆದುಕೊಂಡಿಲ್ಲ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷಗಳಾಗಿದ್ದರೂ ಈವರೆಗೆ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ, ಇದನ್ನು ಜನರು ಪ್ರಶ್ನಿಸಬೇಕು ಎಂದು ತಿಳಿಸಿದರು.ಎಚ್.ಡಿ. ಕುಮಾರಸ್ವಾಮಿ ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದ ಅವಧಿಯಲ್ಲಿ ನಾನು ಒಂದು ವರ್ಷದಲ್ಲಿಯೇ ಕ್ಷೇತ್ರಕ್ಕೆ ಒಂದು ಸಾವಿರ ಕೋಟಿ ರು. ಗಳ ಅನುದಾನ ತಂದು ಅಭಿವೃದ್ಧಿ ಮಹಾಪೂರವನ್ನೇ ಹರಿಸಿದ್ದೆ, ಆದರೆ ಈಗ ಆಯ್ಕೆಯಾಗಿರುವವರು ಎಷ್ಟು ಹಣ ತಂದಿದ್ದಾರೆಂದು ಕೇಳಿದರು.
ವಿಷದ ಬಾಟಲಿ ಹಿಡಿದು ಮತ ಕೇಳಿದರೆ ಸಾಕು
ಎರಡು ಕೋಟಿಗೂ ಅಧಿಕ ಹಣ ವಸೂಲಿ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗೆಲುವು ನಿಶ್ಚಿತ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಸಂಸದರಾಗಿ ಆಯ್ಕೆಯಾದರೆ ಆನಂತರ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಲಿದ್ದು, ಇದರಿಂದ ರಾಜ್ಯ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದರು.
ಜಿಲ್ಲಾ ಗ್ರಾಮಾಂತರ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಎಂ.ಡಿ. ದಾಕ್ಷಾಯಿಣಿ, ಜಿಪಂ ಮಾಜಿ ಸದಸ್ಯ ಎಂ.ಟಿ. ಕುಮಾರ್, ಜಿಲ್ಲಾ ಗ್ರಾಮಾಂತರ ಬಿಜೆಪಿ ಮಾಜಿ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಉಮಾಶಂಕರ, ಬಿಜೆಪಿ ಮುಖಂಡರಾದ ಎಚ್.ವಿ. ಅನಿಲ್, ಮಾರ್ಕಂಡೇಯ ಸ್ವಾಮಿ, ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಮಹೇಶ್, ಜೆಡಿಎಸ್ ಮುಖಂಡರಾದ ಮಂಜೇಗೌಡ, ಶ್ರೀಧರ, ಕೆ.ಎಸ್. ಮಲ್ಲಪ್ಪ, ಎಸ್.ವಿ. ಪ್ರಕಾಶ್ ಇದ್ದರು.