ವಾಲ್ಮೀಕಿ ನಿಗಮದ ಹಗರಣದ ಹಣ ವಾಪಸ್ಸಾಗಲಿ

KannadaprabhaNewsNetwork |  
Published : Aug 30, 2026, 01:45 AM IST
ಕುಕನೂರು ತಾಲೂಕಿನ ಮಸಬಹಂಚಿನಾಳದಲ್ಲಿ ಶನಿವಾರ ನಡೆದ ಬಿಜೆಪಿ ಎಸ್‌ಐಆರ್‌ ಕಾರ್ಯಕರ್ತರ ಕಾರ್ಯಾಗಾರದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್ ಮಾತನಾಡಿದರು. | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬ ನಾಗರಿಕನೂ ಪ್ರಾಮಾಣಿಕವಾಗಿ ಮತದಾನದ ಹಕ್ಕು ಚಲಾಯಿಸಬೇಕು ಎಂಬ ಉದ್ದೇಶದಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಂಡಿದ್ದಾರೆ.

ಕುಕನೂರು: ಆಡಳಿತದಲ್ಲಿ ಕಾಂಗ್ರೆಸ್ ಹಗರಣಗಳ ಸರಮಾಲೆಯೇ ಇದ್ದು, ನಾಗೇಂದ್ರ ರಾಜೀನಾಮೆ ಜತೆ ವಾಲ್ಮೀಕಿ ನಿಗಮದ ಹಗರಣದ ಹಣ ಸಹ ವಾಪಸ್ಸಾಗಲಿ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಆಗ್ರಹಿಸಿದ್ದಾರೆ.

ತಾಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಶನಿವಾರ ಯಲಬುರ್ಗಾ ಬಿಜೆಪಿ ಮಂಡಲದಿಂದ ಜರುಗಿದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ (ಎಸ್‌ಐಆರ್‌) ಎರಡನೇ ಹಂತದ ಕಾರ್ಯಕರ್ತರ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸೇರಿದಂತೆ ಸಾಲು ಸಾಲು ಹಗರಣಗಳು ನಡೆದಿವೆ. ಜವಾಬ್ದಾರಿಯಿಲ್ಲದ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಮುಖ್ಯಮಂತ್ರಿ ಬಂಡತನದ ರಾಜಕಾರಣ ಮಾಡಿದರು. ಹಗರಣದ ಹಣ ವಾಪಸ್ ಆಗಲಿ ಎಂದು ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬ ನಾಗರಿಕನೂ ಪ್ರಾಮಾಣಿಕವಾಗಿ ಮತದಾನದ ಹಕ್ಕು ಚಲಾಯಿಸಬೇಕು ಎಂಬ ಉದ್ದೇಶದಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಂಡಿದ್ದಾರೆ. ನಕಲಿ ಹಾಗೂ ಸುಳ್ಳು ಮತದಾರರ ಹೆಸರು ತೆಗೆದುಹಾಕುವ ಪ್ರಕ್ರಿಯೆಯಲ್ಲಿ ಬಿಎಲ್‌ಎ–2 ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ. ಇದರಿಂದ ಪರಿಷ್ಕೃತ ಮತದಾರರ ಪಟ್ಟಿ ಸಿದ್ಧವಾಗಲಿದೆ ಎಂದು ಹೇಳಿದರು.

ಜಿಲ್ಲೆ ಈ ಬಾರಿ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ ಕ್ಷೇತ್ರದ ಶಾಸಕರು ಸಾರ್ವಜನಿಕರ ಸಂಕಷ್ಟ ನಿರ್ಲಕ್ಷಿಸಿದ್ದಾರೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಕ್ಷೇತ್ರದ ಕೆರೆಗಳನ್ನು ತುಂಬಿಸಿ ರೈತರ ಹಿತ ಕಾಪಾಡಲಾಗಿತ್ತು. ಆದರೆ ಪಕ್ಕದ ಬೇಣಕಲ್ ಕೆರೆಗೆ ನೀರು ಹರಿಸುವ ಸಣ್ಣ ಕೆಲಸ ಈಗಿನ ಸರ್ಕಾರಕ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ದೂರಿದರು.

ಕ್ಷೇತ್ರದ ಜನರು ತಮ್ಮ ಹಕ್ಕನ್ನು ಕೇಳಬೇಕು. ಮುಂಬರುವ ದಿನಗಳಲ್ಲಿ ಜನರೇ ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದಲ್ಲಿ ನಡೆಯುತ್ತಿರುವ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಲಾಗುವುದು ಎಂದು ಹೇಳಿದರು.

ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಮಾರುತಿ ಹೊಸಮನಿ, ಬಸಲಿಂಗಪ್ಪ ಭೂತೆ, ವಿಶ್ವನಾಥ ಮರಿಬಸಪ್ಪನವರ, ಶಿವಕುಮಾರ ನಾಗಲಾಪುರಮಠ, ವೀರಣ್ಣ ಹೊಂಬಾಳಿ, ಸುರಪುರ, ಜಿಲ್ಲಾ ಉಪಾಧ್ಯಕ್ಷ ಮಹೇಶ್, ಹಂಚಾಳಪ್ಪ ತಳವಾರ, ವೀರಣ್ಣ ಹುಬ್ಬಳ್ಳಿ, ಶರಣಪ್ಪ ಇಳಿಗೇರ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಗೀತದಿಂದ ಮನಸ್ಸಿಗೆ ನೆಮ್ಮದಿ, ಶಾಂತಿ
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಅನುಮತಿ