ಕನ್ನಡಪ್ರಭ ವಾರ್ತೆ ಹಾಸನ
ಅರ್ಜಿ ಸಲ್ಲಿಸಿದ ಎಲ್ಲಾ ಕಡತಗಳನ್ನು ಬಾಕಿ ಉಳಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಡತಗಳನ್ನು ಹೊರ ತೆಗೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕಚೇರಿಯಲ್ಲೇ ಸಾರಿಗೆ ಸಚಿವರಿಗೆ ಕರೆ ಮಾಡಿ ಕಚೇರಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ತಿಳಿಸಿ, ಅವುಗಳಿಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಾರಿಗೆ ಸಚಿವರು ಹಾಗೂ ಕಾರ್ಯದರ್ಶಿಗಳು ಸ್ಥಳಕ್ಕೆ ಬರುವವರೆಗೂ ಧರಣಿ ನಡೆಸುವುದಾಗಿ ಎಚ್ಚರಿಸಿದರು.ಪೆಂಡಿಂಗ್ ಇಟ್ಟಿರುವ ಎಲ್ಲಾ ಕಡತಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಸಾರ್ವಜನಿಕರಿಗೆ ಸ್ಪಂದಿಸಬೇಕು. ರೈತರು, ಬಡವರು ಬಂದಾಗ ಅವರನ್ನು ಕಾಯಿಸದೇ ಬೇಗ ಕೆಲಸ ಮಾಡಿಕೊಟ್ಟು ಅವರಿಗೆ ನೆರವಾಗಬೇಕು. ಇಲ್ಲವಾದರೆ ಸ್ಥಳೀಯ ಶಾಸಕರು ಹಾಗೂ ತನ್ನ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.