ಕಾಗಿನೆಲೆ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

KannadaprabhaNewsNetwork |  
Published : Jun 19, 2026, 02:15 AM IST
ಕಾಗಿನೆಲೆ ಕಂದಾಯ ನಿರೀಕ್ಷಕ ಆರ್.ಸಿ. ದ್ಯಾಮನಗೌಡ್ರು | Kannada Prabha

ಸಾರಾಂಶ

ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಕಾಗಿನೆಲೆ ಕಂದಾಯ ನಿರೀಕ್ಷಕ ಆರ್.ಸಿ. ದ್ಯಾಮನಗೌಡ್ರು ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಮಧ್ಯಾಹ್ನ ಬಲೆಗೆ ಬೀಳಿಸಿದ್ದಾರೆ.

ಬ್ಯಾಡಗಿ: ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಕಾಗಿನೆಲೆ ಕಂದಾಯ ನಿರೀಕ್ಷಕ ಆರ್.ಸಿ. ದ್ಯಾಮನಗೌಡ್ರು ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಮಧ್ಯಾಹ್ನ ಬಲೆಗೆ ಬೀಳಿಸಿದ್ದಾರೆ.ಕಾಸಂಬಿ ಗ್ರಾಮದ ನಿವಾಸಿ ನಾಗರಾಜ್ ಒಲೇಕಾರ (ಕೆಂಪಲಿಂಗಣ್ಣನವರ್) ಹಾಗೂ ಸುಶೀಲಮ್ಮ ಶೇಖಪ್ಪ ಕೋಟಿಹಾಳ ಅವರ ಕೃಷಿ ಜಮೀನಿನ 13/2 ಕಾಲಂ 11ರಲ್ಲಿ ಹೊಸ ಶರತ್ತಿನ ಬದಲಾಗಿ, ಹಳೆ ಶರತ್ತು ಮಾಡಿ ಉತಾರ ದುರಸ್ತಿ ಮಾಡಿಕೊಡಲು ಕಂದಾಯ ನಿರೀಕ್ಷಕರು 12,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ರೆಡ್ ಹ್ಯಾಂಡ್ ಆಗಿ ಬಲೆಗೆ:ಲಂಚದ ಬೇಡಿಕೆಯಿಂದ ಬೇಸತ್ತ ದೂರುದಾರರು ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಲೆ ಬೀಸಿದ ಲೋಕಾಯುಕ್ತ ಅಧಿಕಾರಿಗಳು, ಗುರುವಾರ ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಕುಮ್ಮೂ ರು ಕ್ರಾಸ್ ಬಳಿ 5,000 ರು. ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನಿರೀಕ್ಷಕ ಆರ್.ಸಿ. ದ್ಯಾಮನಗೌಡ್ರು ಅವರನ್ನು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.ಪ್ರಕರಣ ಸಂಬಂಧ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಸ್ಥಳದಲ್ಲೇ ಅಗತ್ಯ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ಬಳಿಕ ಆರೋಪಿ ಅಧಿಕಾರಿಯನ್ನು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿ, ದಸ್ತಗಿರಿ ಮಾಡಲಾಗಿದ್ದು ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಮುಂದುವರಿಸಿದ್ದಾರೆ.ಪ್ರಕರಣದ ತನಿಖೆಯನ್ನು ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ, ಡಿವೈಎಸ್‌ಪಿ ಮಧುಸೂಧನ, ಇವರ ಮಾರ್ಗದರ್ಶನದಲ್ಲಿ ಕೈಗೊಂಡಿದ್ದು, ತನಿಖಾಧಿಕಾರಿಗಳಾದ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ವಿಶ್ವನಾಥ್ ಕಬ್ಬೂರಿ ಅವರ ನೇತೃತ್ವದ ತಂಡ ಯಶಸ್ವಿಯಾಗಿ ಕಾರ‍್ಯಾಚರಣೆ ನಡೆಸಿದ್ದು, ದಾಳಿಯಲ್ಲಿ ಲೋಕಾಯುಕ್ತ ಇಲಾಖೆಯ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿಯೂ ಭಾಗವಹಿಸಿದ್ದರು.ಸರ್ಕಾರಿ ಸೇವೆಗಳಲ್ಲಿ ಪಾರದರ್ಶಕತೆ ಮತ್ತು ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತ ಇಲಾಖೆ ಕಾರ‍್ಯಚಟುವಟಿಕೆ ನಡೆಸುತ್ತಿದೆ. ಯಾವುದೇ ಅಧಿಕಾರಿ ಸಾರ್ವಜನಿಕ ಕೆಲಸಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಲ್ಲಿ ಲೋಕಾಯುಕ್ತ ಇಲಾಖೆಗೆ ಯಾವುದೇ ಅಂಜಿಕೆ ಇಲ್ಲದ ದೂರು ದಾಖಲಿಸಿ ಎಂದು ಲೋಕಾಯುಕ್ತ ಪೊಲೀಸ್‌ ಇನಸ್ಪೆಕ್ಟರ್‌ ವಿಶ್ವನಾಥ್ ಕಬ್ಬೂರಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಲ್ಲಿ ಕೀಳರಿಮೆ ಉಂಟುಮಾಡದಂತೆ ಎಚ್ಚರ ವಹಿಸಿ
ಶರಣ ಸಾಹಿತ್ಯಕ್ಕೆ ಡಾ.ಸಿದ್ದಯ್ಯ ಪುರಾಣಿಕರ ದೊಡ್ಡ ಕೊಡುಗೆ ಅಪಾರ