ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಂಗಳೂರು ನಗರದ ಮಾದರಿಯಲ್ಲಿ ಬಿ ಖಾತೆಗಳನ್ನು ಎ ಖಾತೆಯಾಗಿ ಬದಲಿಸಲು ಪೂರಕವಾಗಿ ರಾಜ್ಯ ಸರ್ಕಾರ ಈ ತೀರ್ಮಾನ ಮಾಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೆಂಗಳೂರು ಮಾದರಿಯಲ್ಲಿ ರಾಜ್ಯದ ಎಲ್ಲ ಪಂಚಾಯ್ತಿ ರಸ್ತೆಗಳನ್ನೂ ಸರ್ಕಾರಿ ರಸ್ತೆಗಳಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಅದರಂತೆ ಕಂದಾಯ ಅಥವಾ ಖಾಸಗಿ ರಸ್ತೆಗಳೆಲ್ಲವೂ ಸರ್ಕಾರಿ ವ್ಯಾಪ್ತಿಗೆ ಬರಲಿವೆ ಎಂದು ಹೇಳಿದರು.
ಉದಾಹರಣೆಗೆ ಯಾವೊಂದು ಬಡಾವಣೆ ನಿರ್ಮಿಸಲಾಗಿರುತ್ತದೆ. ಅದಕ್ಕೆ ರಸ್ತೆಯನ್ನೂ ಬಡಾವಣೆ ಮಾಲೀಕರು ನಿರ್ಮಿಸಿರುತ್ತಾರೆ. ಆದರೆ ಆ ರಸ್ತೆಯು ಮಾಲೀಕರ ಹೆಸರಿನಲ್ಲೇ ಇರುತ್ತದೆ. ಆಗ ಆ ರಸ್ತೆಯನ್ನು ಸರ್ಕಾರಿ ರಸ್ತೆ ಎಂದೇ ಘೋಷಿಸಲಾಗುವುದು. ಇದರಿಂದ ಸಂಬಂಧಪಟ್ಟ ನಿವೇಶನಗಳಿಗೆ ಸರ್ಕಾರಿ ರಸ್ತೆಯ ಸೌಲಭ್ಯ ದೊರೆಯುತ್ತದೆ ಎಂದು ಶಿವಕುಮಾರ್ ತಿಳಿಸಿದರು.ಇದನ್ನು ನಾನು ಈ ಹಿಂದೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವನಾಗಿದ್ದಾಗ ನಗರಕ್ಕೆ ಸೀಮಿತವಾಗಿ ಮಾಡಿದ್ದೆ. ಈಗ ಎಲ್ಲಾ ಗ್ರಾಪಂಗಳ ವ್ಯಾಪ್ತಿಯಲ್ಲಿ ಇದನ್ನು ವಿಸ್ತರಿಸಲಾಗುತ್ತಿದೆ. ಇದರಿಂದ ಅಂತಹ ಆಸ್ತಿಗಳಲ್ಲಿ ನಿವೇಶನ ಪಡೆದಿರುವವರಿಗೆ ಅನುಕೂಲವಾಗಲಿದೆ ಎಂದು ವಿವರಿಸಿದರು.ಸಾರಿಗೆ ನಿಗಮಗಳ ನಷ್ಟದ ನೋಡಿ ಬಸ್ ದರ ನಿರ್ಧಾರ:
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಚರ್ಚೆ ನಡೆಸಲಾಯಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಇಂಧನ ಬೆಲೆ ಹೆಚ್ಚಳ ಸೇರಿ ವಿವಿಧ ಕಾರಣಗಳಿಂದ ಸಂಸ್ಥೆಗೆ ಎಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿ ನೀಡಲು ಸಾರಿಗೆ ಇಲಾಖೆಯನ್ನು ಕೇಳಿದ್ದೇವೆ. ವರದಿ ಆಧರಿಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.ಆರ್ಥಿಕ ಮುಗ್ಗಟ್ಟು ಕುರಿತು ಚರ್ಚೆ:
ಸಾರಿಗೆ ನಿಗಮಗಳ ಮೇಲೆ 2026ರ ಮಾ.31ರ ವೇಳೆಗೆ 7130.80 ಕೋಟಿ ರು.ಹೊಣೆಗಾರಿಕೆಯಿದೆ. ಅದರಲ್ಲಿ ನೌಕರರ ಭವಿಷ್ಯ ನಿಧಿ ಬಾಕಿ 2298.20 ಕೋಟಿ ರು. ಮತ್ತು ಇಂಧನ ಪಾವತಿ ಬಾಕಿ 822.26 ಕೋಟಿ ರು.ಸೇರಿದೆ. ಅದರ ಜತೆಗೆ, ಇದೀಗ ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣವಿದ್ದ ಕಾರಣದಿಂದಾಗಿ ನಿರಂತರ ಡೀಸೆಲ್ ಬೆಲೆ ಹೆಚ್ಚಳದಿಂದ ನಿಗಮಗಳ ಇಂಧನ ವೆಚ್ಚದ ಮೇಲೆ ಪರಿಣಾಮ ಬೀರುವಂತಾಗಿದೆ. ಇದರ ನಡುವೆಯೇ 2025ರ ಏ.1ರಿಂದ ಅನ್ವಯವಾಗುವಂತೆ ನಾಲ್ಕೂ ನಿಗಮಗಳ 1.05 ಲಕ್ಷ ನೌಕರರ ವೇತನವನ್ನು ಶೇ.12.50ರಷ್ಟು ಹೆಚ್ಚಳ ಮಾಡಲಾಗಿದೆ. ಇದರಿಂದ ಮಾಸಿಕ 72.80 ಕೋಟಿ ರು. ಹಾಗೂ ವಾರ್ಷಿಕ 873.64 ಕೋಟಿ ರು.ಹೆಚ್ಚುವರಿ ವೆಚ್ಚವಾಗಲಿದೆ.
ಇದೀಗ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿ ಪೂರ್ಣಗೊಳಿಸಿರುವ ಪ್ರಕರಣ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಕಾಮಗಾರಿ ಪೂರ್ಣಗೊಂಡಿರುವ ಪ್ರಕರಣಗಳಿಗೆ ಅನ್ವಯವಾಗುವಂತೆ ಹೆಚ್ಚುವರಿ ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ. 2400 ಚದರ ಅಡಿಗಳವರೆಗೆ ಅಳತೆಯ ನಿವೇಶನಗಳಲ್ಲಿ ಶೇ.20% ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ ನಿರ್ಮಿಸಿರುವ ಜಿ+3 (G+3) ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಟಿಲ್ಟ್ ಪಾರ್ಕಿಂಗ್ + 4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳಿಗೆ ಮಾತ್ರ ಈ ವಿನಾಯಿತಿ ಅನ್ವಯಿಸುತ್ತದೆ.ವಾಣಿಜ್ಯ ಕಟ್ಟಡಗಳಿಗೆ ಇಲ್ಲ ಅವಕಾಶ:
‘ವಾಡಿಕೆಯಂತೆ ಜುಲೈ ತಿಂಗಳಲ್ಲಿ ನಡೆಯಬೇಕಾಗಿದ್ದ ಮಳೆಗಾಲದ ವಿಧಾನಮಂಡಲ ಅಧಿವೇಶನವನ್ನು ಎಸ್‌ಐಆರ್ ಹಿನ್ನೆಲೆಯಲ್ಲಿ ಆಗಸ್ಟ್‌ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಆಗಸ್ಟ್ ಮೊದಲ ವಾರ ಅಥವಾ ಎರಡನೇ ವಾರ ಅಧಿವೇಶನದ ದಿನಾಂಕ ನಿಗದಿ ಮಾಡಲಾಗುವುದು. ಬಳಿಕ ದಿನಾಂಕ ಪ್ರಕಟಿಸಲಾಗುವುದು ಎಂದರು. ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿ, ‘ಜುಲೈ ತಿಂಗಳಲ್ಲಿ ಮುಂಗಾರು ಅಧಿವೇಶನ ಕರೆಯಬೇಕಾಗಿತ್ತು. ಸದ್ಯಕ್ಕೆ ಎಸ್ಐಆರ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಮುಗಿಯುವವರೆಗೂ ಕಾಯಲು ತೀರ್ಮಾನಿಸಲಾಗಿದೆ’ ಎಂದು ಹೇಳಿದರು.