ಸರ್ಕಾರಿ ಶಾಲೆಗಳ ಮುಚ್ಚುವ ಮುನ್ನ ಅವಲೋಕನ ಅಗತ್ಯ

KannadaprabhaNewsNetwork |  
Published : Dec 21, 2025, 02:30 AM IST
ಪೋಟೊ: 20ಎಸ್‌ಎಂಜಿಕೆಪಿ01ಶಿವಮೊಗ್ಗದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2025-26 ಕಾರ್ಯಕ್ರಮವನ್ನು ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಯಾವುದೇ ಸರ್ಕಾರಿ ಶಾಲೆಗಳನ್ನು ಸರ್ಕಾರ ಮುಚ್ಚಬಾರದು. ಸರ್ಕಾರಿ ಶಾಲೆಗಳೇ ಮುಚ್ಚಿದರೆ ಒಂದು ವ್ಯವಸ್ಥೆಯನ್ನೇ ಮುಚ್ಚಿದಂತಾಗುತ್ತದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.

ಶಿವಮೊಗ್ಗ: ಯಾವುದೇ ಸರ್ಕಾರಿ ಶಾಲೆಗಳನ್ನು ಸರ್ಕಾರ ಮುಚ್ಚಬಾರದು. ಸರ್ಕಾರಿ ಶಾಲೆಗಳೇ ಮುಚ್ಚಿದರೆ ಒಂದು ವ್ಯವಸ್ಥೆಯನ್ನೇ ಮುಚ್ಚಿದಂತಾಗುತ್ತದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.

ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲ ಭವನ ಸಮಿತಿ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2025-26 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಅನಾವಣಗೊಳಿಸಲು ಅವಕಾಶ ಕಲ್ಪಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳೂ ಅತ್ಯಗತ್ಯವಾಗಿವೆ. ಸರ್ಕಾರಿ ಶಾಲೆಗಳು ಇಂತಹ ಚಟುವಟಿಕಗಳನ್ನು ಆಯೋಜಿಸುವಲ್ಲಿ ಯಶಸ್ವಿಯಾಗಿವೆ ಎಂದರು.

ದೇಶ ಕಟ್ಟಲು ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿರಬೇಕು. ಶಿಕ್ಷಣ ಎಲ್ಲರಿಗೂ ಅತಿ ಅಗತ್ಯವಾಗಿದೆ. ಬಹು ಮುಖ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ದೇಶಕ್ಕೆ ಉತ್ತಮ ಕೊಡುಗೆ ನೀಡುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರಕುತ್ತಿದ್ದರೂ ಕಾರಣಾಂತರಗಳಿಂದ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ. ಇದಕ್ಕೇನು ಸರಿಯಾದ ಕಾರಣ ಎಂಬುದನ್ನು ನಾವೆಲ್ಲ ಅವಲೋಕಿಸುವುದು ಅತಿ ಮುಖ್ಯವಾಗಿದೆ ಎಂದು ಹೇಳಿದರು.

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಚಂದ್ರಭೂಪಾಲ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್.ಎಂ.ಮಧು, ಡಿಡಿಪಿಐ ಮಂಜುನಾಥ್, ಡಯಟ್ ಪ್ರಾಂಶುಪಾಲ ಕೃಷ್ಣಮೂರ್ತಿ, ಶಿವಮೊಗ್ಗ ಬಿಇಒ ರಮೇಶ್, ಜಿಪಿಟಿ ರಾಜ್ಯಾಧ್ಯಕ್ಷ ಮುರಳೀಧರ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಗಂಭೀರ ಚಿಂತನೆ ಅಗತ್ಯ

ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಮಾತನಾಡಿ, ಸ್ವಾತಂತ್ರ್ಯ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಅನೇಕ ಬದಲಾವಣೆಗಳನ್ನು ತಂದಿದೆ, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಾನ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸೌಲಭ್ಯಗಳನ್ನು ನೀಡಿ ಸುಸಜ್ಜಿತ ವ್ಯವಸ್ಥೆ ಕಲ್ಪಿಸಿದೆ. ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣ ಆಗುತ್ತಿದ್ದು, ಇದು ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರುತ್ತಿದೆ. ಆದಕಾರಣ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು, ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ