ಪರಿಶಿಷ್ಟ ಜಾತಿ, ಪಂಗಡಗಳ ಅನುದಾನ ಬಳಕೆ ಪರಿಶೀಲನೆ: ಡಾ.ಕೆ.ಜೆ.ಕಾಂತರಾಜ್

KannadaprabhaNewsNetwork | Published : Apr 11, 2025 12:32 AM

ಸಾರಾಂಶ

ತರೀಕೆರೆವಿಶೇಷ ಘಟಕ ಯೋಜನೆಯಡಿ ತಾಲೂಕಿನಲ್ಲಿ 2020-21ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ ಪಂಗಡಗಳಿಗೆ ಬಿಡುಗಡೆಯಾಗಿರುವ ಅನುದಾನದ ಬಳಕೆ ಕುರಿತು ಸಂಬಂದಿಸಿದ ಅಧಿಕಾರಿಗಳಿಂದ ವರದಿ ತರಿಸಿಕೊಂಡು ತನಿಖೆ ನಡೆಸಿ ಮುಂದಿನ ಕ್ರಮ ವಹಿಸುವುದಾಗಿ ಉಪ ವಿಭಾಗಾಧಿಕಾರಿ ಡಾ.ಕೆ.ಜಿ. ಕಾಂತರಾಜ್ ಹೇಳಿದ್ದಾರೆ.

ಉಪ ವಿಭಾಗೀಯ ಮಟ್ಟದ ಪರಿಶಿಷ್ಟ ಜಾತಿ, ಪಂಗಡಗಳ ( ದೌರ್ಜನ್ಯ ನಿಯಂತ್ರಣ) ಜಾಗೃತಿ ಉಸ್ತುವಾರಿ ಸಮಿತಿ ಸಭೆ

ಕನ್ನಡಪ್ರಭ ವಾರ್ತೆ, ತರೀಕೆರೆ

ವಿಶೇಷ ಘಟಕ ಯೋಜನೆಯಡಿ ತಾಲೂಕಿನಲ್ಲಿ 2020-21ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ ಪಂಗಡಗಳಿಗೆ ಬಿಡುಗಡೆಯಾಗಿರುವ ಅನುದಾನದ ಬಳಕೆ ಕುರಿತು ಸಂಬಂದಿಸಿದ ಅಧಿಕಾರಿಗಳಿಂದ ವರದಿ ತರಿಸಿಕೊಂಡು ತನಿಖೆ ನಡೆಸಿ ಮುಂದಿನ ಕ್ರಮ ವಹಿಸುವುದಾಗಿ ಉಪ ವಿಭಾಗಾಧಿಕಾರಿ ಡಾ.ಕೆ.ಜಿ. ಕಾಂತರಾಜ್ ಹೇಳಿದ್ದಾರೆ.

ಬುಧವಾರ ತಹಸೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಉಪ ವಿಭಾಗೀಯ ಮಟ್ಟದ ಪರಿಶಿಷ್ಟ ಜಾತಿ,ಪಂಗಡಗಳ( ದೌರ್ಜನ್ಯ ನಿಯಂತ್ರಣ) ಜಾಗೃತಿ ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಅನುಪಾಲನ ವರದಿ ವಿವರ ನೀಡುವಾಗ ದಲಿತ ಮುಖಂಡ ಸುನೀಲ್ ಮಾತನಾಡಿ 2020-21ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ಎಸ್.ಸಿ. ಎಸ್.ಪಿ.ಟಿ.ಎಸ್.ಪಿ. ಹಣವನ್ನು ಅರ್ಹ ಕೆಲಸಕ್ಕೆ ಬಳಕೆ ಮಾಡದೇ ಬೇರೆ ಕಡೆ ಐ ಮಾಸ್ಕ್‌ ಲೈಟುಗಳನ್ನು ಅಳವಡಿಸಲಾಗಿದೆ. ಎಸ್.ಸಿ.ಎಸ್.ಪಿ.ಹಣ ದುರ್ಬಳಕೆ ಕಂಡು ಬಂದಿರುವುದನ್ನು ಪರಿಶೀಲಿಸ ಬೇಕೆಂದು ತಿಳಿಸಿದರು. ಉಪವಿಭಾಗೀಯ ಮಟ್ಟದ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ನಿಯಂತ್ರಣ ಉಸ್ತುವಾರಿ ಸಮಿತಿ ಸದಸ್ಯ ಎಸ್.ಎನ್.ಸಿದ್ರಾಮಪ್ಪ ಮಾತನಾಡಿ ಅನುದಾನ ದುರ್ಬಳಕೆಯಾಗಿರುವುದು ಗಂಭೀರ ವಿಚಾರ, ಈ ಅನುದಾನ ಬಳಕೆ ಮಾಡಿರುವ ಪಿ.ಆರ್.ಇ.ಡಿ ಇಲಾಖೆಯಿಂದ ಸಂಪೂರ್ಣ ಮಾಹಿತಿ ಪಡೆದು ಉಪ ವಿಭಾಗಾಧಿಕಾರಿಗಳು ಸ್ಥಳ ತನಿಖೆ ನಡೆಸಿ ದುರ್ಬಳಕೆಯಾಗಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಯಿಸಿದರು.

ಮುಖಂಡರಾದ ಕೆ.ನಾಗರಾಜ್, ಓಂಕಾರಪ್ಪ, ಬಸವರಾಜ್, ಬಾಲರಾಜ್ ಬೆಂಬಲ ವ್ಯಕ್ತಪಡಿಸಿ ತನಿಖೆ ಕೈಗೊಳ್ಳಬೇಕೆಂದು ಆಗ್ರಹಸಿದರು.

ಛಲವಾದಿ ಸಮಾಜದ ತಾಲೂಕು ಅಧ್ಯಕ್ಷ ಎಸ್.ಕೆ.ಸ್ವಾಮಿ ಮಾತನಾಡಿ ಸುಂದರೇಶ್ ಬಡಾವಣೆಯಲ್ಲಿ ವಿದ್ಯುತ್ ಇಲಾಖೆ ರಸ್ತೆ ಪಕ್ಕದಲ್ಲಿ ಅಳವಡಿಸಿರುವ ಟಿಸಿ ಕಂಬಗಳ ಬಳಿ ನೀರು ಹರಿಯುವುದರಿಂದ ವಿದ್ಯುತ್ ಸೋರಿಕೆಯಾಗಿ ಸಾರ್ವಜನಿ ಕರಿಗೆ ಓಡಾಡಲು ತೊಂದರೆಯಾಗುತ್ತಿದೆ. ಕೂಡಲೇ ಪರಿಶೀಲಿಸಿ ಟಿಸಿಗಳನ್ನು ಸ್ಥಳಾಂತರಿಸ ಬೇಕೆಂದು ತಿಳಿಸಿದರು. ಎಚ್.ರಂಗಾಪುರ ಸ.ನಂ.13ಕ್ಕೆ ಸಂಬಂದಪಟ್ಟಂತೆ ಸ್ಮಶಾನದ ಬಗ್ಗೆ ಜಿಲ್ಲಾಧಿಕಾರಿಗೆ ಪತ್ರ ಬರೆದು ಸ್ಥಳ ನಿಗದಿ ಪಡಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.

ಮುಖಂಡ ಕೆ.ನಾಗರಾಜ್ ಮಾತನಾಡಿ ಹುರಳೀಹಳ್ಳಿ ಗ್ರಾಮಠಾಣ ಜಾಗದಲ್ಲಿ ಈ ಹಿಂದೆ ಪರಿಶಿಷ್ಟ ಜನಾಂಗದವರಿಗೆ ಮನೆಗಳ ಹಕ್ಕು ಪತ್ರ ನೀಡಿದ್ದು, ಸಂಬಂಸಿದ ಗ್ರಾಪಂ ನವರು ಪರಿಶೀಲಿಸಿ ಇ-ಸ್ವತ್ತು ಮಾಡಿಕೊಡುವಂತೆ ಒತ್ತಾಯಿಸಿದರು.

ದಸಂಸ ರಾಜ್ಯ ಸಂಘಟನಾ ಸಂಚಾಲಕ ತರೀಕೆರೆ ಎನ್.ವೆಂಕಟೇಶ್ ಮಾತನಾಡಿ ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣಕ್ಕೆ ಪುರಸಭೆಯಿಂದ ನಿವೇಶನಕೊಡಬೇಕೆಂದು ಒತ್ತಾಯಿಸಿ ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ನೀಡಿದರು.ಮುಖಂಡರಾದ ಓಂಕಾರಪ್ಪ, ಬಾಲರಾಜ್, ರಾಮು, ಸುನೀಲ್, ತಹಸೀಲ್ದಾರ್ ತನುಜಾ ಸವದತ್ತಿ, ಗ್ರೇಡ್-2 ತಹಸೀಲ್ದಾರ್ ನೂರುಲ್ ಹುದಾ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಡಾ.ಆರ್.ದೇವೇಂದ್ರಪ್ಪ, ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ರಾಮಚಂದ್ರ ನಾಯಕ್, ಗಿರೀಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.10ಕೆಟಿಆರ್.ಕೆ.6ಃ

ತರೀಕೆರೆಯಲ್ಲಿ ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಉಪ ವಿಭಾಗೀಯ ಮಟ್ಟದ ಪರಿಶಿಷ್ಟ ಜಾತಿ, ಪಂಗಡಗಳ ( ದೌರ್ಜನ್ಯ ನಿಯಂತ್ರಣ) ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಡಾ.ಆರ್.ದೇವೇಂದ್ರಪ್ಪ ಮತ್ತಿತರರು ಇದ್ದರು.

Share this article