ಕನ್ನಡಪ್ರಭ ವಾರ್ತೆ ಶಿರಾ
ಅವರು ಶುಕ್ರವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕೆಂಬುದು ಸರಕಾರದ ಉದ್ದೇಶವಾಗಿದ್ದು, ಇದರ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಹರಿಪ್ರಸಾದ್ ಮಾತನಾಡಿ, ಫೆ. ೨೦೨೬ ರಲ್ಲಿ ತಾಲೂಕಿನ ೭೫೯೮೨ ಫಲಾನುಭವಿಗಳಿಗೆ ೧೫.೨೦ ಕೋಟಿ ರು.ಗಳು ಜಮೆಯಾಗಿದೆ, ಗೃಹಲಕ್ಷ್ಮೀ ಫಲಾನುಭವಿಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಯನ್ವಯ ನಿಯಾಮಾನುಸಾರ ಪರಿಷ್ಕರಣೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ತಾಲ್ಲೂಕಿನಲ್ಲಿ ಹೊಸ ಪಡಿತರ ಚೀಟಿ ಕೋರಿ ೬೩೩೩ ಅನ್ ಲೈನ್ ಅರ್ಜಿಗಳು ಸ್ವೀಕೃತವಾಗಿದ್ದೂ, ಈ ಪೈಕಿ ೫೭೯೧ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಹಾಗೂ ೫೪೨ ಪರಿಶೀಲನೆ ಹಂತದಲ್ಲಿವೆ ಎಂದು ಆಹಾರ ಮತ್ತು ನಾಗರೀಕ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿ, ಆದಾಯ ತೆರಿಗೆ ಪಾವತಿದಾರರ ಹೊರತಾಗಿ ಬಿಪಿಎಲ್ ಕಾರ್ಡ್‌ಗಳ ರದ್ಧತಿಯ ಕುರಿತು ಸದಸ್ಯರು ಸಭೆಯಲ್ಲಿ ಪ್ರಸ್ತಾಪಿಸಿದಾಗ, ಅಂತಹ ಪ್ರಕರಣಗಳ ಕುರಿತು ಪೂರಕ ದಾಖಲಾತಿಗಳೊಂದಿಗೆ ನಮ್ಮ ಇಲಾಖೆಗೆ ಮಾಹಿತಿ ಸಲ್ಲಿಸಿದಲ್ಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಆಹಾರ ನಿರೀಕ್ಷಕಕರು ಸಭೆಗೆ ಉತ್ತರಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರೀಶ್ ಆರ್., ತಾಲೂಕು ಪಂಚಾಯಿತಿ ಯೋಜನಾಧಿಕಾರಿಗಳಾದ ರಂಗನಾಥ್ ಆರ್, ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.