ಮತದಾರರ ಪಟ್ಟಿ ನಿಖರವಾಗಿ ಪರಿಷ್ಕರಿಸಿ: ಪಿ.ರವಿಕುಮಾರ್

KannadaprabhaNewsNetwork |  
Published : Jun 17, 2026, 01:30 AM IST
೧೬ಕೆಎಂಎನ್‌ಡಿ-೩ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಕಾರ್ಯಾಗಾರದಲ್ಲಿ ಶಾಸಕ ಪಿ.ರವಿಕುಮಾರ್ ಮಾತನಾಡಿದರು. | Kannada Prabha

ಸಾರಾಂಶ

ಒಂದೇ ಹೆಸರಿನ ಅನೇಕ ವ್ಯಕ್ತಿಗಳು ಒಂದೇ ಗ್ರಾಮ ಅಥವಾ ಪ್ರದೇಶದಲ್ಲಿ ವಾಸಿಸುವ ಸಂದರ್ಭಗಳಲ್ಲಿ ಹೆಸರು, ತಂದೆಯ ಹೆಸರು, ವಿಳಾಸ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಸರಿಯಾಗಿ ದಾಖಲಿಸದಿದ್ದರೆ ಮತದಾರರ ಪಟ್ಟಿಯಲ್ಲಿ ಗೊಂದಲ ಉಂಟಾಗುವ ಸಾಧ್ಯತೆಗಳಿವೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮತದಾನವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕು. ಮತದಾರರ ಪಟ್ಟಿಯ ನಿಖರತೆ ಕಾಪಾಡುವುದು ಅತ್ಯಂತ ಮಹತ್ವದ ಜವಾಬ್ದಾರಿ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.

ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು.

ಬೂತ್ ಮಟ್ಟದ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಪ್ರತಿಯೊಬ್ಬ ಮತದಾರರ ಮಾಹಿತಿಯನ್ನು ಸಮರ್ಪಕವಾಗಿ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸಬೇಕು. ಒಂದೇ ಹೆಸರಿನ ಅನೇಕ ವ್ಯಕ್ತಿಗಳು ಒಂದೇ ಗ್ರಾಮ ಅಥವಾ ಪ್ರದೇಶದಲ್ಲಿ ವಾಸಿಸುವ ಸಂದರ್ಭಗಳಲ್ಲಿ ಹೆಸರು, ತಂದೆಯ ಹೆಸರು, ವಿಳಾಸ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಸರಿಯಾಗಿ ದಾಖಲಿಸದಿದ್ದರೆ ಮತದಾರರ ಪಟ್ಟಿಯಲ್ಲಿ ಗೊಂದಲ ಉಂಟಾಗುವ ಸಾಧ್ಯತೆಗಳಿವೆ ಎಂದರು.

ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಎಲ್ಲರೂ ಜಾಗರೂಕರಾಗಿ ಕಾರ್ಯನಿರ್ವಹಿಸಬೇಕು. ಈ ಜವಾಬ್ದಾರಿ ಕೇವಲ ಬಿಎಲ್‌ಒ ಸದಸ್ಯರಿಗಷ್ಟೇ ಸೀಮಿತವಾಗಿಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಹ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

ಪ್ರತಿಯೊಬ್ಬ ಅರ್ಹ ಮತದಾರನ ಹೆಸರು ಮತದಾರರ ಪಟ್ಟಿಯಲ್ಲಿ ಸಮರ್ಪಕವಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಕೆಪಿಸಿಸಿ ವತಿಯಿಂದ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಇದೇ ಮಾದರಿಯ ಜಾಗೃತಿ ಹಾಗೂ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದ್ದು, ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಗೆ ಈ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.

ಪ್ರಜಾಪ್ರಭುತ್ವದಲ್ಲಿ ಮತದಾನವು ಪ್ರತಿಯೊಬ್ಬ ಭಾರತೀಯ ನಾಗರಿಕನ ಅಮೂಲ್ಯ ಹಕ್ಕಾಗಿದೆ. ಯಾವುದೇ ಕಾರಣಕ್ಕೂ ಅರ್ಹ ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗದಂತೆ ಎಲ್ಲರೂ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕೆಂದು ಶಾಸಕರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಬಿಎಲ್‌ಒ-೨ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀಟ್ ಮರು ಪರೀಕ್ಷೆ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ: ಡಾ.ಕುಮಾರ
ತುಂಬಕೆರೆಯಲ್ಲಿ ಅಲೆಮಾರಿ ವಿದ್ಯಾರ್ಥಿಗಳಿಗೆ ಶೂ ವಿತರಣೆ