ದುರ್ಬಳಕೆ ತಡೆಯಲು ಗೃಹಲಕ್ಷ್ಮಿ ಯೋಜನೆ ಪರಿಸ್ಕೃರಣೆ

KannadaprabhaNewsNetwork |  
Published : Nov 18, 2026, 02:30 AM IST
ಜಿಲ್ಲಾಧಿಕಾರಿ ಸ್ನೇಹಲ್‌ | Kannada Prabha

ಸಾರಾಂಶ

ಮಹಿಳೆಯರ ಜೀವನಮಟ್ಟ ಸುಧಾರಣೆ ಹಾಗೂ ಕುಟುಂಬದ ಆರ್ಥಿಕ ಸ್ಥಿತಿಗೆ ನೆರವಾಗುತ್ತಿರುವ ಗೃಹಲಕ್ಷ್ಮಿ ಯೋಜನೆ ದುರ್ಬಳಕೆ ತಡೆಯಲು ಫಲಾನುಭವಿ ಪಟ್ಟಿ ಮರು ಪರಿಶೀಲಿಸಿ ಅರ್ಹರಿಗೆ ಮಾತ್ರ ಯೋಜನೆ ತಲುಪುವಂತೆ ಮಾಡಲಾಗುವುದು.

ಧಾರವಾಡ:

ಮಹಿಳೆಯರ ಜೀವನಮಟ್ಟ ಸುಧಾರಣೆ ಹಾಗೂ ಕುಟುಂಬದ ಆರ್ಥಿಕ ಸ್ಥಿತಿಗೆ ನೆರವಾಗುತ್ತಿರುವ ಗೃಹಲಕ್ಷ್ಮಿ ಯೋಜನೆ ದುರ್ಬಳಕೆ ತಡೆಯಲು ಫಲಾನುಭವಿ ಪಟ್ಟಿ ಮರು ಪರಿಶೀಲಿಸಿ ಅರ್ಹರಿಗೆ ಮಾತ್ರ ಯೋಜನೆ ತಲುಪುವಂತೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ನೇಹಲ್‌ ಆರ್‌ ಹೇಳಿದರು.

ಜಿಲ್ಲಾಧಿಕಾರಿ ನೂತನ ಸಭಾಭವನದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನಾ ಅರ್ಜಿಯ ಜಿಲ್ಲಾ ಮಟ್ಟದ ತರಬೇತುದಾರರ ತರಬೇತಿ ಉದ್ಘಾಟಿಸಿದ ಅವರು, ಗೃಹಲಕ್ಷ್ಮಿ ಯೋಜನೆಯು ಸರ್ಕಾರದ ಅತ್ಯುತ್ತಮ ಯೋಜನೆಯಾಗಿದ್ದು, ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಆನ್‌ಲೈನ್ ಮೂಲಕ ಸಲ್ಲಿಕೆಯಾಗುವ ಅರ್ಜಿಗಳನ್ನು ಅಚ್ಚುಕಟ್ಟಾಗಿ ಪರಿಶೀಲಿಸಿ, ಸರಿಯಾಗಿ ಭರ್ತಿ ಮಾಡಿಸುವ ಮೂಲಕ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಈ ಪ್ರಕ್ರಿಯೆ ಒಂದೂವರೆ ತಿಂಗಳು ನಡೆಯುವ ಸಾಧ್ಯತೆಯಿದೆ. ಪ್ರತಿ ಕ್ಷೇತ್ರದಲ್ಲಿ 70 ಸಾವಿರ ಮನೆಗಳಿಗೆ ಭೇಟಿ ನೀಡಬೇಕಾಗುತ್ತದೆ. ಈ ವೇಳೆ ಮನೆಗಳಲ್ಲಿ ಫಲಾನುಭವಿಗಳು ಲಭ್ಯವಾಗದಿದ್ದರೂ ಅವರ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕಾಗುತ್ತದೆ. ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವವರು ಆಗಾಗ್ಗೆ ಸ್ಥಳ ಬದಲಾಯಿಸುವುದರಿಂದ ಫಲಾನುಭವಿಗಳನ್ನು ಪತ್ತೆ ಹಚ್ಚುವುದು ತಾಂತ್ರಿಕವಾಗಿ ಕಷ್ಟಕರ. ಈ ಹಿನ್ನೆಲೆಯಲ್ಲಿ ಸ್ಥಳೀಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಸ್ಥಳೀಯ ಸಂಪರ್ಕ ಜಾಲದ ಸಹಕಾರ ಪಡೆಯುವುದು ಅಗತ್ಯವಾಗಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಆರ್. ಪಾಟೀಲ್ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಜಿಲ್ಲೆಯನ್ನು ರಾಜ್ಯದಲ್ಲಿ ಪ್ರಥಮ ಸ್ಥಾನಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸಿದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಮಹಾನಗರ ಪಾಲಿಕೆ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಹಾಗೂ ನೈಜ ಫಲಾನುಭವಿಗಳ ಹಿತಾಸಕ್ತಿ ರಕ್ಷಿಸುವುದು ಪ್ರಮುಖ ಉದ್ದೇಶ ಎಂದರು.

ಜಿಲ್ಲಾ ಯೋಜನಾ ವ್ಯವಸ್ಥಾಪಕ ಓಂಸ್ವಾಮಿ ಚಾವಡಿ ತರಬೇತಿ ನೀಡಿದರು. ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ಪ್ರೇಮನಾಥ ಚಿಕ್ಕತುಂಬಳ, ರತ್ನಾ ತೇಗೂರಮಠ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆನೀರು ಕಾಲುವೆಗೆ ಸಿಎಂ ಶಂಕುಸ್ಥಾಪನೆ
ಪ್ರೇಯಸಿ ಬಿಟ್ಟು ಹೋಗಿದ್ದಕ್ಕೆಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ