ಕನ್ನಡಪ್ರಭ ವಾರ್ತೆ ಬೇತಮಂಗಲ
ಹೋಬಳಿಯ ಪಾರಾಂಡ್ಲಹಳ್ಳಿ ಗ್ರಾಮದ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಎಲ್ಎ ಹಾಗೂ ಪಕ್ಷದ ಮುಖಂಡರ ಪ್ರಮುಖ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಯಾರೊಬ್ಬರೂ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಬಾರದು. ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪುವಂತೆ ಮಾಡಲು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ತಳಮಟ್ಟದಲ್ಲಿ ಶ್ರಮಿಸಬೇಕು ಎಂದು ಶಾಸಕರು ಕರೆ ನೀಡಿದರು.
ಸಭೆಯಲ್ಲಿ ಕೆಜಿಎಫ್ ಕ್ಷೇತ್ರದ ಪ್ರಮುಖ ಕಾಂಗ್ರೆಸ್ ಮುಖಂಡರಾದ ಅ.ಮು.ಲಕ್ಷ್ಮೀನಾರಾಯಣ, ವಿಜಯ ರಾಘುವ ರೆಡ್ಡಿ, ರಾಧಕೃಷ್ಣ ರೆಡ್ಡಿ, ಕಮ್ಮಸಂದ್ರ ನಾಗರಾಜ್, ಪದ್ಮನಾಭ ರೆಡ್ಡಿ, ಸುಬ್ಬಾರೆಡ್ಡಿ, ಕಳ್ಳಿಕುಪ್ಪ ವೆಂಕಟಾಚಲಪತಿ, ನಲ್ಲೂರು ಶಂಕರ್, ಸ್ಕೂಲ್ ವೆಂಕಟೇಶ್, ಹಂಗಳ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.