ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಶ್ರೀ ದೇವರಾಜ ಅರಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು, ವಿದ್ಯಾರ್ಥಿಗಳಲ್ಲಿ ಶ್ರದ್ಧೆ,ನಿಷ್ಠೆ ಮತ್ತು ನೈತಿಕ ಮೌಲ್ಯ ಇರಬೇಕು, ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು, ನಮ್ಮ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಬೇಕು ಎಂದು ಹೇಳಿದರು.ಲಯನ್ಸ್ ಪ್ರಾಂತೀಯ ಅಧ್ಯಕ್ಷ ಎಂ.ಆರ್.ಶ್ರೀನಿವಾಸ್ ಮಾತನಾಡಿ, ಈ ಬಗೆಯ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ. ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ ಎಂದರು.
ಕಾಲೇಜಿನ ಪ್ರಾಂಶುಪಾಲ ಮಹಂತೇಶಪ್ಪ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಆರ್ ನಾಗರಾಜು, ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಚಿಕ್ಕಣ್ಣ, ಅಂತಾರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲ ಧನಂಜಯ್, ಅಂತಾರಾಷ್ಟ್ರೀಯ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಜಿಯಾವುಲ್ಲಾ, ಐಟಿಐ ಕಾಲೇಜಿನ ಪ್ರಾಂಶುಪಾಲ ರವಿ, ಉಪನ್ಯಾಸಕರಾದ ಜ್ಯೋತಿ, ಎನ್.ರವಿಕುಮಾರ್, ಜೆ.ವಿ ಚಂದ್ರಶೇಖರ್, ಖಾದರ್ ಮತ್ತಿತರರು ಹಾಜರಿದ್ದರು.