ಹೊಸಪೇಟೆ: ಶ್ರೀಮಂತರು ಸಾಮೂಹಿಕ ಮದುವೆ ಮಾಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಬಂಡಿಹಳ್ಳಿಯಲ್ಲಿ ಭಾನುವಾರ ನಡೆದ ಸಾಮೂಹಿಕ ಮದುವೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಶ್ರೀಮಂತರು ಬಹಳಷ್ಟು ಜನರಿದ್ದಾರೆ. ಆದರೆ ಮಾಜಿ ಶಾಸಕ ಸಿರಾಜ್ ಶೇಕ್ ಅವರಂತೆ ಮಗನ ಮದುವೆಯಲ್ಲಿ ಸಾಮೂಹಿಕ ವಿವಾಹ ಮಾಡಿಸುವ ಗುಣ ಹೊಂದಬೇಕು. ಸಾಮೂಹಿಕ ಮದುವೆ ಮಾಡಿಸಿದರೆ ಬಡವರಿಗೆ ಅನುಕೂಲ ಆಗಲಿದೆ ಎಂದರು.
ಸಂಸದ ಈ. ತುಕಾರಾಂ ಮಾತನಾಡಿ, ಸಮಾಜದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಸಿದ್ಧಾಂತ ಪಾಲನೆ ಮಾಡಬೇಕು. ದಕ್ಷಿಣ ಭಾರತದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಮುಖ್ಯಮಂತ್ರಿ ಆಗಿದ್ದಾರೆ ಎಂದರು.
ಮಾಜಿ ಶಾಸಕ ಸಿರಾಜ್ ಶೇಕ್ ಮಾತನಾಡಿ, ಸಾಮೂಹಿಕ ಮದುವೆಯಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕಬಹುದು. ಮಗನ ಆರತಕ್ಷತೆಯಲ್ಲಿ ಸಾಮೂಹಿಕ ಮದುವೆ ಮಾಡಿಸುವ ಇರಾದೆಯೊಂದಿಗೆ ಮಠಾಧೀಶರ ಬಳಿ ಚರ್ಚಿಸಿದೆ. ಅವರು ಅಸ್ತು ಅಂದ ಬಳಿಕ ಆಯೋಜನೆ ಮಾಡಿದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.