ದಾಬಸ್‍ಪೇಟೆ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ- 48ರ ಬೂದಿಹಾಲ್ ಗ್ರಾಮದ ಬೆಂಗಳೂರು- ತುಮಕೂರು ರಸ್ತೆಯಲ್ಲಿ ನಡೆದಿದೆ. ತ್ಯಾಮಗೊಂಡ್ಲು ಹೋಬಳಿಯ ಕುಲುವನಹಳ್ಳಿ ಗ್ರಾಮದ ನಿವಾಸಿ ಸದಾಶಿವ (29) ಮೃತಪಟ್ಟ ಬೈಕ್ ಸವಾರನಾಗಿದ್ದು, ಸರ್ವೀಸ್ ರಸ್ತೆಯಲ್ಲಿ ಬೈಕ್ ನಲ್ಲಿ ಬರುವಾಗ ಯಮಸ್ವರೂಪಿಯಂತೆ ಬಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.