ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ಬೈಕಿನಲ್ಲಿ ಸಂಚಾರ

KannadaprabhaNewsNetwork |  
Published : Sep 16, 2024, 01:46 AM IST
ನಗರ ಪೊಲೀಸ್ ಠಾಣೆ ಎದುರು ಭಾನುವಾರ ಪ್ರತಿಭಟನೆ ನಡೆಸಿದ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ಬೈಕ್‌ನಲ್ಲಿ ಸಂಚಾರ ನಡೆಸಿದ ಯುವಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಚಿಕ್ಕಮಗಳೂರು ನಗರದಲ್ಲಿ ಯುವಕರಿಬ್ಬರು ಭಾನುವಾರ ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ನಗರಾದ್ಯಂತ ಸಂಚಾರ ನಡೆಸಿದ ಘಟನೆ ನಡೆದಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ನಗರದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಚಿಕ್ಕಮಗಳೂರು ನಗರದಲ್ಲಿ ಯುವಕರಿಬ್ಬರು ಭಾನುವಾರ ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ನಗರಾದ್ಯಂತ ಸಂಚಾರ ನಡೆಸಿದ ಘಟನೆ ನಡೆದಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ನಗರದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸೋಮವಾರ ಈದ್ ಮಿಲಾದ್ ಮೆರವಣಿಗೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಮುಸ್ಲಿಂ ಯುವಕರು ಪ್ಯಾಲೆಸ್ತೇನ್ ಧ್ವಜ ಹಿಡಿದು ಓಡಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರಿನ ಕೆ.ಎಂ.ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿಯೇ ಯುವಕರು ಧ್ವಜ ಹಿಡಿದು ಓಡಾಟ ನಡೆಸಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರೊಬ್ಬರು ವೀಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ಓಡಾಡುವ ಮೂಲಕ ದೇಶ ದ್ರೋಹದ ಕೆಲಸ ಮಾಡಿರುವ ಯುವಕರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಜಿಲ್ಲಾ ಸಹ ಸಂಚಾಲಕ ಶ್ಯಾಮ್ ವಿ. ಗೌಡ, ವಿಎಚ್‌ಪಿ ಮುಖಂಡ ದಿಲೀಪ್‌ ಶೆಟ್ಟಿ, ನಗರಾಧ್ಯಕ್ಷ ಕೃಷ್ಣ, ಅಮಿತ್, ರಾಜೇಶ್, ಮಂಜು, ಕಿಟ್ಟಿ, ಜಾನಕಿ ರಾಮ್

ಹಾಗೂ ಕಾರ್ಯಕರ್ತರು ಇದ್ದರು.

ಪೋಟೋ ಫೈಲ್‌ ನೇಮ್‌ 15 ಕೆಸಿಕೆಎಂ 6ನಗರ ಪೊಲೀಸ್ ಠಾಣೆ ಎದುರು ಭಾನುವಾರ ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ಬೈಕ್‌ನಲ್ಲಿ ಸಂಚಾರ ನಡೆಸಿದ ಯುವಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!