ಕನ್ನಡಪ್ರಭವಾರ್ತೆ ನವದೆಹಲಿ
ಗಡ್ಕರಿ ಅವರ ಸಕಾರಾತ್ಮಕ ಸ್ಪಂದನೆ ಬಗ್ಗೆ ಸಂತಸ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು, ಉಪನಗರ ವರ್ತುಲ ರಸ್ತೆ ಯೋಜನೆ (Satellite Town Ring Road-STRR) 2013ರಲ್ಲಿಯೇ ಚಾಲನೆ ಪಡೆದಿದ್ದು, ನೆನೆಗುದಿಗೆ ಬಿದ್ದಿತ್ತು. ಬೆಂಗಳೂರು ಸುತ್ತಮುತ್ತ ಇರುವ 8 ಕೈಗಾರಿಕಾ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ. ಈ ಯೋಜನೆ ಕಾರ್ಯಗತಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಸಾಕಷ್ಟು ಪ್ರಯತ್ನಿಸಿದ್ದಾರೆ. ಈ ಬಗ್ಗೆ ಅವರು ಬರೆದಿದ್ದ ಪತ್ರವನ್ನು ಗಡ್ಕರಿ ಅವರಿಗೆ ನೀಡಲಾಯಿತು ಎಂದು ತಿಳಿಸಿದರು.
ಯಾವ್ಯಾವ ಪ್ರದೇಶಕ್ಕೆ ಸಂಪರ್ಕ:4- 6 ಪಥಗಳ ಈ ಯೋಜನೆಯು ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ ಹಾಗೂ ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್ ಹೈವೇಯನ್ನು ಕೂಡುತ್ತದೆ. ಜತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ. ಕೈಗಾರಿಕೆಗಳಿಗೆ ಸರಕು ಸಾಗಿಸುವ ಯಾವುದೇ ಬೃಹತ್ ವಾಹನ ಬೆಂಗಳೂರು ನಗರದೊಳಕ್ಕೆ ಪ್ರವೇಶ ಮಾಡದಂತೆ ತಡೆಯುವುದೇ ಈ ಯೋಜನೆ ಉದ್ದೇಶವಾಗಿದೆ.