ಕಳೆದ ವರ್ಷ ಗಣೇಶಮೂರ್ತಿ ವಿಸರ್ಜನೆ ವೇಳೆ ಗಲಭೆ: ಎಚ್ಚೆತ್ತ ಪೊಲೀಸ್ ಇಲಾಖೆ

KannadaprabhaNewsNetwork |  
Published : Sep 08, 2026, 02:00 AM IST
7ಕೆಎಂಎನ್ ಡಿ20 | Kannada Prabha

ಸಾರಾಂಶ

ಮದ್ದೂರು ನಗರದಲ್ಲಿ ಕಳೆದ ವರ್ಷ ಗೌರಿ ಗಣೇಶ ಹಬ್ಬದಲ್ಲಿ ಗಣೇಶಮೂರ್ತಿ ವಿಸರ್ಜನೆ ವೇಳೆ ಉಂಟಾಗಿದ್ದ ಗಲಭೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಜಿಲ್ಲಾ ಪೊಲೀಸ್ ಇಲಾಖೆ ಪಟ್ಟಣದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ನಗರದಲ್ಲಿ ಕಳೆದ ವರ್ಷ ಗೌರಿ ಗಣೇಶ ಹಬ್ಬದಲ್ಲಿ ಗಣೇಶಮೂರ್ತಿ ವಿಸರ್ಜನೆ ವೇಳೆ ಉಂಟಾಗಿದ್ದ ಗಲಭೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಜಿಲ್ಲಾ ಪೊಲೀಸ್ ಇಲಾಖೆ ಪಟ್ಟಣದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾ ರಾಣಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ತಂಡ ಗಲಭೆ ನಡೆದ ಸಿದ್ಧಾರ್ಥ ನಗರರ ಬಡಾವಣೆ, ಸುನ್ನಿ ಚೌಕ ಮಸೀದಿ, ನಗರಕೆರೆ ವೃತ್ತ, ಹಳೆ ಎಂ.ಸಿ.ರಸ್ತೆಯ ಮಾರ್ಗದ ಜಾಮಿಯಾ ಮಸೀದ್ ಸೇರಿದಂತೆ ಹಲವು ಸ್ಥಳಗಳಿಗೆ ಭೇಟಿ ನೀಡಿ ಗಣೇಶಗಳ ವಿಸರ್ಜನೆಗಾಗಿ ಮೆರವಣಿಗೆ ನಡೆಸುವ ಮಾರ್ಗಗಳಲ್ಲಿ ಸೂಕ್ತ ಪೊಲೀಸ್ ಭದ್ರತಾ ವ್ಯವಸ್ಥೆ ಕಲ್ಪಿಸುವ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.

ಜಾಮಿಯಾ ಮಸೀದ್ ಮುಂಭಾಗದ ಅಂಗಡಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿಗಳ ಕಾರ್ಯನಿರ್ವಹಣೆ ಪರಿಶೀಲಿಸಿದರು. 2025 ಸೆಪ್ಟೆಂಬರ್ 8ರಂದು ನಡೆದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಕಲ್ಲುತುರಾಟ ಮತ್ತು ಘರ್ಷಣೆ ನಡೆದು ಹಲವರು ಗಾಯಗೊಂಡಿದ್ದರು. ಈ ಘಟನೆ ನಂತರ ಪೊಲೀಸರು 30ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಕರ್ತವ್ಯ ಲೋಪ ಆರೋಪದ ಮೇಲೆ ವೃತ್ತ ನಿರೀಕ್ಷಕರನ್ನು ಅಮಾನತ್ತು ಮಾಡಿದ್ದನ್ನು ಸ್ಮರಿಸಬಹುದು.ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅನುಮತಿ ಇಲ್ಲ: ಕೇಂದ್ರ ಪರಿಷತ್ ಸ್ಪಷ್ಟನೆ

ಮದ್ದೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಹಿಂದಿನ ಆಡಳಿತ ಮಂಡಳಿ ಅವಧಿಯಲ್ಲಿ ನಾಮನಿರ್ದೇಶನಗೊಂಡ ಯಾವುದೇ ಸ್ಥಾನ, ಹುದ್ದೆಗಳು ಅಸ್ತಿತ್ವದಲ್ಲಿರದ ಕಾರಣ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಅನುಮತಿ ಕೋರುವ, ಅನುಮತಿ ನೀಡುವ ಪ್ರಶ್ನಯೇ ಉದ್ಭವಿಸುವುದಿಲ್ಲ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಆಡಳಿತಾಧಿಕಾರಿ ಕೆ.ಎ.ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸೆ.17ರಂದು ತಾಲೂಕು ಸಾಹಿತ್ಯ ಸಮ್ಮೇಳನ ಆಯೋಜಿಸಲು ಪೂರ್ವ ಸಿದ್ಧತೆ ನಡೆಸಲಾಗುತ್ತಿತ್ತು. ಅನುಮತಿ ನೀಡುವಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದ್ದರು. ಈ ಸಂಬಂಧ ಜಿಲ್ಲಾ ಕಸಾಪ ಆಡಳಿತಾಧಿಕಾರಿ ಕೇಂದ್ರ ಪರಿಷತ್ತಿನ ಆಡಳಿತಾಧಿಕಾರಿಗಳ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಕೆ.ಎಂ.ದಯಾನಂದ್ ಸಮ್ಮೇಳನ ನಡೆಸಲು ಅನುಮತಿ ನೀಡಲಾಗುವುದಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಮೆರಿಕನ್ನಡಿಗರ ಮಹೋತ್ಸವಕ್ಕೆ ಭಾವಪೂರ್ಣ ಮಂಗಳ
ಮರುಳಸಿದ್ದೇಶ್ವರ ಸನ್ನಿಧಿಯಲ್ಲಿ ಸಚಿವ ಬಸವಂತಪ್ಪ