ಇತ್ತೀಚಿನ ದಿನಗಳಿಂದ ಪೋಕ್ಸೋ ಪ್ರಕರಣಗಳು ಹೆಚ್ಚಳ: ಎಸ್.ಆರ್.ನಂದಿನಿ

KannadaprabhaNewsNetwork |  
Published : Nov 17, 2026, 01:45 AM IST
16ಕೆಎಂಎನ್ ಡಿ22 | Kannada Prabha

ಸಾರಾಂಶ

ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳು ಹೆಚ್ಚಾಗಿ ಪೋಕ್ಸೋ ಕಾಯ್ದೆ ಬಗ್ಗೆ ಹೆಚ್ಚಿನ ಅರಿವು ಪಡೆದುಕೊಳ್ಳಬೇಕು. ಪುರುಷರ. ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ, ಶೈಕ್ಷಣಿಕ ಹಂತದಲ್ಲಿ ಶಾಲೆಗಳ ಶಿಕ್ಷಕರು ಮತ್ತು ಪೋಷಕರು ಅಪ್ರಾಪ್ತ ಹೆಣ್ಣು ಮಕ್ಕಳ ಕುರಿತು ಹೆಚ್ಚಿನ ಎಚ್ಚರ ವಹಿಸಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ನ್ಯಾಯಾಂಗ ವ್ಯವಸ್ಥೆಯಲ್ಲಿ ಮಕ್ಕಳ ಹಕ್ಕುಗಳ ಕುರಿತು ಹಲವು ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ಜೆಎಂಎಫ್ ಸಿ ನ್ಯಾಯಾಲಯದ 2ನೇ ಹೆಚ್ಚುವರಿ ನ್ಯಾಯಾಧೀಶ ಎಸ್.ಆರ್.ನಂದಿನಿ ಹೇಳಿದರು.

ಪಟ್ಟಣದ ಕೇಂಬ್ರಿಡ್ಜ್ ಕಾನ್ವೆಂಟ್‌ನಲ್ಲಿ ಶನಿವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಹಯೋಗದಲ್ಲಿ ನಡೆದ ಮಕ್ಕಳ ದಿನಾಚರಣೆ ಮತ್ತು ರಸ್ತೆ ಸುರಕ್ಷತೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಿಂದ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿರುವುದು ವಿಷಾದನೀಯ ಎಂದರು.

ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳು ಹೆಚ್ಚಾಗಿ ಪೋಕ್ಸೋ ಕಾಯ್ದೆ ಬಗ್ಗೆ ಹೆಚ್ಚಿನ ಅರಿವು ಪಡೆದುಕೊಳ್ಳಬೇಕು. ಪುರುಷರ. ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ, ಶೈಕ್ಷಣಿಕ ಹಂತದಲ್ಲಿ ಶಾಲೆಗಳ ಶಿಕ್ಷಕರು ಮತ್ತು ಪೋಷಕರು ಅಪ್ರಾಪ್ತ ಹೆಣ್ಣು ಮಕ್ಕಳ ಕುರಿತು ಹೆಚ್ಚಿನ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಪ್ರತಿ ಮಗುವಿನ ಆರೋಗ್ಯಕರ ಬೆಳವಣಿಗೆ ಮೂಲಕ ಅವರನ್ನು ಮಾನಸಿಕ, ದೈಹಿಕವಾಗಿ ಸದೃಢರನ್ನಾಗಿ ಮತ್ತು ಶಿಕ್ಷಣವಂತರನ್ನಾಗಿ ಮಾಡುವುದು ಪೋಷಕರು ಮತ್ತು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದರು.

ದ್ವಿಚಕ್ರ ವಾಹನಗಳ ಸವಾರರು ಇತ್ತೀಚಿನ ದಿನಗಳಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುತ್ತಿರುವುದು ನ್ಯಾಯಾಲಯದ ಗಮನಕ್ಕೆ ಬರುತ್ತಿದೆ. ಇದಕ್ಕೆ ಸಂಚಾರಿ ಪೊಲೀಸರ ನಿರ್ಲಕ್ಷ ಧೋರಣೆ ಕಾರಣವಿರಬಹುದು ಎಂದು ಅಸಹನೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕಾನೂನು ಸಲಹೆಗಾರರಾದ ವಕೀಲೆ ಮಂಜುಳಾ ಮತ್ತು ವಿಜಯಲಕ್ಷ್ಮಿ ಸಂಪನ್ಮೂಲ ಭಾಷಣ ಮಾಡಿದರು. ಕಾನ್ವೆಂಟ್ ನ ಮುಖ್ಯ ಶಿಕ್ಷಕ ಮುದ್ದಲಿಂಗೇಗೌಡ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ , ಕಾರ್ಯದರ್ಶಿ ಎಂ.ಜೆ.ಸುಮಂತ್, ಮುಖ್ಯೋಪಾಧ್ಯಾಯ ಎಚ್.ಪಿ.ರವಿ ನಾರಾಯಣ ಹಾಗೂ ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹3,600 ನೀಡದಿದ್ದರೆ ನಾಳೆಯಿಂದ ಸಚಿವರ ಮನೆ ಎದುರು ಧರಣಿ
ಬ್ಯಾಡಗಿ ಯೂನಿಯನ್ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ: ಎರಡು ಕ್ಯಾಬಿನ್ ಸುಟ್ಟು ಭಸ್ಮ