ಹುಬ್ಬಳ್ಳಿ:
ಮಕ್ಕಳಿಂದ ಹಿಡಿದು ವಯೋವೃದ್ಧರ ವರೆಗೆ ಜ್ವರದ ಭಾದೆ ಕಾಣಿಸಿಕೊಳ್ಳುತ್ತಿದ್ದು, ಕೆಲವರಲ್ಲಿ ತೀವ್ರ ಜ್ವರದ ಲಕ್ಷಣಗಳು ಕಂಡುಬಂದರೆ, ಇನ್ನು ಕೆಲವರಿಗೆ ಜ್ವರದೊಂದಿಗೆ ನೆಗಡಿ, ಕೆಮ್ಮು, ವಾಂತಿ ಹಾಗೂ ದೇಹದಲ್ಲಿ ತೀವ್ರ ನಿಶ್ಶಕ್ತಿ ಕಾಣಿಸಿಕೊಳ್ಳುತ್ತಿದೆ. ಮನೆಯ ಒಬ್ಬರಿಗೆ ಜ್ವರ ಕಾಣಿಸಿಕೊಂಡ ಬಳಿಕ ಇತರ ಸದಸ್ಯರಿಗೂ ಸೋಂಕು ಹರಡುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.
14 ಮಂದಿಗೆ ಎಚ್1ಎನ್1 ದೃಢ:ನಗರದ ಕೆಎಂಸಿಆರ್‌ಐನಲ್ಲಿ ಜ್ವರದ ಹಿನ್ನೆಲೆಯಲ್ಲಿ ನಡೆಸಲಾಗುತ್ತಿರುವ ಪರೀಕ್ಷೆಗಳಲ್ಲಿ ಎಚ್1ಎನ್1 ಪ್ರಕರಣಗಳು ಪತ್ತೆಯಾಗುತ್ತಿವೆ. ಇದುವರೆಗೆ ಕಿಮ್ಸ್‌ನಲ್ಲಿ 14 ಮಂದಿಗೆ ಎಚ್1ಎನ್1 ಸೋಂಕು ದೃಢಪಟ್ಟಿದೆ. ಜುಲೈ ತಿಂಗಳಲ್ಲಿ 29 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, ಐವರಲ್ಲಿ ಸೋಂಕು ದೃಢಪಟ್ಟಿತ್ತು. ಆಗಸ್ಟ್ ತಿಂಗಳಲ್ಲಿ ಈವರೆಗೆ 39 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, 9 ಮಂದಿಯಲ್ಲಿ ಎಚ್1ಎನ್1 ಪಾಸಿಟಿವ್ ಬಂದಿದೆ. ಆದರೆ, ಯಾರಲ್ಲೂ ತೀವ್ರಸ್ವರೂಪ ಕಂಡುಬಂದಿಲ್ಲ. ಚಿಕಿತ್ಸೆ ಪಡೆದು ಮನೆಗೆ ಮರಳುತ್ತಿದ್ದಾರೆ.