ಆದಿಚುಂಚನಗಿರಿ ಮಠದಲ್ಲಿ ಶ್ರೀಗಳಿಂದ ಧಾರ್ಮಿಕ ಪೂಜಾ ಕೈಂಕರ್ಯ

KannadaprabhaNewsNetwork |  
Published : Jan 16, 2024, 01:46 AM IST
15ಕೆಎಂಎನ್ ಡಿ35 | Kannada Prabha

ಸಾರಾಂಶ

ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ 7 ದಿನಗಳ ಕಾಲ ನಡೆಯುತ್ತಿರುವ ಸಮಾರಂಭದ 5ನೇ ದಿನವಾದ ಜ.16 ರಂದು ಯೋಗಿ-ಜೋಗಿ ಸಂಗಮ ಕಾರ್ಯಕ್ರಮ ನಡೆಯಲಿದೆ. ಹಾಗೇ ಹಲಗೂರು ಸಮೀಪದ ಪುರುದೊಡ್ಡಿ ಗ್ರಾಮದ ಶ್ರೀಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಧನುರ್ಮಾಸದ ಕೊನೆ ದಿನದ ಪ್ರಯುಕ್ತ ಹಾಗೂ ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಸೋಮವಾರ ವಿಶೇಷ ಪೂಜೆ ನಡೆದು ಭಕ್ತರಿಗೆ ಪ್ರಸಾದ ವಿತರಣೆ

ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕಿನ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಭೈರವೈಕ್ಯ ಶ್ರೀಡಾ.ಬಾಲಗಂಗಾಧರನಾಥ ಸ್ವಾಮೀಜಿಗಳ 79ನೇ ಜಯಂತ್ಯುತ್ಸವ ಹಾಗೂ 11ನೇ ವರ್ಷದ ಸಂಸ್ಮರಣಾ ಮಹೋತ್ಸವದ ಪ್ರಯುಕ್ತ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಸೋಮವಾರ ಬೆಳಗ್ಗೆ ಹೋಮ ಹವನಾದಿ ಸೇರಿದಂತೆ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು.

ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಸೇರಿದಂತೆ ವಿವಿಧ ಶಾಖಾ ಮಠಗಳ ಶ್ರೀಗಳು ನೂರಾರು ಭಕ್ತರು ಪಾಲ್ಗೊಂಡಿದ್ದರು.

ಜ.16ರಂದು ಯೋಗಿ-ಜೋಗಿ ಸಂಗಮ:

ಶ್ರೀಮಠದಲ್ಲಿ 7 ದಿನಗಳ ಕಾಲ ನಡೆಯುತ್ತಿರುವ ಸಮಾರಂಭದ 5ನೇ ದಿನವಾದ ಜ.16 ರಂದು ಯೋಗಿ-ಜೋಗಿ ಸಂಗಮ ಕಾರ್ಯಕ್ರಮ ನಡೆಯಲಿದೆ.

ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಿವೃತ್ತ ನ್ಯಾಯಾಧೀಶ ಹುಲುವಾಡಿ ಜಿ.ರಮೇಶ್ ಉದ್ಘಾಟಿಸುವರು. ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ, ಹಿರಿಯ ಪತ್ರಕರ್ತ ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುವರು. ನಾಡಿನ ವಿವಿಧೆಡೆಗಳಿಂದ ಆಗಮಿಸುವ ಯೋಗಿ-ಜೋಗಿಗಳ ಸಂಗಮವಾಗಲಿದೆ.

ಶನೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಸಾದ ವಿತರಣೆಹಲಗೂರು:ಪುರುದೊಡ್ಡಿ ಗ್ರಾಮದ ಶ್ರೀಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಧನುರ್ಮಾಸದ ಕೊನೆ ದಿನದ ಪ್ರಯುಕ್ತ ಹಾಗೂ ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಸೋಮವಾರ ವಿಶೇಷ ಪೂಜೆ ನಡೆದು ಭಕ್ತರಿಗೆ ಪ್ರಸಾದ ವಿತರಿಸಲಾಯಿತು.ಡಿಸೆಂಬರ್ 16ರಿಂದ ಪ್ರಾರಂಭವಾದ ಧನುರ್ಮಾಸ ಜ.15ರ ವರೆಗೂ ದೇಗುಲದಲ್ಲಿ ವಿಶೇಷ ಪೂಜೆಗಳು ನಡೆದವು. ಸಂಕ್ರಾಂತಿ ನಿಮಿತ್ತ ದೇವರ ಮೂರ್ತಿಯನ್ನು ಶುಚಿಗೊಳಿಸಿ ವಿವಿಧ ಪುಷ್ಪಗಳಿಂದ ಅಲಂಕರಿಸಿ ದೇವರಿಗೆ ಮಹಾ ಮಂಗಳಾರತಿ ನಂತರ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು ಎಂದು ದೇವಸ್ಥಾನದ ಅರ್ಚಕ ಶೈಲೇಂದ್ರ ತಿಳಿಸಿದರು.ತೊರೆಕಾಡನಹಳ್ಳಿಯ ಸ್ವಾಮಿ ಮಾತನಾಡಿ, ಶನೇಶ್ವರಸ್ವಾಮಿ ಮಹಾ ಶಕ್ತಿ ದೇವರಾಗಿದ್ದು ಸುತ್ತಮುತ್ತಲಿನ ಗ್ರಾಮದವರು ಪೂಜೆ ಪುನಸ್ಕಾರಗಳನ್ನು ಭಕ್ತಿ ಭಾವದಿಂದ ಆಚರಿಸುತ್ತಾರೆ. ವರ್ಷದ ಮೊದಲನೇ ಹಬ್ಬ ಮಕರ ಸಂಕ್ರಾಂತಿಯ ದಿನ ರೈತರು ತಾವು ಸಾಕಿದ ದನ ಕರುಗಳನ್ನು ತೊಳೆದು ಗುಲಾಂಪಟೆ ಹಾಗೂ ಬಣ್ಣ ಬಳಿದು ಶೃಂಗರಿಸಿ ಕಿಚ್ಚಾಯಿಸುವುದನ್ನು ನೋಡುವುದೇ ಒಂದು ವಿಶೇಷವಾಗಿರುತ್ತದೆ ಎಂದರು.ವೈ.ಬಿ.ಕುಮಾರಸ್ವಾಮಿ ಮಾತನಾಡಿ, ಹಲವು ವರ್ಷಗಳಿಂದ ಮಾದಪ್ಪ ಅರ್ಚಕರು ದೇಗುಲದಲ್ಲಿ ಪೂಜಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದರು. ಈಗ ಅವರ ಪುತ್ರ ಶೈಲೇಂದ್ರ ಪೂಜೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮಸ್ಥರು ಎಲ್ಲರೂ ಬಂದು ಪೂಜೆ ಸಲ್ಲಿಸಿ ತಮ ಇಷ್ಟಾರ್ಥವನ್ನು ನೆರವೇರಿಸುವಂತೆ ಎಂದು ದೇವರಲ್ಲಿ ಪ್ರಾರ್ಥಿಸಿ ಪೂಜೆ ಸಲ್ಲಿಸುತ್ತಾರೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ