ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶಯದಲ್ಲಿ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ನಡೆದ 163ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನೀರಿನ ಮೌಲ್ಯದ ಬಗ್ಗೆ ಪ್ರತಿಯೊಬ್ಬರಿಗೂ ಅರಿವಿರಬೇಕು. ಆ ಮೂಲಕ ಜಲ ಮೂಲಗಳ ಸಂರಕ್ಷಣೆ ಅಗತ್ಯವಾಗಿದೆ ಎಂದರು.ಗ್ಯಾರೆಂಟಿ ಅನುಷ್ಠಾನ ಸಮಿತಿ ಸದಸ್ಯ ಕೆ.ಎಸ್. ಕೃಷ್ಣೇಗೌಡ ಮಾತನಾಡಿ, ನದಿ ತೊರೆಗಳ ಸ್ವಚ್ಛತಾ ಕಾಯಕ ಪ್ರತಿ ಪಂಚಾಯಿತಿ ಮಟ್ಟದಲ್ಲಿ ನಡೆಯಬೇಕಾಗಿದೆ. ಈ ಸಂಬಂಧ ಶಾಸಕರು ಸರ್ಕಾರದ ಮೂಲಕ ಗಮನ ಸೆಳೆಯಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರು ಹಾಗೂ ಕಾವೇರಿ ನದಿ ಸ್ವಚ್ಛತಾ ಅಭಿಯಾನದ ಸಂಚಾಲಕರೂ ಆಗಿರುವ ಎಂ.ಎನ್. ಚಂದ್ರಮೋಹನ್ ಪ್ರಾಸ್ತಾವಿಕ ಮಾತನಾಡಿದರು.
ಅರ್ಚಕ ಕೃಷ್ಣಮೂರ್ತಿ ಭಟ್ ಅವರಿಂದ ಅಷ್ಟೋತ್ತರ ಕುಂಕುಮಾರ್ಚನೆ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಡಿ ಆರ್ ಸೋಮಶೇಖರ್, ಮಂಡೆಪಂಡ ಬೋಸ್ ಮೊಣ್ಣಪ್ಪ, ಧರಣಿ ಸೋಮಯ್ಯ, ಪದ್ಮಾ ಪುರುಷೋತ್ತಮ್, ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಕೆ ಕೆ ನಾಗರಾಜ ಶೆಟ್ಟಿ, ನಿರ್ದೇಶಕರಾದ ಕೆ ಜೆ ಶಿವರಾಜ್, ಮಹಮ್ಮದ್ ಮುಸ್ತಾಫಾ, ಶಂಸುದ್ದೀನ್, ಹೆಚ್ ವಿ ವಿನೋದ್, ಎಚ್ ಸಿ ಜಯಪ್ರಕಾಶ್ ಇದ್ದರು.