ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ರಾಜ್ಯದ ನದಿಗಳು

KannadaprabhaNewsNetwork |  
Published : Jul 22, 2024, 01:24 AM ISTUpdated : Jul 22, 2024, 12:51 PM IST
ಯಕ್ಸಂಬಾ-ದಾನವಾಡ ಸೇತುವೆ ಬಳಿ ಉಕ್ಕಿ ಹರಿಯುತ್ತಿರುವ ದೂಧಗಂಗಾ ನದಿ.  | Kannada Prabha

ಸಾರಾಂಶ

ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರೆದಿರುವುದರಿಂದ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿನ ಪಂಚ ನದಿಗಳಿಗೆ 1,05,723 ಕ್ಯುಸೆಕ್ ನೀರು ಹರಿದು ಬರುತ್ತಿದೆ.

  ಚಿಕ್ಕೋಡಿ :  ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರೆದಿರುವುದರಿಂದ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿನ ಪಂಚ ನದಿಗಳಿಗೆ 1,05,723 ಕ್ಯುಸೆಕ್ ನೀರು ಹರಿದು ಬರುತ್ತಿದೆ. ನದಿಗಳ ನೀರಿನ ಮಟ್ಟ ಭಾನುವಾರ ಮತ್ತೆ ಸುಮಾರು 2 ಅಡಿಯಷ್ಟು ಎರಿಕೆಯಾಗಿರುವುದರಿಂದ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಕೃಷ್ಣಾ ಮತ್ತು ದೂಧಗಂಗಾ ಸೇರಿದಂತೆ ಉಪನದಿಗಳಿಗೆ ನೀರು ಭಾರೀ ನೀರು ಹರಿದು ಬರುತ್ತಿರುವುದರಿಂದ ನದಿಗಳು ಉಕ್ಕಿ ಹರಿಯುತ್ತಿವೆ, ನದಿ ತೀರದ ರೈತರು ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸುತ್ತಿದ್ದಾರೆ.

ದೂಧಗಂಗಾ ನದಿಗೆ 24,640 ಕ್ಯುಸೆಕ್ ಮತ್ತು ಕೃಷ್ಣಾ ನದಿಗೆ 81,083 ಕ್ಯುಸೆಕ್ ಹೀಗೆ ಒಟ್ಟು 1,05,723 ಕ್ಯುಸೆಕ್ ನೀರು ರಾಜ್ಯಕ್ಕೆ ಹರಿದು ಬರುತ್ತಿದ್ದು, ದೂಧಗಂಗಾ ಮತ್ತು ವೇದಗಂಗಾ ನದಿಗಳ ಸಮೀಪದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಬೆಳೆಗಳು ಜಲಾವೃತಗೊಳ್ಳುತ್ತಿವೆ.

ವೇದಗಂಗಾ ನದಿಯ ಭೋಜವಾಡಿ-ಶಿವಾಪುರವಾಡಿ, ಬಾರವಾಡ-ಕುನ್ನೂರ, ಸಿದ್ನಾಳ-ಅಕ್ಕೋಳ ಮತ್ತು ಜತ್ರಾಟ-ಭಿವಸಿ ದೂಧಗಂಗಾ ನದಿಯ ಕಾರದಗಾ-ಭೋಜ ಮತ್ತು ಮಲಿಕವಾಡ-ದತವಾಡ ಮತ್ತು ಕೃಷ್ಣಾ ನದಿಯ ಮಾಂಜರಿ-ಸವದತ್ತಿ ಬ್ಯಾರೇಜ್‌ಗಳು ಜಾಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ. ಸದಲಗಾ-ಬೋರಗಾಂವ, ಬೇಡಕಿಹಾಳ-ಬೋರಗಾಂವ ಮತ್ತು ಯಕ್ಸಂಬಾ-ದಾನವಾಡ ಸೇತುವೆಗಳಿಂದ ಸಂಚಾರ ಎಂದಿನಂತೆ ಪ್ರಾರಂಭವಿದ್ದು, ಇದೆ ರೀತಿ ನೀರಿನ ಹರಿವು ಹೆಚ್ಚಾದಲ್ಲಿ ಎರಡು ದಿನಗಳಲ್ಲಿ ಮುಳುಗಡೆಯಾಗುವ ಸಾಧ್ಯತೆಗಳಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ